ಸ್ಯಾಂಡಲ್ ವುಡ್ ನ ಮೂರು ತಾರೆಯರ ಹುಟ್ಟುಹಬ್ಬ : ಅಭಿಮಾನಿಗಳಿಗೆ ಸಡಗರ ಸಂಭ್ರಮ

ಚಂದನವನದಲ್ಲಿಂದು ಸಾಹಸಸಿಂಹ ವಿಷ್ಣುವರ್ಧನ್, ರಿಯಲ್ ಸ್ಟಾರ್ ಉಪೇಂದ್ರ, ನಟಿ ಶೃತಿ ಅವರ ಹುಟ್ಟುಹಬ್ಬದ ಸಡಗಡರ, ಸಂಭ್ರಮ. ಮೂವರ ಜನ್ಮ ದಿನಾಚರಣೆಯನ್ನು ಸಡಗರದಿಂದ ಆಚರಿಸುತ್ತಿದ್ದಾರೆ ಅಭಿಮಾನಿಗಳು.

ಚಂದದ ಗೊಂಬೆ ಶೃತಿ ಅವರು 44ನೇ ವಸಂತಕ್ಕೆ ಕಾಲಿಟ್ಟರೆ, ಅಭಿಮಾನಿಗಳ ಆರಾಧ್ಯ ದೈವ ಸಾಹಸಸಿಂಹ ವಿಷ್ಣುವರ್ಧನ್ ಅವರ 69ನೇ ಜಯಂತೋತ್ಸವ ಹಾಗೂ ಸ್ಯಾಂಡಲ್‍ವುಡ್‍ನ ರಿಯಲ್ ಸ್ಟಾರ್ ಉಪೇಂದ್ರ 52ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

ಸ್ಯಾಂಡಲ್‍ವುಡ್‍ನ ರಿಯಲ್ ಸ್ಟಾರ್ ಉಪೇಂದ್ರ ಅಭಿಮಾನಿಗಳು ಹಾಗೂ ಸಿನಿಮಾ ತಾರೆಯರು ಉಪ್ಪಿಗೆ ಜನ್ಮದಿನದ ಶುಭಾಶಯ ಕೋರಿದ್ದಾರೆ. ಅಲ್ಲದೆ ಎಲ್ಲೆಡೆ ಉಪ್ಪಿ ಅಭಿಮಾನಿಗಳು ಸಡಗರ ಸಂಭ್ರಮದಿಂದ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾರೆ.

ಕಳೆದ ವರ್ಷದಂತೆ ಈ ವರ್ಷ ಕೂಡ ವಿಷ್ಣುದಾದ ಅವರ ಹುಟ್ಟುಹಬ್ಬವನ್ನ 2 ಕಡೆ ಆಚರಿಸಲಾಗುತ್ತಿದೆ. ವಿಷ್ಣುವರ್ಧನ್ ನಿವಾಸದಲ್ಲಿ ಭಾರತಿ ವಿಷ್ಣುವರ್ಧನ್ ಮತ್ತು ಕುಟುಂಬ ಸದಸ್ಯರು ಹುಟ್ಟುಹಬ್ಬ ಆಚರಿಸಿದರೆ, ಅಭಿಮಾನಿಗಳು ಅಭಿಮಾನ್ ಸ್ಟುಡಿಯೋದಲ್ಲಿ ದಾದಗೆ ನಮಿಸಲಿದ್ದಾರೆ.

ಇತ್ತ ಚಂದದ ಗೊಂಬೆ ಶೃತಿ ಅಭಿಮಾನಿಗಳು ಹಾಗೂ ಸಿನಿತಾರೆಯರು ನಟಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ ಶುಭಹಾರೈಸಿದ್ದಾರೆ. ವಿಷ್ಣುದಾದ ದೈಹಿಕವಾಗಿ ನಮ್ಮ ಜೊತೆ ಇಲ್ಲವಾದರೂ ಅಭಿಮಾನಿಗಳ ಮನದಲ್ಲಿ ಅವರು ಎಂದಿಗೂ ಅಮರ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights