BJPಗೆ ಹಿನ್ನೆಡೆ: ಕೇರಳದ ಹಲವು BJP ಅಭ್ಯರ್ಥಿಗಳ ನಾಮಪತ್ರ ತಿರಸ್ಕಾರ!

ಕೇರಳ ವಿಧಾನಸಭಾ ಚುನಾವಣೆಯು ತ್ರಿಕೋನ ಸ್ಪರ್ಧೆ ನಡೆಯುತ್ತಿದೆ. ಸಿಎಂ ಪಿಣರಾಯಿ ವಿಜಯನ್‌ ನೇತೃತ್ವದ ಎಲ್‌ಡಿಎಫ್‌ ಕೂಟ, ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ ಮತ್ತು ಬಿಜೆಪಿ ನೇತೃತ್ವದ ಎನ್‌ಡಿಎ ಅಧಿಕಾರಕ್ಕಾಗಿ ಸೆಣೆಸಾಡುತ್ತಿವೆ. ಈ ಮಧ್ಯೆ, ಬಿಜೆಪಿಗೆ ವಿವಿಧ ರೀತಿಯಲ್ಲಿ ಹಿನ್ನೆಡೆ ಉಂಟಾಗುತ್ತಿದೆ. ಎನ್‌ಡಿಎ ಮೈತ್ರಿಕೂಟದ ಹಲವಾರು ಅಭ್ಯರ್ಥಿಗಳ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿದೆ.

ಗುರುವಾಯೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮತ್ತು ಮಹಿಳಾ ಮೊರ್ಚಾದ ರಾಜ್ಯಾಧ್ಯಕ್ಷೆ ನಿವೇದಿತಾ ಸುಬ್ರಮಣಿಯಂ, ಥಲಸ್ಸೆರಿ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಮತ್ತು ಕಣ್ಣೂರಿನ ಎನ್​ ಹರಿದಾಸ್ ಅವರ​ ನಾಮಪತ್ರಗಳು ತಿರಸ್ಕತಗೊಂಡಿವೆ. ಅಭ್ಯರ್ಥಿಗಳ ನಾಮಪತ್ರದಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಸಹಿ ಇಲ್ಲ ಎಂಬ ಕಾರಣದಿಂದಾಗಿ ನಾಮಪತ್ರ ತಿರಸ್ಕಾರಗೊಂಡಿವೆ ಎಂದು ತಿಳಿದು ಬಂದಿದೆ.

ಅಲ್ಲದೆ, ಇಡುಕ್ಕಿಯ ದೇವಿಕುಲಂ ಕ್ಷೇತ್ರದಲ್ಲಿ ಎಐಎಡಿಎಂಕೆ ಅಭ್ಯರ್ಥಿ ಧನಲಕ್ಷ್ಮಿ ನಾಮಪತ್ರವು ಅಪೂರ್ಣವಾಗಿದೆ ಎಂದು ತಿರಸ್ಕರಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಆಯೋಗದ ಕ್ರಮವನ್ನು ಖಂಡಿಸಿ ಬಿಜೆಪಿ ಅಭ್ಯರ್ಥಿಗಳು ಕೇರಳ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ಅಭ್ಯರ್ಥಿಗಳ ಅರ್ಜಿಯನ್ನು ಪರಿಶೀಲಿಸಿರುವ ಕೋರ್ಟ್‌, ಆಯೋಗದ ಪ್ರತಿಕ್ರಿಯೆ ಕೇಳಿದ್ದು, ವಿವರಣೆ ನೀಡುವಂತೆ ಸೂಚಿಸಿದೆ.

ಕೇರಳದಲ್ಲಿ ಏಪ್ರಿಲ್‌ 06 ರಂದು ಚುನಾವಣೆ ನಡೆಯಲಿದೆ.

ಇದನ್ನೂ ಓದಿ: ಕೇರಳ ಅಸೆಂಬ್ಲಿ ಚುನಾವಣೆ; ಎಡರಂಗ ಮತ್ತು ಯುಡಿಎಫ್ ಮಧ್ಯೆ ಫೈಟ್‌; BJP ಕತೆಯೇನು ಗೊತ್ತೇ?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights