ರಾಜ್ಯಕ್ಕೆ 10 ಸಾವಿರ ಕೋಟಿ ರೂ. ವಿಶೇಷ ಪ್ಯಾಕೇಜ್ ನೀಡುವಂತೆ ಮೋದಿಗೆ ಬಿಎಸ್‌ವೈ ಪತ್ರ!

ಕರ್ನಾಟಕದಲ್ಲಿ ಕಳೆದ ಎರಡು ತಿಂಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ರಾಜ್ಯದ ಹಲವು ಭಾಗದ ಜನರು ಅತಿವೃಷ್ಟಿ ಅನುಭವಿಸುತ್ತಿದ್ದು, ಆಸ್ತಿ-ಪಾಸ್ತಿ, ಬೆಳೆ ನಾಶವಾಗಿದೆ. ಹಾಗಾಗಿ ರೈತರು ಮತ್ತು ನಷ್ಟ ಅನುಭವಿಸಿದವರಿಗೆ ಪರಿಹಾರ ನೆರವು ನೀಡುವ ಉದ್ದೇಶದಿಂದ ರಾಜ್ಯಕ್ಕೆ 10 ಸಾವಿರ ಕೋಟಿ ರೂ. ವಿಶೇಷ ಪ್ಯಾಕೇಜ್‌ ನೀಡುವಂತೆ ಪ್ರದಾನಿ ಮೋದಿಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಪತ್ರ ಬರೆದಿದ್ದಾರೆ.

ರಾಜ್ಯದಲ್ಲಿ ಎದುರಾಗಿರುವ ಭೀಕರ ಪರಿಸ್ಥಿತಿಯನ್ನು ಪರಿಗಣಿಸಿ ಪ್ರವಾಹದಿಂದ ಹಾನಿಗೊಳಗಾದ ಕುಟುಂಬಗಳು, ರೈತರು, ಪರಿಹಾರ, ಪುನರ್ವಸತಿ ನಿರ್ಮಾಣ ಕ್ರಮಳಿಗಾಗಿ 10,000 ಕೋಟಿ ರುಪಾಯಿಗಳ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ಸಿಎಂ ಮನವಿ ಮಾಡಿದ್ದಾರೆ.

ರಾಜ್ಯದ ಕರಾವಳಿ, ಮಲೆನಾಡು ಹಾಗೂ ಉತ್ತಕ ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಆಗಸ್ಟ್‌ನಿಂದ ಇಲ್ಲಿಯವರೆಗೆ ಸುರಿದಿರುವ ಮಳೆಯಿಂದಾಗಿ 30 ಸಾವಿರಕ್ಕೂ ಹೆಚ್ಚು ಮನೆಗಳು ಹಾನಿಗೊಳಗಾಗಿದ್ದು, 6 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ. ರಸ್ತೆ, ಕಾಲುವೆಗಳು, ಮೇಲ್ಸೇತುವೆ, ಶಾಲೆ, ಅಂಗನವಾಡಿ ಕಟ್ಟಡ, ವಿದ್ಯುತ್‌ ಸಂಪರ್ಕ ಸೇರಿದಂತೆ ಮತ್ತಿತರ ಮೂಲ ಸೌಕರ್ಯ ವ್ಯವಸ್ಥೆ ಹಾಳಾಗಿದೆ. ಇಟ್ಟು 21,609 ಕೋಟಿ ಮೌಲ್ಯದ ಆಸ್ತಿ-ಪಾಸ್ತಿ ನಷ್ಟವಾಗಿರುವುದಾಗಿ ಅಂದಾಜಿಸಲಾಗಿದೆ ಎಂದು ಪತ್ರದಲ್ಲಿ ಬರೆದಿದ್ದಾರೆ.

ಹಾಗಾಗಿ ತುರ್ತು ನೆರೆ ಪರಿಹಾರ ಕಾರ್ಯಗಳಿಗೆ ರಾಜ್ಯಕ್ಕೆ 10 ಸಾವಿರ ಕೋಟಿ ರೂ ವಿಶೇಷ ಪ್ಯಾಕೇಜ್ ನೀಡಬೇಕು ಎಂದು ಕೇಳಿದ್ದಾರೆ.

ಇದನ್ನೂ ಓದಿ: ಉತ್ತರ ಕರ್ನಾಟಕದಲ್ಲಿ ಭಾರಿ ಮಳೆ: ಮತ್ತೆ ಪ್ರವಾಹ ಭೀತಿ – ರೆಡ್‌ ಅಲರ್ಟ್‌!

ಸಂಪೂರ್ಣ ಹಾನಿಯಾಗಿರುವ ಮನೆಗಳ ಪುನರ್ ನಿರ್ಮಾಣಕ್ಕೆ ಪ್ರತಿ ಮನೆಗೆ ರೂ.5 ಲಕ್ಷ ಪರಿಹಾರ ಹಾಗೂ ಹೆಚ್ಚಿನ ಹಾನಿ ಮತ್ತು ಭಾಗಶಃ ಹಾನಿಗೊಳಗಾದ ಮನೆಗಳಿಗೆ ರೂ.3 ಲಕ್ಷ, ಭಾಗಶಃ ಹಾನಿಗೊಳಗಾಗಿರುವ ಮನೆಗಳ ದುರಸ್ತಿಗೆ ರೂ.50 ಸಾವಿರ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಆದರೆ, 2019 ಮಚ್ಚು 2020 ಎರಡೂ ವರ್ಷ ಅತಿವೃಷ್ಟಿ ಹಾಗೂ ಪ್ರವಾಹದಿಂದಾಗಿ ಹೆಚ್ಚಿನ ಆರ್ಥಿಕ ಹೊರೆ ಅನುಭವಿಸುವಂತಾಗಿದೆ. ಕೋವಿಡ್ ನಿಂದಾಗಿ ಉಂಟಾಗಿರುವ ಪರಿಸ್ಥಿತಿ ನಿಭಾಯಿಸಲು ಎಸ್’ಡಿಆರ್’ಎಫ್ ಅಡಿಯ ಭಾಗಶಃ ಅನುದಾನ ಹಾಗೂ ರಾಜ್ಯ ಬಜೆಟ್ ನ ಸಾಕಷ್ಟು ಅನುದಾನವನ್ನು ಬಳಸಲಾಗಿದೆ. ಹೀಗಾಗಿ ರಾಜ್ಯ ಅತ್ಯಂತ ಕಠಿಣ ಆರ್ಥಿಕ ಪರಿಸ್ಥಿತ ಎದುರಿಸುತ್ತಿದೆ. ಹೀಗಾಗಿ ರೂ.10 ಸಾವಿರ ಕೋಟಿ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆಂದು ವರದಿಗಳು ತಿಳಿಸಿವೆ.


ಇದನ್ನೂ ಓದಿ: ಬೆಂಗಳೂರಿನಲ್ಲಿ ಜಲಪ್ರಳಯ : 100 ಮಿ.ಮೀ ಮಹಾಮಳೆಗೆ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ…

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights