ಶಬರಿಮಲೆಗೆ ಮಹಿಳೆಯರ ಪ್ರವೇಶ ಅರ್ಜಿ ಪ್ರಕರಣ : ಸಪ್ತ ನ್ಯಾಯಮೂರ್ತಿಗಳ ವಿಸ್ತೃತ ಪೀಠಕ್ಕೆ ವರ್ಗಾವಣೆ

ಶಬರಿಮಲೆಗೆ ಮಹಿಳೆಯರ ಪ್ರವೇಶ ಪ್ರಕರಣದ ವಿಚಾರಣೆ 7 ಮಂದಿ ನ್ಯಾಯಾಧೀಶರ ವಿಸ್ತೃತ ಪೀಠಕ್ಕೆ ವರ್ಗಾವಣೆಯಾಗಿದೆ.

ಕೇರಳದ ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಹೇರಿದ್ದ ನಿರ್ಬಂಧವನ್ನು ತೆರವುಗೊಳಿಸಿದ್ದ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಸಲ್ಲಿಸಲಾದ ಮೇಲ್ಮನವಿ ಅರ್ಜಿ ಪ್ರಕರಣವನ್ನು ಸಪ್ತ ನ್ಯಾಯಮೂರ್ತಿಗಳ ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಲಾಗಿದೆ.

ಸುಪ್ರೀಂನಿಂದ ಐತಿಹಾಸಿಕ ತೀರ್ಪು 2018 ರ ಸೆಪ್ಟೆಂಬರ್ ನಲ್ಲಿ ಸುಪ್ರೀಂ ಕೋರ್ಟ್ ಶಬರಿಮಲೆಗೆ ಮಹಿಳೆಯರು ಪ್ರವೇಶಿಸಲು ಅನುಮತಿ ನೀಡಿತ್ತು. ಆದರೆ ಈ ತೀರ್ಪನ್ನು ಮರುಪರಿಶೀಲಿಸಬೇಕು ಎಂದು ಒಟ್ಟು 56 ಅರ್ಜಿಗಳು ಸಲ್ಲಿಕೆಯಾಗಿದ್ದವು. ಅವೆಲ್ಲವುಗಳ ವಿಚಾರಣೆಯನ್ನು ಕೋರ್ಟು ಮುಗಿಸಿದ್ದು, ಇಂದು ತೀರ್ಪು ನೀಡಬೇಕಿತ್ತು.

ಆದರೆ ಮುಖ್ಯ ನ್ಯಾ. ರಂಜನ್ ಗೊಗೋಯ್ ನೇತೃತ್ವದ ಸಾಂವಿಧಾನಿಕ ಪೀಠದ ಮೂವರು ನ್ಯಾಯಾಧೀಶರು ಈ ವಿಚಾರದ ಬಗ್ಗೆ ವಿಸ್ತೃತ  ಚರ್ಚೆ ನಡೆಯಬೇಕು ಎಂದು ತೀರ್ಪು ನೀಡಿದರೆ ನ್ಯಾ. ಚಂದ್ರಚೂಡ್ ಮತ್ತು ನ್ಯಾ. ನಾರಿಮನ್ ವಿಸ್ತೃತ  ಪೀಠಕ್ಕೆ ಬೇಡ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಶಬರಿಮಲೆ ವಿಚಾರ ಕೇವಲ ಹಿಂದೂ ಧರ್ಮದ ದೇವಾಲಯಕ್ಕೆ ಮಾತ್ರ ಸೀಮಿತವಲ್ಲ. ಮುಸ್ಲಿಂ ಧರ್ಮದ ಮಹಿಳೆ ಮಸೀದಿ ಪ್ರವೇಶಕ್ಕೂ ಇದು ಅನ್ವಯವಾಗುತ್ತದೆ. ಪಾರ್ಸಿ ಧರ್ಮಕ್ಕೂ ಅನ್ವಯವಾಗುತ್ತದೆ. ಹೀಗಾಗಿ ಈ ಪ್ರಕರಣದ ಬಗ್ಗೆ ದೀರ್ಘ ವಿಚಾರಣೆ ನಡೆಸುವ ಅಗತ್ಯವಿದೆ ಎಂದು ಪೀಠ ಅಭಿಪ್ರಾಯಪಟ್ಟಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights