ಹಾಕಿದ ಹದಿನೈದು ದಿನಕ್ಕೆ ಕಿತ್ತು ಬಂತು ರಸ್ತೆಗೆ ಹಾಕಿದ್ದ ಡಾಂಬರು..!

ಕಳಪೆ ಕಾಮಗಾರಿಯಿಂದಾಗಿ ರಸ್ತೆಗೆ ಹಾಕಿದ್ದ ಡಾಂಬರು ಹದಿನೈದು ದಿನಕ್ಕೆ ಕಿತ್ತು ಬಂದ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ವಡಕೆ ಶೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕಳಪೆ ರಸ್ತೆ ಕಾಮಗಾರಿಯನ್ನು ವಡಕೆ ಶೆಟ್ಟಹಳ್ಳಿ ಗ್ರಾಮಸ್ಥರು ಬಯಲಿಗೆಳೆದಿದ್ದಾರೆ. ಕಳಪೆ ಕಾಮಗಾರಿಯನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಕ್ಕೆ ಹರಿಯ ಬಿಟ್ಟಿದ್ದಾರೆ.

೩೪ ಲಕ್ಷ ವೆಚ್ಚದಲ್ಲಿ ಗ್ರಾಮಕ್ಕೆ ಮಾಡಲಾಗಿದ್ದ ಡಾಂಬರು ರಸ್ತೆ ಕಳಪೆ ಕಾಮಗಾರಿಯಿಂದ ಕಿತ್ತು ಬರ್ತಿರೋದನ್ನ ಗ್ರಾಸ್ಥರು ವಿಡಿಯೋ ಮಾಡಿದ್ದಾರೆ.

ಕಳೆಪೆ ಕಾಮಗಾರಿ ನಡೆಸಿದ ಗುತ್ತಿಗೆದಾರನ ವಿರುದ್ದ ಆಕ್ರೋಶ ಹೊರ ಹಾಕಿದ್ದಾರೆ. ಕೂಡಲೆ ಸಂಬಂಧಪಟ್ಟವರು ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights