18 ವ‍ರ್ಷ ಮೇಲ್ಪಟ್ಟವರು ತಮ್ಮ ಧರ್ಮವನ್ನು ಆಯ್ಕೆ ಮಾಡಿಕೊಳ್ಳಲು ಸ್ವತಂತ್ರರು: ಸುಪ್ರೀಂ ಕೋರ್ಟ್‌

ಧಾರ್ಮಿಕ ಸ್ವಾತಂತ್ರ್ಯ ಅಡಿಯಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟವರು ತಾವು ಯಾವ ಧರ್ಮವನ್ನು ಅನುಸರಿಸಬೇಕು ಎಂಬ ಆಯ್ಕೆ ಮಾಡಿಕೊಳ್ಳುವ ಅವಕಾಶವನ್ನು ಹೊಂದಿದ್ದಾರೆ. ತಮಗಿಚ್ಚಿಸಿದ ಧರ್ಮವನ್ನು ಆಯ್ಕೆ ಮಾಡಿಕೊಳ್ಳಲು ಸ್ವಾತಂತ್ರವಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಮಾಟ ಮತ್ತು ಧಾರ್ಮಿಕ ಮತಾಂತರವನ್ನು ನಿಯಂತ್ರಿಸಲು ಕೇಂದ್ರ ಮತ್ತು ರಾಜ್ಯಗಳಿಗೆ ನಿರ್ದೇಶನಗಳನ್ನು ನೀಡಬೇಕೆಂದು ಕೋರಿ ವಕೀಲ ಅಶ್ವಿನಿ ಉಪಾಧ್ಯಾಯ ಅವರ ಪರವಾಗಿ ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣ ಅವರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿ, ಮನವಿಯನ್ನು ಸುಪ್ರೀಂ ಕೋರ್ಟ್‌ ತಿರಸ್ಕರಿಸಿದೆ. ಈ ಬಗ್ಗೆ ವಿಚಾರಣೆ ವೇಳೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳಾದ ಆರ್.ಎಫ್.ನಾರಿಮನ್, ಬಿ ಆರ್ ಗವಾಯಿ ಮತ್ತು ಹೃಷಿಕೇಶ ರಾಯ್ ಅವರ ನ್ಯಾಯಪೀಠವು, “ಆರ್ಟಿಕಲ್ 32 ರ ಅಡಿಯಲ್ಲಿ ಇದು ಯಾವ ರೀತಿಯ ರಿಟ್ ಅರ್ಜಿ? 18 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಯು ತನಗೆ ಬೇಕಾದ ಧರ್ಮವನ್ನು ಆಯ್ಕೆ ಮಾಡಲು ಅವಕಾಶ ನೀಡದಂತೆ ಮಾಡಲು ಯಾವುದೇ ಕಾರಣವಿಲ್ಲ” ಎಂದು ಹೇಳಿದೆ.

ನಂತರ ಶಂಕರನಾರಾಯಣನ್ ಅವರು ಅರ್ಜಿಯನ್ನು ಹಿಂಪಡೆಯುವುದಾಗಿ ಹಾಗೂ ಸರ್ಕಾರ ಮತ್ತು ಕಾನೂನು ಆಯೋಗಕ್ಕೆ ಮನವಿ ನೀಡಲು ಅನುಮತಿ ಕೇಳಿದರು. ಆದರೆ ನ್ಯಾಯಾಲವು ಇದಕ್ಕೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ. ಜೊತೆಗೆ ಅರ್ಜಿಯನ್ನು ಹಿಂಪಡೆಯಲಾಗಿದೆ ಎಂದು ಅರ್ಜಿಯನ್ನು ವಜಾಗೊಳಿಸಿದೆ.

ಮಾಟ, ಮೂಢನಂಬಿಕೆ ಮತ್ತು ಮೋಸದ ಧಾರ್ಮಿಕ ಮತಾಂತರದ ಭೀತಿಯನ್ನು ನಿಯಂತ್ರಿಸುವುದು ಸಂವಿಧಾನದ ಆರ್ಟಿಕಲ್ 51 ಎ ಅಡಿಯಲ್ಲಿ ಕರ್ತವ್ಯವಾಗಿದ್ದರೂ, ಕೇಂದ್ರ ಮತ್ತು ರಾಜ್ಯಗಳು ವಿಫಲವಾಗಿವೆ ಎಂದು ಅರ್ಜಿದಾರರು ಹೇಳಿದ್ದರು.

Read Also: ರಾತ್ರಿ ಕರ್ಫ್ಯೂ ಅಥವಾ ಕೊರೊನಾ ಕರ್ಫ್ಯೂಗಳು ಪರಿಣಾಮಕಾರಿಯೆ? ಇದರಿಂದ ಏನು ಪ್ರಯೋಜನ?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights