CPI-M ನಾಯಕ ಯೆಚೂರಿ ಹಿರಿಯ ಮಗ ಆಶಿಶ್ ಯೆಚೂರಿ ಕೊರೊನಾದಿಂದ ಸಾವು

ಸಿಪಿಐ-ಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರ ಹಿರಿಯ ಮಗ ಆಶಿಶ್ ಯೆಚೂರಿ ಅವರು ಹರಿಯಾಣದ ಗುರುಗ್ರಾಮದಲ್ಲಿರುವ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿಗೆ ತುತ್ತಾಗಿ ಸಾವನ್ನಪ್ಪಿದ್ದಾರೆ. ಇಂದು ಬೆಳಗ್ಗೆ 06 ಗಂಟೆಗೆ ಸುಮಾರಿಗೆ ನಿಧನರಾದರು ಎಂದು ಯೆಚೂರಿ ತಿಳಿಸಿದ್ದಾರೆ.

ವರದಿಗಳ ಪ್ರಕಾರ, ಅವರು ಈ ಹಿಂದೆ ಹೋಲಿ ಫ್ಯಾಮಿಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಅವರನ್ನು ಗುರುಗ್ರಾಮದ ಮೆಡಂತಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

34 ವರ್ಷದ ಆಶಿಶ್‌ ಅವರು ನವದೆಹಲಿಯ ಪ್ರಮುಖ ಪತ್ರಿಕೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಎಂದು ಮೂಲಗಳು ತಿಳಿಸಿವೆ.

ಈ ಟ್ವೀಟ್‌ ಮಾಡಿರುವ ಸೀತಾರಾಮ್ ಯೆಚೂರಿ ಅವರು, ಇಂದು ಬೆಳಿಗ್ಗೆ ನನ್ನ ಹಿರಿಯ ಮಗ ಆಶಿಶ್ ಯೆಚೂರಿಯನ್ನು COVID-19ನಿಂದಾಗಿ ಕಳೆದುಕೊಂಡೆ ಎಂದು ತಿಳಿಸಬೇಕಾಗಿರುವುದು ಬಹಳ ದುಃಖದ ಸಂಗತಿಯಾಗಿದೆ. ನಮಗೆ ಭರವಸೆ ನೀಡಿದ ಮತ್ತು ಅವರಿಗೆ ಚಿಕಿತ್ಸೆ ನೀಡಿದ ಎಲ್ಲರಿಗೂ ನಾನು ಧನ್ಯವಾದ ಹೇಳಲು ಬಯಸುತ್ತೇನೆ – ವೈದ್ಯರು, ದಾದಿಯರು, ಮುಂಚೂಣಿ ಆರೋಗ್ಯ ಕಾರ್ಯಕರ್ತರು, ನೈರ್ಮಲ್ಯ ಕಾರ್ಮಿಕರು ಮತ್ತು ನಮ್ಮೊಂದಿಗೆ ನಿಂತ ಅಸಂಖ್ಯಾತ ಇತರರಿಗೆ ಧನ್ಯವಾದಗಳು” ಎಂದು ಅವರು ಟ್ವೀಟ್‌ನಲ್ಲಿ ಹೇಳಿದ್ದಾರೆ.

ಸೀತಾರಾಮ್ ಯೆಚೂರಿ ಅವರು ತಮ್ಮ ಮನೆಯಲ್ಲಿ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.

ಇದನ್ನೂ ಓದಿ: BJPಗೆ ಸೇರಿದ್ದ ಗೋವಾ ಹಾಲಿ ಡಿಸಿಎಂ ಮತ್ತು 09 ಶಾಸಕರ ವಿರುದ್ದ ಕಾಂಗ್ರೆಸ್‌ ದೂರು ದಾಖಲು!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights