ಆಕ್ಸಿಜನ್‌ಗಾಗಿ ನಡುರಸ್ತೆಯಲ್ಲಿ ಪೊಲೀಸರ ಎದುರು ಮಂಡಿಯೂರಿ ಬೇಡಿಕೊಂಡ ಯುವಕ; ವಿಡಿಯೋ ವೈರಲ್‌ – ಪರಿಸ್ಥಿತಿ ಬಗ್ಗೆ ಅಸಮಾಧಾನ!

ವ್ಯಕ್ತಿಯೊಬ್ಬ ನಡು ರಸ್ತೆಯಲ್ಲಿ ಪೊಲೀಸರ ಮುಂದೆ ಮಂಡಿಯೂರಿ ಕುಳಿತು ಆಕ್ಸಿಜನ್‌ಗಾಗಿ ಬೇಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ದೇಶದ ಪರಿಸ್ಥಿತಿಯ ಬಗ್ಗೆ ಅಸಮಾಧಾನ ವ್ಯಕ್ತವಾಗುತ್ತಿದೆ.

ಈ ಬಗ್ಗೆ ಸ್ಥಳೀಯ ಮಾಧ್ಯಮಗಳು ವರದಿ ಮಾಡಿದ್ದು, ಆ ವರದಿಗಳ ಪ್ರಕಾರ, ಆತ ತನ್ನ ತಾಯಿಗೆ ನೀಡಲಾಗಿದ್ದ ಆಕ್ಸಿಜನ್‌ ಸಿಲಿಂಡರ್‌ಅನ್ನು ವಾಪಸ್‌ ತೆಗೆದುಕೊಂಡು ಹೋಗದಂತೆ ಪೊಲೀಸರಲ್ಲಿ ಮನವಿ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.

ಆದರೆ, ಆತನ ತಾಯಿಗೆ ನೀಡಲಾಗಿದ್ದ ಆಕ್ಸಿಜನ್‌ ಸಿಲಿಂಡರ್‌ ಖಾಲಿಯಾಗಿತ್ತು. ಅದಕ್ಕಾಗಿ ಅದನ್ನು ನಾವು ತೆಗೆದುಕೊಂಡು ಹೋಗುತ್ತಿದ್ದೆವು. ಆದರೆ, ಆತ ಆ ವೇಳೆ ಈ ರೀತಿಯಲ್ಲಿ ಮನವಿ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ವೈರಲ್‌ ಆಗಿರುವ ವಿಡಿಯೋವನ್ನು ಯೂತ್‌ ಕಾಂಗ್ರೆಸ್‌ ತನ್ನ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ಇದು ನಿಜಕ್ಕೂ ಹೃದಯ ವಿದ್ರಾವಕ ವಿಡಿಯೋ. ಉತ್ತರ ಪ್ರದೇಶದ ಆಗ್ರಾದಲ್ಲಿ ತನ್ನ ತಾಯಿಗೆ ನೀಡಿರುವ ಆಕ್ಸಿಜನ್ ಸಿಲಿಂಡರ್ ತೆಗೆದುಕೊಳ್ಳದಂತೆ ಒಬ್ಬ ವ್ಯಕ್ತಿಯು ಪೊಲೀಸರ ಮುಂದೆ ಬೇಡಿಕೊಳ್ಳುತ್ತಿದ್ದಾನೆ. ಇದು ಪೊಲೀಸರು ಎಸಗಿರುವ ಅಮಾನವೀಯ ಕೃತ್ಯ ಎಂದು ಕಿಡಿ ಕಾರಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆಗ್ರ ಪೊಲೀಸರು, ಘಟನೆಗೆ ಸಂಬಂಧಿಸಿದಂತೆ ಹರಿದಾಡುತ್ತಿರುವ ಸುದ್ದಿಗಳು ಸುಳ್ಳು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜನರು ಸಾಯಬೇಕು ಎಂದು ಕೇಂದ್ರ ಸರ್ಕಾರ ಬಯಸಿದಂತೆ ಕಾಣುತ್ತಿದೆ: ದೆಹಲಿ ಹೈಕೋರ್ಟ್‌

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights