ಅಫ್ಘಾನಿಸ್ತಾನ: ಮದುವೆ ಮನೆಯಲ್ಲಿ ಮ್ಯೂಸಿಕ್ ಹಾಕಿದ್ದಕ್ಕೆ 13 ಜನರ ಹತ್ಯೆ

ಆಫ್ಘಾನಿಸ್ತಾನವನ್ನು ತಾಲಿಬಾನ್ ವಶಕ್ಕೆ ಪಡೆದುಕೊಂಡ ನಂತರ, ಹಲವು ವಿಚಾರಗಳಲ್ಲಿ ನಿರ್ಬಂಧ ಹೇರುತ್ತಿದೆ. ಮಹಿಳೆಯರನ್ನು ನಿಯಂತ್ರಿಸುವ ಹಲವು ನಿಯಮಗಳನ್ನು ಜಾರಿಗೆ ತಂದಿದೆ. ಈ ನಡುವೆ, ಮದುವೆ ಮನೆಯೊಂದರಲ್ಲಿ ಮ್ಯೂಸಿಕ್ ಹಾಕಿದ್ದರು ಎಂಬ ಕಾರಣಕ್ಕೆ 13 ಜನರನ್ನು ತಾಲಿಬಾನ್ ಹತ್ಯೆಗೈದಿದೆ ಎಂದು ವರದಿಯಾಗಿದೆ.

ಈ ಬಗ್ಗೆ ಅಫ್ಘಾನಿಸ್ತಾನದ ಮಾಜಿ ಉಪಾಧ್ಯಕ್ಷ ಅಮ್ರುಲ್ಲಾ ಸಲೇಹ್ ಅವರು ತಮ್ಮ ಟ್ವೀಟ್‌ನಲ್ಲಿ ಆರೋಪಿಸಿದ್ದಾರೆ. “ಅಫ್ಘಾನಿಸ್ತಾನದ ನೆಂಗರ್‌ಹಾರ್ ಪ್ರಾಂತ್ಯದಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭದಲ್ಲಿ ಮ್ಯೂಸಿಕ್ ಹಾಕಲಾಗಿತ್ತು. ಆದರೆ, ಈ ವೇಳೆ ಮದುವೆ ನಡೆಯುತ್ತಿದ್ದ ಸ್ಥಳಕ್ಕೆ ನುಗ್ಗಿದ ವ್ಯಕ್ತಿಯೊಬ್ಬ ಮನಸೋಯಿಚ್ಛೆ ಗುಂಡು ಹಾರಿಸಿದ್ದು, ಘಟನೆಯಲ್ಲಿ 13 ಜನ ಮೃತಪಟ್ಟಿದ್ದಾರೆ” ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಆದರೆ, ತಾಲಿಬಾನ್ ಮಾತ್ರ 3 ಜನ ಮೃತಪಟ್ಟಿದ್ದಾರೆ ಎಂದು ಹೇಳಿದ್ದು, ಗುಂಡು ಹಾರಿಸಿದವರನ್ನು ನಾವು ಬಂಧಿಸಿದ್ದೇವೆ ಎಂದು ತಾಲಿಬಾನ್‌ ಸಮಜಾಯಿಷಿ ನೀಡಿದೆ.

ಕೃತ್ಯದ ಬಗ್ಗೆ ಜಗತ್ತಿನಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ಇದನ್ನೂ ಓದಿ: ಮನೆಗೆ ತಲುಪಿದ ಸಾಮಗ್ರಿಗಳಲ್ಲಿ ಬೆಲೆಬಾಳುವ ವಸ್ತುಗಳು ನಾಪತ್ತೆ; ವಿಮಾನಯಾನ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights