ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ವಿಫಲವಾದಾಗ ಬೆಂಕಿ ಹಚ್ಚಿದ ಕಾಮುಕರು!

ಕಾಲೇಜು ವಿದ್ಯಾರ್ಥಿನಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿ, ನಂತರ ಆಕೆಗೆ ಬೆಂಕಿ ಹಚ್ಚಲಾಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಶಹಜಹಾನ್‌ಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಸ್ತೆಯ ಬದಿಯಲ್ಲಿದ್ದ ಹೊಲವೊಂದರಲ್ಲಿ ಶೇ.60% ದೇಹದ ಭಾಗ ಸುಟ್ಟು ಹೋಗಿದ್ದ ಬಿಎ ದ್ವಿತೀಯ ವರ್ಷದ ವಿದ್ಯಾರ್ಥಿಯನ್ನು ರಕ್ಷಿಸಲಾಗಿದ್ದು, ಜಿಲ್ಲೆಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಲಕ್ನೋ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ರಾಯ್ ಖೇಡಾ ಗ್ರಾಮದ ಬಳಿಯ ಹೊಲವೊಂದರಲ್ಲಿ ಮೂವರು ತನ್ನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದರು. ಅತ್ಯಾಚಾರ ಎಸಗಲು ಸಾಧ್ಯವಾಗದೇ ಇದ್ದಾಗ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದರು ಎಂದು ಯುವತಿ ತನಿಖಾಧಿಕಾರಿಗಳಿಗೆ ತಿಳಿಸಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ಎಸ್ ಆನಂದ್ ಮಾಹಿತಿ ನೀಡಿದ್ದಾರೆ.

ಸಂತ್ರಸ್ತೆಯು ಮಾಜಿ ಕೇಂದ್ರ ಸಚಿವ ಸ್ವಾಮಿ ಚಿನ್ಮಯಾನಂದ್ ಅವರ ಟ್ರಸ್ಟ್ ನಡೆಸುತ್ತಿರುವ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು, ಕಾಲೇಜಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗಿದೆ. “ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕಾಲೇಜು ಆವರಣದಿಂದ ಮುರಿದ ಕಾಂಪೌಂಡ್‌ ಮೂಲಕ ಹೊರಗೆ ಹೋದ ಯುವತಿ, ಕಾಲುವೆ ರಸ್ತೆಯಲ್ಲಿ ಏಕಾಂಗಿಯಾಗಿ ನಡೆದುಕೊಂಡು ಹೋಗುತ್ತಿದ್ದದ್ದು ಸೆರೆಯಾಗಿದೆ” ಎಂದು ಆನಂದ್ ಹೇಳಿದ್ದಾರೆ.

ಅದಕ್ಕೂ ಮೊದಲು, ಹುಡುಗಿ ತನ್ನ ಸ್ನೇಹಿತರೊಂದಿಗೆ ತರಗತಿಯ ಹೊರಗೆ ಮಾತನಾಡುತ್ತಾ ನಿಂತಿದ್ದಳು ಮತ್ತು ಗ್ರಂಥಾಲಯಕ್ಕೆ ತೆರಳಿದ್ದಳು ಎಂದು ಎಸ್‌ಪಿ ಹೇಳಿದ್ದಾರೆ.

ಪ್ರಕರಣದ ತನಿಖೆ ನಡೆಸಲು ಉಪ ಪೊಲೀಸ್ ವರಿಷ್ಠಾಧಿಕಾರಿಗಳು (ಡಿವೈ ಎಸ್‌ಪಿ) ಮತ್ತು ಎಸ್‌ಒಜಿ ನೇತೃತ್ವದಲ್ಲಿ ಮೂರು ತಂಡಗಳನ್ನು ನಿಯೋಜಿಸಲಾಗಿದೆ.

ಆಕೆಯ ಸ್ನೇಹಿತರು ಸೇರಿದಂತೆ ಕಾಲೇಜಿನ ಸುಮಾರು 15ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ವಿಚಾರಣೆ ನಡೆಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆಕೆ, ಜಲಾಲಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರ ಯುವತಿಯಾಗಿದ್ದು, ಚಿನ್ಮಯಾನಂದ್‌ ಅವರ ಮುಮುಕ್ಷು ಆಶ್ರಮ ನಡೆಸುತ್ತಿರುವ ಸ್ವಾಮಿ ಶುಕ್ರದೇವಾನಂದ್ ಸ್ನಾತಕೋತ್ತರ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು.

ಚಿನ್ಮಯಾನಂದ್ ಅವರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು 2019 ರಲ್ಲಿ ಕಾನೂನು ಕಾಲೇಜಿನ ವಿದ್ಯಾರ್ಥಿನಿಯೊಬ್ಬರು ಆರೋಪಿಸಿದ ನಂತರ ಈ ಆಶ್ರಮವು ವಿವಾದದ ಕೇಂದ್ರವಾಗಿತ್ತು.

ಕಾನೂನು ವಿದ್ಯಾರ್ಥಿನಿಯ ದೂರಿನ ಆಧಾರದ ಮೇಲೆ ಚಿನ್ಮಯಾನಂದ್‌ ಅವರನ್ನು 2019 ರ ಸೆಪ್ಟೆಂಬರ್‌ನಲ್ಲಿ ಬಂಧಿಸಲಾಗಿತ್ತು. ಅದರೆ, ಆ ವಿದ್ಯಾರ್ಥಿನಿ ತಾನು ನೀಡಿದ್ದ ದೂರನ್ನು ಹಿಂತೆಗೆದುಕೊಂಡಿದ್ದರು. ಸುಮಾರು ಐದು ತಿಂಗಳ ನಂತರ ಜಾಮೀನಿನ ಮೇಲೆ ಚಿನ್ಮಯಾನಂದ್‌ ಅವರನ್ನು ಬಿಡುಗಡೆ ಮಾಡಲಾಗಿತ್ತು.

Read Also: ಕಾಂಗ್ರೆಸ್‌ಗೆ ಗುಜರಾತ್‌ನಲ್ಲಿ ಮುಖಭಂಗ; ಪುದುಚೇರಿ ಸರ್ಕಾರ ಪತನ; ಬಿಕ್ಕಟ್ಟಿನಲ್ಲಿದೆ ಕಾಂಗ್ರೆಸ್‌!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights