APMC : ಎಪಿಎಂಸಿ ತಿದ್ದುಪಡಿ – ಸರಕಾರದ ನಡೆ ರಾಜಕೀಯ ಸಂಘರ್ಷಕ್ಕೆ ನಾಂದಿ…

ಕೊರೋನಾ ಕಾರಣ ಸ್ವಲ್ಪ ದಿನಗಳ ಕಾಲ ರಾಜ್ಯದಲ್ಲಿ ತಣ್ಣಗಿದ್ದ ರಾಜಕೀಯ ವಾತಾವರಣ ಮತ್ತೆ ಸ್ಫೋಟಗೊಳ್ಳುವ ಲಕ್ಷಣಗಳು ಸ್ಪಷ್ಟವಾಗಿದೆ.. ರೈತರಿಂದ ನೇರ ಖರೀದಿಗೆ ಅವಕಾಶ ಮಾಡಿಕೊಡಲು ಎಪಿಎಂಸಿ ಕಾಯಿದೆಗೆ ತಿದ್ದುಪಡಿ ವಿಚಾರದಲ್ಲಿ ಸರಕಾರದ ನಡೆ ರಾಜಕೀಯ ಸಂಘರ್ಷಕ್ಕ ನಾಂದಿ ಹಾಡಿದೆ..

ಎಪಿಎಂಸಿ ಕಾಯಿದೆಗೆ ತಿದ್ದುಪಡಿಯ ಅಗತ್ಯವನ್ನು ಮತ್ತು ಅದರಿಮದ ರೈತರಿಗೆ ಆಗುವ ಅನುಕೂಲಗಳನ್ನು ಹೇಳಿರುವ ಮುಖ್ಯಮಂತ್ರಿ ಯಡಿಯೂರಪ್ಪ ರೈತರಿಗೆ ಅನ್ಯಾಯವಾಗುವುದಾದರೇ ಒಂದು ಕ್ಷಣವೂ ಮುಖ್ಯಮಂತ್ರಿಯಾಗಿ ಮುಂದುವರಿಯುವುದಿಲ್ಲ ಎಂದು ಗುಡುಗಿದ್ದಾರೆ. ಆದರೆ ಹೇಗೆ ಅನುಕುಲ ವಾಗುತ್ತದೆ ಅಂತ ಮುಖ್ಯಮಂತ್ರಿಗಳು ಹೇಳುತ್ತಿಲ್ಲ…

ಈ ಸಂಬಂಧ ರಾಜ್ಯಪಾಲರಿಂದ ವಾಪಸಾಗಿರುವ ಸುಗ್ರೀವಾಜ್ಞೆಯನ್ನು ಸಚಿವ ಸಂಪುಟ ಮತ್ತೊಮ್ಮೆ ಅನುಮೋದಿಸಿ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿದೆ. ಕೇಂದ್ರದ ಆಣತಿಯಂತೆಯೇ ತಿದ್ದುಪಡಿ ಮಾಡಲಾಗಿದೆ. ಆದರೆ ಇದರಿಂದಾಗಿ ರೈತರಿಗೆ ತಮ್ಮ ಬೆಳೆಗೆ ನ್ಯಾಯಬೆಲೆ ಪಡೆದುಕೊಳ್ಳಲು ಸಾಧ್ಯವಾಗುವುದಿಲ್ಲ ಹಾಗೂ ಅವರು ದಲ್ಲಾಳಿಗಳ ಮರ್ಜಿಗೆ ಬೀಳುತ್ತಾರೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

ಒಂದು ವೇಳೆ ಸರಕಾರ ತಿದ್ದಪಡಿ ಸುಗ್ರೀವಾಜ್ಞೆ ತಂದಿದ್ದೇ ಆದಲ್ಲಿ ರಾಜ್ಯವ್ಯಾಪಿ ಹೋರಾಟಕ್ಕೆ ಈಗಾಗಲೆ ಪ್ರತಿಪಕ್ಷಗಳ ನಾಯಕರು ಸಿದ್ಧರಾಗಿದ್ದಾರೆ. ಸರಕಾರದ ಈ ನಿರ್ಧಾರ ರೈತ ಸಂಘಟನೆಗಳನ್ನು ಸಹ ಕೆರಳಿಸಿದ್ದು, ರೈತ ಸಂಘವು ಹೋರಾಟದ ರೂಪುರೇಷೆ ಸಿದ್ಧಪಡಿಸುತ್ತಿರುವುದಾಗಿ ಹೇಳಿದೆ.

ಈ ಮಧ್ಯೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಎಪಿಎಂಸಿ ಕಾಯಿದೆ ತಿದ್ದುಪಡಿ ವಿಚಾರದಲ್ಲಿ ತಮ್ಮ ಸರಕಾರದ ನಡೆಯನ್ನು ಸಮರ್ಥನೆ ಮಾಡಿಕೊಂಡಿದ್ದಾರೆ. ರೈತರು ತಮ್ಮ ಉತ್ಪನ್ನಗಳನ್ನು ಮಾರುಕಟ್ಟೆ ಪ್ರಾಂಗಣದಲ್ಲಿ ಅಥವಾ ನೇರವಾಗಿ ಮಾರಾಟ ಮಾಡುವ ಅವಕಾಶ ಹೊಂದಿರುತ್ತಾರೆ.

ಇದರಿಂದ ರೈತರಿಗೆ ತಮ್ಮ ಉತ್ಪನ್ನಗಳಿಗೆ ಯೋಗ್ಯ ಧಾರಣೆ ದೊರೆಯುವ ಅವಕಾಶ ಕಲ್ಪಿಸಿದಂತಾಗುತ್ತದೆ ಎಂದು ಅವರು ಹೇಳಿದ್ದಾರೆ. ಈ ಕಾಯ್ದೆಯಿಂದ ಎಪಿಎಂಸಿ ಕಮಿಟಿಗಳ ಅಸ್ತಿತ್ವಕ್ಕೆ ಯಾವುದೇ ಆಗುವುದಿಲ್ಲ. ಅವು ಹಿಂದಿನಂತೆ ಮುಂದುವರೆಯುತ್ತವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಎಪಿಎಂಸಿಗಳ ಪ್ರಾಂಗಣದ ಹೊರಗೆ ಅಧಿಸೂಚಿತ ಕೃಷಿ ಉತ್ಪನ್ನಗಳ ವಹಿವಾಟು ನಡೆಸಲು ಮತ್ತು ಮೇಲ್ವಿಚಾರಣೆಯನ್ನು ಕೃಷಿ ಮಾರಾಟ ನಿರ್ದೇಶಕರು ಮಾಡುತ್ತಾರೆ ಎಂದು ಬಿಎಸ್ವೈ ವಿವರ ನೀಡಿದ್ದಾರೆ. ಇದರಿಂದ ರೈತರಿಗೆ ಮಾರುಕಟ್ಟೆಯ ಹೆಚ್ಚಿನ ಆಯ್ಕೆಗಳು ಲಭಿಸಲಿವೆ. ಅವರು ಎಪಿಎಂಸಿ ಅಥವಾ ಇತರೇ ವರ್ತಕರ ಅಧೀನಕ್ಕೆ ಒಳಪಡುವುದಿಲ್ಲ. ರೈತರು ಯಾರಿಗೆ ಬೇಕಾದರೂ ಉತ್ಪನ್ನ ಮಾರಾಟ ಮಾಡಬಹುದು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights