Fact check: ಬೀದರ್‌ನಲ್ಲಿ ಹಿಜಾಬ್‌ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ನರ್ಸಿಂಗ್ ಪರೀಕ್ಷೆಗೆ ಪ್ರವೇಶ ನಿರಾಕರಿಸಿಲ್ಲ

ಬೀದರ್ BRIMS ಕಾಲೇನಿನಲ್ಲಿ ನಡೆಯುತ್ತಿರುವ ನರ್ಸಿಂಗ್ ಪ್ರವೇಶ ಪರೀಕ್ಷೆಯಲ್ಲಿ  ಮುಸ್ಲಿಂ ವಿಧ್ಯಾರ್ಥಿನಿಯರು ಹಿಜಾಬ್ ಧರಿಸಿದ್ದರು ಎಂಬ ಕಾರಣಕ್ಕೆ ಪ್ರವೇಶ ನಿರಾಕರಿಸಿದ್ದಾರೆ ಎಂಬ ವಿಡಿಯೋವೊಂದು ಟ್ವಿಟರ್‌ನಲ್ಲಿ ಬಾರಿ ವೈರಲ್ ಆಗುತ್ತಿದೆ. ಸದ್ಯ ನ್ಯಾಯಾಲಯ ನೀಡಿರುವ ಮಧ್ಯಂತರ ಆದೇಶದಂತೆ ಹಿಜಾಬ್ ಧರಿಸಿ ಬರುತ್ತಿದ್ದ ಮುಸ್ಲಿಂ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯುವಂತಿಲ್ಲ ಎಂದು ಕೆಲವರು ಆತಂಕ ವ್ಯಕ್ತಪಡಿಸಿದ್ದಾರೆ. ಇದರ ಫ್ಯಾಕ್ಟ್ ಚೆಕ್ ಮಾಡೋಣ.

ಫ್ಯಾಕ್ಟ್‌ಚೆಕ್:

ಸಾಮಾಜಿಕ ಮಾದ್ಯಮಗಳಲ್ಲಿ ವೈರಲ್ ಆಗುತ್ತಿರುವ ಸುದ್ದಿಯನ್ನು ಪರಿಶೀಲಿಸಲಾಗಿದ್ದು ಬೀದರ್ ನಲ್ಲಿ ನರ್ಸಿಂಗ್ ಪರೀಕ್ಷೆಗಳು ನಡೆಯುತ್ತಿದ್ದು ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ನಿರಾಕರಿಸಿರುವ ಪ್ರಕರಣಗಳು ಎಲ್ಲಿಯೂ ವರದಿಯಾಗಿಲ್ಲ. ಈ ಕುರಿತು ಬೀದರ್‌ನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಬೀದರ್ ಇನ್ಸ್ಟಿಟ್ಯೂಟ್‌ ಆಫ್ ಮೆಡಿಕಲ್ ಸೈನ್ಸ್ ನ ಅಡ್ಮಿನ್ ಕೂಡ ಪರೀಕ್ಷೆ ನಿರಾಕರಣೆ ಸುದ್ದಿಯನ್ನು ಅಲ್ಲೆಗಳೆದಿದ್ದು ಇಂತಹ ಘಟನೆ ನಡೆದಿಲ್ಲ ನಾವು ಎಲ್ಲರಿಗೂ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟಿದ್ದೇವೆ ಎಂದು ತಿಳಿಸಿದ್ದಾರೆ.

ಟ್ವಿಟರ್‌ನಲ್ಲಿ ವೈರಲ್ ಆದ ಸುದ್ದಿಯ ಬಗ್ಗೆ ರೀ ಟ್ವಿಟ್ ಮಾಡಿರುವ ಆಲ್ಟ್ ನ್ಯೂಸ್ ನ ವರದಿಗಾರರಾದ ಮೊಹಮದ್ ಝುಬೇರ್ ಅವರು ಯಾವುದೇ ಪೂರ್ವಾಪರ ಇಲ್ಲದೆ ಇಂತಹ ಸುಳ್ಳುಸುದ್ದಿಯನ್ನು ಹರಡಬೇಡಿ ಎಂದು ಮನವಿ ಮಾಡಿದ್ದಾರೆ.

https://twitter.com/zoo_bear/status/1492045012476907520

ಒಟ್ಟಾರೆಯಾಗಿ ಹೇಳುವುದಾದರೆ ಹಿಜಾಬ್ ಮತ್ತು ಕೇಸರಿ ಶಾಲು ವಿವಾದದ ಹಿನ್ನಲೆಯಲ್ಲಿ  ಬೀದರ್‌ನಲ್ಲಿ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ನರ್ಸಿಂಗ್ ಪರೀಕ್ಷೆ ಬರೆಯಲು ನಿರಾಕರಿಸಲಾಗಿದೆ ಎಂಬುದು ಸುಳ್ಳು ಸುದ್ದಿ.


ಇದನ್ನು ಓದಿರಿ: Fact check: ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಜೀರ್ ಫೋಟೊ ಎಡಿಟ್ ಮಾಡಿ ಸುಳ್ಳು ಸುದ್ದಿ ಹಂಚಿಕೆ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights