ಆಗ್ರಾ-ಮೊರಾದಾಬಾದ್ ಹೆದ್ದಾರಿಯಲ್ಲಿ ಅಪಘಾತ : 10 ಜನ ಮೃತ- 25ಕ್ಕೂ ಹೆಚ್ಚು ಮಂದಿಗೆ ಗಾಯ!

ಆಗ್ರಾ-ಮೊರಾದಾಬಾದ್ ಹೆದ್ದಾರಿಯಲ್ಲಿ ರಸ್ತೆ ಅಪಘಾತ ಸಂಭವಿಸಿದ್ದು 10 ಮಂದಿ ಸಾವನ್ನಪ್ಪಿದ್ದಾರೆ. 25 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆಂದು ಯುಪಿ ಸಿಎಂ ಘೋಷಿಸಿದ್ದಾರೆ.

ಆಗ್ರಾ-ಮೊರಾದಾಬಾದ್ ಹೆದ್ದಾರಿಯಲ್ಲಿ ಶನಿವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ 10 ಜನರು ಸಾವನ್ನಪ್ಪಿದ್ದು 25 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ದಟ್ಟವಾದ ಮಂಜಿನ ಮಧ್ಯೆ ಬಸ್, ಟ್ರಕ್ ಮತ್ತು ಮೂರನೇ ವಾಹನ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.

“ವಿಧಿವಿಜ್ಞಾನ ತಂಡ ಸ್ಥಳಕ್ಕೆ ದಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಬಹುತೇಕ ಪೂರ್ಣಗೊಂಡಿದೆ. ಮೂರು ವಾಹನಗಳು ಒಂದಕ್ಕೊಂದು ಡಿಕ್ಕಿ ಹೊಡೆದಿವೆ. ಇದಕ್ಕೆ ಕಾರಣ ಮಂಜು ಎಂದು ಪ್ರತ್ಯಕ್ಷದರ್ಶಿಗಳು ಹೇಳುತ್ತಾರೆ” ಎಂದು ಮೊರಾದಾಬಾದ್ ಎಸ್‌ಎಸ್‌ಪಿ ತಿಳಿಸಿದೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೃತರ ರಕ್ತಸಂಬಂಧಿಗಳಿಗೆ ತಲಾ 2 ಲಕ್ಷ ರೂ. ಮತ್ತು ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳಿಗೆ ಸಮರ್ಪಕ ವೈದ್ಯಕೀಯ ಚಿಕಿತ್ಸೆ ಲಭ್ಯವಾಗುವಂತೆ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights