ಬೆಂಗಳೂರು ಅಪಾರ್ಟ್ಮೆಂಟ್ನಲ್ಲಿನ ಸ್ವಿಮ್, ಜಿಮ್‌, ಪಾರ್ಟಿ ಹಾಲ್‌ಗಳ ಬಳಕೆಗೆ ನಿಷೇಧ..!

ಕಳೆದ ಕೆಲವು ವಾರಗಳಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಆತಂಕದ ಮಧ್ಯೆ ನಗರ ವ್ಯಾಪ್ತಿಯ ಅಪಾರ್ಟ್ಮೆಂಟ್ ಕಟ್ಟಡಗಳಲ್ಲಿ ಈಜುಕೊಳಗಳು, ಜಿಮ್‌ಗಳು, ಪಾರ್ಟಿ ಹಾಲ್‌ಗಳು ಮತ್ತು ಇತರ ಸೌಲಭ್ಯಗಳನ್ನು ಬಳಸುವುದನ್ನು ಬೆಂಗಳೂರು ಪೊಲೀಸರು ಇಂದು ನಿಷೇಧಿಸಿದ್ದಾರೆ.

“ಬೆಂಗಳೂರಿನಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮುಖ್ಯ ಕಾರ್ಯದರ್ಶಿ ಮತ್ತು ಅಧ್ಯಕ್ಷರು, ರಾಜ್ಯ ಕಾರ್ಯಕಾರಿ ಸಮಿತಿ ಸಾರ್ವಜನಿಕ ಸುರಕ್ಷತೆ ಮತ್ತು ಆರೋಗ್ಯಕ್ಕೆ ಕೆಲವು ಸಮಂಜಸವಾದ ನಿರ್ಬಂಧಗಳನ್ನು ವಿಧಿಸಿದೆ” ಎಂದು ಬೆಂಗಳೂರು ಪೊಲೀಸ್ ಆಯುಕ್ತರು ಇಂದು ನೋಟಿಸ್ ಮೂಲಕ ತಿಳಿದರು.

ನಗರ ಮಿತಿಯ ಹೊರಗಿನ ಜಿಮ್‌ಗಳಿಗೆ ಶೇಕಡಾ 50 ರಷ್ಟು ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲು ಅವಕಾಶವಿದೆ.

ಇತ್ತೀಚಿನ ದಿನಗಳಲ್ಲಿ ಬೆಂಗಳೂರು ನಗರ ಕರ್ನಾಟಕದಲ್ಲಿ ಗರಿಷ್ಠ ಸಂಖ್ಯೆಯ ಹೊಸ ಪ್ರಕರಣಗಳನ್ನು ದಾಖಲಿಸಿದೆ. ಕೊರೋನವೈರಸ್ ಸಾಂಕ್ರಾಮಿಕ ರೋಗದ 2ನೇ ಅಲೆಯಿಂದಾಗಿ ಮಾರ್ಚ್ ತಿಂಗಳಲ್ಲಿ ಸುಮಾರು 2,000 ಹೊಸ ಪ್ರಕರಣಗಳು ವರದಿಯಾಗುತ್ತಿವೆ. ಈ ಏರಿಕೆಯ ಮಧ್ಯೆ, ಕೋವಿಡ್ ರೋಗಿಗಳಿಗೆ ಮೀಸಲಿಟ್ಟ ಹಾಸಿಗೆಗಳು ಅನೇಕ ಆಸ್ಪತ್ರೆಗಳಲ್ಲಿ ವೇಗವಾಗಿ ತುಂಬುತ್ತಿವೆ.

ಅತಿ ಹೆಚ್ಚು ಹೊಸ ಪ್ರಕರಣಗಳು ದಾಖಲಾದ ಭಾರತದ 10 ಜಿಲ್ಲೆಗಳಲ್ಲಿ ಬೆಂಗಳೂರು ಕೂಡ ಇದೆ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ನಿನ್ನೆ ಹೇಳಿದ್ದಾರೆ. ಇತರ ನಗರಗಳು ಪುಣೆ, ಮುಂಬೈ, ಥಾಣೆ, ನಾಗ್ಪುರ, ನಾಸಿಕ್, ಔರಂಗಾಬಾದ್, ಅಹ್ಮದ್‌ನಗರ, ದೆಹಲಿ, ಮತ್ತು ದುರ್ಗ್ ಎಂದೇಳಲಾಗಿದೆ.

ಜನರು ಕೋವಿಡ್ ಸೂಕ್ತವಾದ ನಡವಳಿಕೆಯನ್ನು ಅನುಸರಿಸುತ್ತಾರೆ ಎಂದು ಖಚಿತಪಡಿಸಿಕೊಳ್ಳಲು ನಿನ್ನೆ ಬೆಂಗಳೂರು ನಾಗರಿಕ ಸಂಸ್ಥೆ ಸುಮಾರು 2,000 ಹೋಮ್ ಗಾರ್ಡ್‌ಗಳನ್ನು ನಿಯೋಜಿಸಲು ನಿರ್ಧರಿಸಿತು.

ಕರ್ನಾಟಕ ಮಹಾರಾಷ್ಟ್ರ ಮತ್ತು ಕೇರಳದ ನಂತರ ದೇಶದ ಮೂರನೇ ಅತಿ ಹೆಚ್ಚು ಹಾನಿಗೊಳಗಾದ ರಾಜ್ಯವಾಗಿದೆ. ನಿನ್ನೆ ರಾಜ್ಯದಲ್ಲಿ 6,000 ಕ್ಕೂ ಹೆಚ್ಚು ಹೊಸ ಪ್ರಕರಣಗಳು ದಾಖಲಾಗಿದ್ದು ಸುಮಾರು 40 ಸೋಂಕಿತರು ಬಲಿಯಾಗಿದ್ದಾರೆ. ಇವುಗಳಲ್ಲಿ 4,266 ಪ್ರಕರಣಗಳು ಬೆಂಗಳೂರು ನಗರದಿಂದಲೇ ಮಾತ್ರ ವರದಿಯಾಗಿವೆ.

ಮಾರ್ಚ್ 29 ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಸಭೆಯ ಅಧ್ಯಕ್ಷತೆ ವಹಿಸಿ ಆತಂಕಕಾರಿಯಾದ ಸ್ಪೈಕ್ ಅನ್ನು ಎದುರಿಸುವ ಮಾರ್ಗಗಳನ್ನು ಚರ್ಚಿಸಿದರು. ಆದರೂ ಲಾಕ್ ಡೌನ್ ನನ್ನು ಸರ್ಕಾರ ಪರಿಗಣಿಸಲಿಲ್ಲ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights