April 20 ರಿಂದ ರಾಜ್ಯದಲ್ಲಿ ಲಾಕ್‌ಡೌನ್ ಸಡಿಲಿಕೆ : CM BSY ಆದೇಶ…

ಕರ್ನಾಟಕದಲ್ಲಿ ಏಪ್ರಿಲ್ 20ರಿಂದ ಕೊರೊನಾ ಲಾಕ್‌ಡೌನ್ ನಿಯಮ ಸಡಿಲಗೊಳಿಸಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.  ಹಿರಿಯ ಸಚಿವರು ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳ ಸಭೆ  ನಂತರ BSY  ಈ ನಿರ್ಧಾರ ತಿಳಿಸಿದರು.. ಇದೇ ಸಂದರ್ಬದಲ್ಲಿ ಲಾಕ್ ಡೌನ್ ಉಲ್ಲಂಘನೆಯ ದೂರುಗಳು ಹೆಚ್ಚುತ್ತಿದ್ದು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು.

ಕೊವಿಡ್ ಪ್ರಕರಣಗಳು ಪತ್ತೆಯಾದ ಪ್ರದೇಶವನ್ನು ಕಂಟೇನ್ ಮೆಂಟ್ ಝೋನ್ ಗುರುತಿಸುವುದು ಹಾಗೂ ಇತರ ಪ್ರದೇಶಗಳ ಚಟುವಟಿಕೆಗಳನ್ನು ನಿಯಂತ್ರಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಕಂಟೇನ್ಮೆಂಟ್ ಝೋನ್ ನಲ್ಲಿ ಇನ್ಸಿಡೆಂಟ್ ಕಮಾಂಡರ್ ನೇಮಕ ಮಾಡಿ ಅವರಿಗೆ ಮ್ಯಾಜಿಸ್ಟೀರಿಯಲ್ ಅಧಿಕಾರ ನೀಡಲಾಗುವುದು. ಜೊತೆಗೆ ಪೊಲೀಸ್, ಆರೋಗ್ಯ ಇಲಾಖೆ ಸಿಬ್ಬಂದಿಯ ತಂಡ ರಚಿಸಲಾಗುವುದು. ಅವರು ಕಂಟೇನ್ಮೆಂಟ್ ಝೋನ್ ಗಳ ಮೇಲ್ಚಿಚಾರಣೆ ವಹಿಸುವುದು. ಈ ಪ್ರದೇಶದಲ್ಲಿ ಲಾಕ್ ಡೌನ್ ಅನ್ನು ಇನ್ನಷ್ಟು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು.

ಯಾರೂ ಮನೆಯಿಂದ ಹೊರ ಬರುವಂತಿಲ್ಲ. ಅಗತ್ಯ ವಸ್ತುಗಳನ್ನು ಮನೆ ಬಾಗಿಲಿಗೇ ತಲುಪಿಸಲಾಗುವುದು. ಬಫರ್ ಝೋನ್ ನಲ್ಲಿ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ನಗರ ಪ್ರದೇಶದಲ್ಲಿ ಕಾರ್ಮಿಕರಿಗೆ ಸ್ಥಳೀಯವಾಗಿ ಉಳಿದುಕೊಳ್ಳುವ ವ್ಯವಸ್ಥೆ ಇರುವಲ್ಲಿ ನಿರ್ಮಾಣ ಚಟುವಟಿಕೆಗಳು ಪ್ರಾರಂಭಿಸಲು ಅನುಮತಿ ನೀಡಲಾಗುವುದು.

ಗ್ರಾಮೀಣ ಪ್ರದೇಶದಲ್ಲಿ ಉತ್ಪಾದನಾ ವಲಯದ ಕೈಗಾರಿಕೆಗಳು, ಹಾಗೂ ನಗರ ಪ್ರದೇಶದಲ್ಲಿ ಎಸ್ಇ ಝಡ್ ಗಳು, ಕೈಗಾರಿಕಾ ವಸಾಹತುಗಳು, ಕೈಗಾರಿಕಾ ಟೌನ್ ಷಿಪ್ ಗಳಲ್ಲಿ ಕೈಗಾರಿಕೆಗಳು ಕಾರ್ಯ ನಿರ್ವಹಿಸಲು ಅವಕಾಶ ನೀಡಲಾಗುವುದು. ಅಂತರ ಜಿಲ್ಲೆ ಪ್ರಯಾಣಕ್ಕೆ ಅವಕಾಶವಿಲ್ಲ. ಬೆಂಗಳೂರು, ರಾಮನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳನ್ನು ಕೈಗಾರಿಕೆಗಳ ಉದ್ಯೋಗಿಗಳ ಓಡಾಟದ ದೃಷ್ಟಿಯಿಂದ ಒಂದು ಜಿಲ್ಲೆಯಾಗಿ ಪರಿಗಣಿಸಲಾಗುವುದು.

ಹಿರಿಯ ನಾಗರಿಕರು ಮನೆಯಿಂದ ಹೊರಬರಬಾರದು. ಮಾಸ್ಕ್ ಧರಿಸುವುದು ಕಡ್ಡಾಯ. ಎಲ್ಲ ಕಡೆಗಳಲ್ಲಿ ಸಾಮಾಜಿಕ ಅಂತರ ಪಾಲನೆ ಕಡ್ಡಾಯ. ಉಗುಳುವುದನ್ನು ನಿಷೇಧಿಸಲಾಗಿದೆ. ಮೇ 03ರ ವರೆಗೆ ಸೆಕ್ಷನ್ 144 ನಿಷೇಧಾಜ್ಞೆ ಮುಂದುವರೆಸಲಾಗುವುದು ಎಂದು ಮಾಹಿತಿ ನೀಡಿದರು. ಕಟ್ಟಡ ಕಾರ್ಮಿಕರನ್ನು ಕಟ್ಟಡ ನಿರ್ಮಾಣ ಮಾಡುವ ಬಳಿಯೇ ಇರಿಸಿಕೊಳ್ಳುವುದು ,ಆ ಕಾರ್ಮಿಕರಿಗೆ ಊಟ , ತಿಂಡಿ ವ್ಯವಸ್ಥೆ ಅಲ್ಲೇ ಮಾಡಬೇಕು ಎಂದರು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights