ಚಿತ್ರಕಲಾ ಪರಿಷತ್ತಿನಲ್ಲಿ ಕಲಾಕಾರರ ಕಲಾಕೃತಿಗಳ ಅನಾವರಣ : ಎಸ್‌ ನಾರಾಯಣ್‌ ಚಾಲನೆ

ದೇಶದ ಎಲ್ಲಾ ಭಾಗಗಳಿಂದ ಆಗಮಿಸಿರುವ ಕಲಾಕಾರರ ಕಲಾಕೃತಿಗಳು ಎಲ್ಲರ ಮೈ ಮನ ಸೆಳೆಯುತ್ತಿವೆ. ಇಂತಹ ಅಭೂತಪೂರ್ವ ಪ್ರದರ್ಶನದಲ್ಲಿ ಭಾಗಿಯಾಗಿದ್ದು ತುಂಬಾ ಸಂತಸವಾಗುತ್ತಿದೆ ಎಂದು ಕನ್ನಡ ಚಲನಚಿತ್ರ ನಟ ಹಾಗೂ ನಿರ್ದೇಶಕ ಎಸ್‌ ನಾರಾಯಣ್‌ ಅಭಿಪ್ರಾಯಪಟ್ಟರು.

ನಗರದ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಆಯೋಜಿಸಲಾಗಿದ್ದ ದ ಸೋಕ್‌ ಮಾರ್ಕೇಟ್‌ ಗೆ ಚಾಲನೆ ನೀಡಿ ಅವರು ಮಾತನಾಡಿದರು. ಚಿತ್ರಕಲಾ ಪರಿಷತ್ತಿನಲ್ಲಿ ದೇಶದ ವಿವಿಧ ಭಾಗಗಳಿಂದ ಆಗಮಿಸಿರುವ ಕರಕುಶಲ ಕಾರರು ತಯಾರಿಸಿರುವ ಚಳಿಗಾಲದ ವಿಶೇಷ ಉಡುಪುಗಳು ಎಲ್ಲರ ಗಮನ ಸೆಳೆಯುವಂತಿವೆ. ಕಾಶ್ಮೀರದ ಶಾಲುಗಳನ್ನು ನೋಡಿ ಸಂತಸ ವ್ಯಕ್ತಪಡಿಸಿದರು.

ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷರಾದ ಡಾ ಬಿ ಎಲ್‌ ಶಂಕರ್‌ ಅವರು ಮಾತನಾಡಿ, ದೇಶದ ಕರಕುಶಲ ಕರ್ಮಿಗಳಿಗೆ ವೇದಿಕೆ ಒದಗಿಸುವ ನಿಟ್ಟಿನಲ್ಲಿ ಚಿತ್ರಕಲಾ ಪರಿಷತ್ತು ಮೊದಲಿನಿಂದಲೂ ಕಾರ್ಯಕ್ರಮ ರೂಪಿಸಿಕೊಂಡು ಬರುತ್ತಿದೆ. ನಮ್ಮ ಆವರಣದಲ್ಲಿ ಇಂತಹ ಕಾರ್ಯಚಟುವಟಿಕೆಗಳಿಗೆ ಅಗತ್ಯ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದ ಆಯೋಜಕರಾದ ಅಫ್ತಾಬ್‌ ಮಾತನಾಡಿ, ದೇಶದ ವಿವಿಧ ಭಾಗಗಳ ಕರಕುಶಲ ಕರ್ಮಿಗಳಿಂದ ತಯಾರಿಸಲ್ಪಟ್ಟಿರುವ ಚಳಿಗಾಲದ ಉಡುಪುಗಳ ವಿಶೇಷ ಸಂಗ್ರಹವನ್ನು ನಗರದ ಜನರ ಮುಂದಿಡುವ ದೃಷ್ಟಿಯಿಂದ, ನವೆಂಬರ್‌ 22 ರಿಂದ ಡಿಸೆಂಬರ್‌ 1 ರ ವರೆಗೆ ನಗರದ ಚಿತ್ರಕಲಾ ಪರಿಷತ್ತಿನಲ್ಲಿ ವಿಶೇಷ ಪ್ರದರ್ಶನ ಹಾಗೂ ಮಾರಾಟ ಮೇಳ “ದ ಸೋಕ್‌ – ಮಾರ್ಕೇಟ” ನ್ನು ಆಯೋಜಿಸಲಾಗಿದೆ.

ದ ಗ್ರಾಂಡ್‌ ಫ್ಲಿಯಾ – ಚಿತ್ತಾರ ಸಹಯೋಗದಲ್ಲಿ ನಡೆಸುತ್ತಿರುವ ಈ ಪ್ರದರ್ಶನ ಹಾಗೂ ಮಾರಾಟ ಮೇಳದಲ್ಲಿ ದೇಶದ ಎಲ್ಲಾ ಭಾಗಗಳಿಂದಲೂ ಆಗಮಿಸಲಿರುವ ಕರಕುಶಲ ಕರ್ಮಿಗಳು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲಿದ್ದಾರೆ. ಕಾಶ್ಮೀರಿ ಶಾಲುಗಳು, ಮಣಿಪುರಿ ಹಾಗೂ ಈಶಾನ್ಯ ರಾಜ್ಯಗಳ ಕಲಾಕಾರರು ತಯಾರಿಸಿರುವ ಉತ್ಪನ್ನಗಳು ಎಲ್ಲರ ಗಮನ ಸೆಳೆಯಲಿವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ನಿರ್ದೇಶಕಿ ನಂದಿನ ನಾಗರಾಜ್‌ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ನವೆಂಬರ್‌ 22 ರಿಂದ ಡಿಸೆಂಬರ್‌ 1 ರವರೆಗೆ ಪ್ರತಿದಿನ ಬೆಳಗ್ಗೆ 11 ರಿಂದ ಸಂಜೆ 7 ಗಂಟೆಯವರೆಗೆ ಈ ಪ್ರದರ್ಶನ ಮತ್ತು ಮಾರಾಟ ಮೇಳ ಇರಲಿದೆ. ಈ ಮೇಳದ ಪ್ರಮುಖ ಉದ್ದೇಶ ಕುಶಲಕರ್ಮಿಗಳನ್ನು ಉತ್ತೇಜಿಸಿ ಅವರಿಗೊಂದು ಮಾರುಕಟ್ಟೆ ಕಲ್ಪಿಸುವುದಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights