ಬಸವನಾಡಿನ ಹಿರಿಯ ರಾಜಕೀಯ ಮುತ್ಸದ್ದಿ ಜೆಡಿಎಸ್ ಶಾಸಕ ಎಂ. ಸಿ. ಮನಗೂಳಿ ಇನ್ನಿಲ್ಲ…!

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಸಿಂದಗಿ ಕ್ಷೇತ್ರದ ಹಿರಿಯ ಜೆಡಿಎಸ್ ಶಾಸಕ ಎಲ್ಲರೂ ಪ್ರೀತಿಯಿಂದ ಮನಗೂಳಿ ಮುತ್ಯಾ ಎಂದೇ ಕರೆಯುತ್ತಿದ್ದ ಎಂ. ಸಿ. ಮನಗೂಳಿ ನಿನ್ನೆ ತಡರಾತ್ರಿ ಬೆಂಗಳೂರಿನಲ್ಲಿ ಕೊನೆಯುರಿರೆಳೆದಿದ್ದಾರೆ.

15 ದಿನಗಳಿಂದ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಜನವರಿ 9 ರಂದು ಸಿಂದಗಿಯಿಂದ ಕಲಬುರಗಿವರೆಗೆ ಆ್ಯಂಬುಲೆನ್ಸ್​​ನಲ್ಲಿ ಮತ್ತು ಕಲಬುರಗಿಯಿಂದ ಬೆಂಗಳೂರಿಗೆ ಏರ್​ಲಿಫ್ಟ್ ಮೂಲಕ ಅವರನ್ನು ಚಿಕಿತ್ಸೆಗೆ ಕರೆದೊಯ್ದು ಬೆಂಗಳೂರಿನ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಚೇತರಿಸಿಕೊಂಡಿದ್ದ ಅವರು ಮತ್ತೆ ಉಸಿರಾಟದ ತೊಂದರೆಯಿಂದ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ಒಂದು ಗಂಟೆ ಸುಮಾರಿಗೆ ಬೆಳಗಳೂರಿನಲ್ಲಿ ನಿಧನರಾಗಿದ್ದಾರೆ.

ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ – ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ತೋಟಗಾರಿಕೆ ಸಚಿವರಾಗಿ ಸೇವೆ ಸಲ್ಲಿಸಿದ್ದರು. 1994ರಲ್ಲಿ ಮೊದಲ ಬಾರಿಗೆ ಸಿಂದಗಿ ಕ್ಷೇತ್ರದಿಂದ ಜನತಾದಳದ ಶಾಸಕರಾಗಿದ್ದ ಅವರು, ಗ್ರಾಮೀಣಾಭಿವೃದ್ಧಿ ಸಚಿವರೂ ಆಗಿದ್ದರು.

1994ರ ವಿಧಾನಸಭೆ ಚುನಾವಣೆ ಸೇರಿದಂತೆ 6 ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ, 1994 ಮತ್ತು 2018ರಲ್ಲಿ ಎರಡು ಬಾರಿ ವಿಜಯ ಸಾಧಿಸಿ, ಎರಡು ಬಾರಿ ಮಂತ್ರಿ ಆಗಿದ್ದರು. 4 ಬಾರಿ ಪರಾಭವಗೊಂಡಿದ್ದರು.  ಪತ್ನಿ, ಓರ್ವ ಪುತ್ರಿ, ನಾಲ್ವರು ಪುತ್ರರು ಸೇರಿದಂತೆ ಅಪಾರ ಬಂಧು- ಬಳಗ ಅಭಿಮಾನಿಗಳನ್ನು ಅಗಲಿದ್ದಾರೆ.

ಎಂ. ಸಿ. ಮನಗೂಳಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಜೆಡಿಎಸ್ ವರಿಷ್ಠ ಹೆಚ್ . ಡಿ. ದೇವೇಗೌಡ ಮತ್ತಿತರ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights