ಎಟಿಎಂನಲ್ಲಿ ಜ್ಯೋತಿ ಉದಯ್ ಮೇಲೆ ಹಲ್ಲೆ ಪ್ರಕರಣ: ಅಪರಾಧಿಗೆ 12 ವರ್ಷ ಜೈಲು ಶಿಕ್ಷೆ!

ಬೆಂಗಳೂರಿನ ಕಾರ್ಪೋರೇಷನ್ ಬ್ಯಾಂಕ್ ಎಟಿಎಂನಲ್ಲಿ ಬ್ಯಾಂಕ್ ಮ್ಯಾನೇಜರ್ ಜ್ಯೋತಿ ಉದಯ್ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ಅಪರಾಧಿ ಮಧುಕರ್ ಗೆ 12 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.

2013 ನ.19ರಂದು ಜ್ಯೋತಿ ಉದಯ್ ಮೇಲೆ ಮಚ್ಚಿನಿಂದ ಮಾರಾಣಾಂತಿಕ ಹಲ್ಲೆ ನಡೆಸಿದ ಮಧುಕರ್ ಗೆ ನಗರದ 65ನೇ ಸೆಷನ್ಸ್ ನ್ಯಾಯಾಲಯ 12 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

ಎಂಟು ವರ್ಷಗಳ ಹಿಂದೆ ನಗರದ ಕಾರ್ಪೋರೇಶನ್ ವೃತ್ತದ ಎಟಿಎಂ ಕೇಂದ್ರದಲ್ಲಿ ಮಹಿಳಾ ಬ್ಯಾಂಕ್ ಉದ್ಯೋಗಿ ಜ್ಯೋತಿ ಉದಯ್ ಮೇಲೆ ಮಧುಕರ್ ರೆಡ್ಡಿ ಹಲ್ಲೆ ನಡೆಸಿದ ಆರೋಪ ಹೊತ್ತಿದ್ದ. ಈ ಪ್ರಕರಣ ಸಂಬಂಧ ಸುದೀರ್ಘ ವಿಚಾರಣೆ ನಡೆಸಿರುವ 6ನೇ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ರಾಜೇಶ್ವರ ಅವರು ಸೋಮವಾರ (ಫೆ.1.2021) ದೋಷಿ ಎಂದು ಘೋಷಿಸಿದ್ದರು.

ಪ್ರಕರಣ ಸಂಬಂಧ ಆರೋಪಿಯ ವಿರುದ್ಧ ತನಿಖಾಧಿಕಾರಿಗಳು ಸಾಕ್ಷ್ಯಾಧಾರಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಈ ಅಂಶಗಳನ್ನು ಪರಿಗಣಿಸಿರುವ ನ್ಯಾಯಾಧೀಶರು ಆರೋಪಿಯನ್ನು ದೋಷಿ ಎಂದು ಘೋಷಿಸಿ ಇಂದು 12 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಪ್ರಾಸಿಕ್ಯೂಶನ್ ಪರ ಎಂ.ವಿ ತ್ಯಾಗರಾಜ್ ವಾದ ಮಂಡಿಸಿದ್ದರು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights