ಬಾಬರಿ ಮಸೀದಿಯನ್ನು ಜಾದೂ ಮೂಲಕ ನೆಲಸಮ ಮಾಡಲಾಯಿತೇ? ಓವೈಸಿ ಪ್ರಶ್ನೆ

ಬಾಬರಿ ಮಸೀದಿ ಧ್ವಂಸ ಪ್ರಕರಣದ 32 ಆರೋಪಿಗಳನ್ನು ಖುಲಾಸೆಗೊಳಿಸಿರುವ ಬಗ್ಗೆ ಮುಸ್ಲಿಂ ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿವೆ. ಈ ಬೆನ್ನಲ್ಲೇ ತೀರ್ಪಿನ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಎಐಎಂಐ ಮುಖ್ಯಸ್ಥ, ಸಂಸದ ಅಸಾದುದ್ದೀನ್ ಓವೈಸಿ ಅವರು, ಮಸೀದಿಯನ್ನು ಜಾದೂ ಮೂಲಕ ನೆಲಸಮಗೊಳಿಸಲಾಗಿದೆಯೇ? ಎಂದು ಪ್ರಶ್ನಿಸಿದ್ದಾರೆ.

28 ವರ್ಷಗಳ ಬಳಿಕ ಬಾಬರಿ ಮಸೀದಿ ದ್ವಂಸ ಪ್ರಕರಣದಲ್ಲಿ ತೀರ್ಪು ನೀಡಿರುವ ಸಿಬಿಐ ವಿಶೇಷ ನ್ಯಾಯಾಲಯ 32 ಆರೋಪಿಗಳನ್ನು ಖುಲಾಸೆಗೊಳಿಸಿದೆ.

ಸುಪ್ರೀಂ ಕೋರ್ಟ್ ಬಾಬರಿ ಮಸೀದಿಯನ್ನ ಧ್ವಂಸಗೊಳಿಸಿದ್ದು ತಪ್ಪು ಎಂದು ಸ್ಪಷ್ಟವಾಗಿ ಹೇಳಿದೆ. ಆದರೆ, ಇಂದು ಬಂದ ತೀರ್ಪು ಭಾರತೀಯ ನ್ಯಾಯಾಂಗ ವ್ಯವಸ್ಥೆಯಲ್ಲಿ ಕರಾಳ ದಿನವಾಗಿ ದಾಖಲಾಗಿದೆ. ಹಾಗಾದರೆ ಮಸೀದಿ ಧ್ವಂಸಗೊಳಿಸಿದ್ದು ಯಾರು? ಜಾದೂ ಮೂಲಕ ಮಸೀದಿ ಧ್ವಂಸಗೊಳಿಸಲಾಗಿದೆಯೇ? ಎಂದು ಪ್ರಶ್ನಿಸಿದ್ದಾರೆ.

ಮಸೀದಿಯಲ್ಲಿ ಮೂರ್ತಿ ತಂದಿಟ್ಟಿದ್ಯಾರು? ಬೀಗ ಮುರಿದಿದ್ದು ಹೇಗೆ? ಮಸೀದಿ ಕೆಡವಿದ್ದು ಹೇಗೆ ಎಂದು ಓವೈಸಿ ಪ್ರಶ್ನೆ ಮಾಡಿದ್ದಾರೆ. ಈ ಎಲ್ಲವನ್ನು ಜಾದೂವಿನ ಮೂಲಕ ಮಾಡಲಾಯಿತಾ? ದೇಶದ ಇತಿಹಾಸದಲ್ಲಿ ಸೆಪ್ಟೆಂಬರ್ 30 ಕರಾಳ ದಿನವಾಗಿ ಉಳಿಯಲಿದೆ. ಎಲ್.ಕೆ. ಅಡ್ವಾಣಿಯವರ ರಥಯಾತ್ರೆ ವೇಳೆ ರಕ್ತದ ಹೊಳೆಯೇ ಹರಿದಿತ್ತು. ಎಲ್ಲ ಘಟನೆಗಳು ಪೂರ್ವಯೋಜಿತವಾಗಿದರೂ ಇಂದು ದಿಢೀರ್ ಎಲ್ಲವೂ ಬದಲಾಗಿದೆ ಎಂದು ಓವೈಸಿ ಹೇಳಿದ್ದಾರೆ.


ಇದನ್ನೂ ಓದಿ: ಬಾಬರಿ ಮಸೀದಿ ತೀರ್ಪಿನ ವಿರುದ್ಧ ಹೈಕೋರ್ಟ್ ಮಟ್ಟಿಲೇರಲು ಮುಸ್ಲಿಂ ಸಂಘಟನೆ ನಿರ್ಧಾರ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

One thought on “ಬಾಬರಿ ಮಸೀದಿಯನ್ನು ಜಾದೂ ಮೂಲಕ ನೆಲಸಮ ಮಾಡಲಾಯಿತೇ? ಓವೈಸಿ ಪ್ರಶ್ನೆ

  • October 1, 2020 at 12:36 pm
    Permalink

    What was your forefather… 2 – 3 generation before… it is learnt that they were Hindus… Who has demolished few hundred years early many Hindu worship places… all over Hindustan…. mean while Hindus did not demolished Islam prayer places any where…. during that period…. What do you say ?

    Reply

Leave a Reply

Your email address will not be published.

Verified by MonsterInsights