ನಿತೀಶ್‌ ಸಂಪುಟ: ಮೂರೇ ದಿನಕ್ಕೆ ರಾಜೀನಾಮೆ ನೀಡಿದ ಬಿಹಾರ ಸಚಿವ!

ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟ ನಾಲ್ಕನೇ ಬಾರಿಗೆ ಅಧಿಕಾರ ಗದ್ದುಗೆ ಏರಿದೆ. ನಿತೀಶ್‌ ಕುಮಾರ್‌ ಮತ್ತು 14 ಸಚಿವ ಸಂಪುಟದ ಸದಸ್ಯರು ಪ್ರಮಾಣ ವಚನ ಸ್ವೀಕರಸಿದ್ದಾರೆ. ಆದರೆ, ಪ್ರಮಾಣ ವಚನ ಸ್ವೀಕರಿಸಿದ ಮೂರೇ ದಿನಕ್ಕೆ ಸಚಿವರ ರಾಜೀನಾಮೆ ಪರ್ವ ಆರಂಭವಾಗಿದೆ. ವಿರೋಧ ಪಕ್ಷ ಆರ್‌ಜೆಡಿ (ರಾಷ್ಟ್ರೀಯ ಜನತಾದಳ)ಯು ಮೂರು ವರ್ಷಗಳಿಂದ ಭ್ರಷ್ಟಾಚಾರ ಪ್ರಕರಣ ಎದುರಿಸುತ್ತಿರುವ ಶಾಸಕರನ್ನು ಹೇಗೆ ಸರ್ಕಾರ ಸಂಪುಟಕ್ಕೆ ಸೇರಿಸಿಕೊಂಡಿದೆ ಎಂದು ಟೀಕೆಗಳನ್ನು ಮಾಡಿದ ನಂತರ ಶಿಕ್ಷಣ ಸಚಿವ ಮೇವಾಲಾಲ್‌ ಚೌಧರಿ ರಾಜೀನಾಮೆ ನೀಡಿದ್ದಾರೆ.

ಭಾಗಲ್ಪುರ್ ಕೃಷಿ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಮತ್ತು ಕಿರಿಯ ವಿಜ್ಞಾನಿಗಳ ಹುದ್ದೆಗಳಿಗೆ ನೇಮಕಾತಿಯ ಅಕ್ರಮಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪ ಹೊತ್ತಿರುವ ಜೆಡಿಯು ಶಾಸಕ ಮೇವಾಲಾಲ್‌ ಚೌಧರಿ ವಿರುದ್ಧ 2017 ರಲ್ಲಿ ಕ್ರಿಮಿನಲ್ ಮೊಕದ್ದಮೆ ಹೂಡಲಾಗಿತ್ತು.

ಆ ಸಂದರ್ಭದಲ್ಲಿ ಬಿಹಾರ ರಾಜ್ಯಪಾಲರಾಗಿದ್ದ (ಇಂದಿನ ರಾಷ್ಟ್ರಪತಿ) ರಾಮ್ ನಾಥ್ ಕೋವಿಂದ್ ಅವರು ಅನುಮೋದನೆ ನೀಡಿದ ನಂತರ ಅವರ ವಿರುದ್ಧ ತನಿಖೆ ನಡೆಸಲಾಗಿದೆ. ಆದರೆ, ಇದೂವರೆಗೂ ಯಾವುದೇ ಚಾರ್ಜ್‌ಶೀಟ್ ದಾಖಲಾಗಿಲ್ಲ.

ನಾಲ್ಕು ಬಾರಿ ಮುಖ್ಯಮಂತ್ರಿಯಾಗಿರುವ ನಿತೀಶ್ ಕುಮಾರ್ ಅವರು ರಾಜ್ಯದಲ್ಲಿ ಅಧಿಕಾರವನ್ನು ಉಳಿಸಿಕೊಳ್ಳಲು “ಅಪರಾಧಿಗಳನ್ನು” ನೇಮಕ ಮಾಡಿದ್ದಾರೆ ಎಂದು ಟೀಕಿಸಿ ತೇಜಸ್ವಿ ಯಾದವ್‌ ಸರಿಣಿ ಟ್ವೀಟ್‌ ಮಾಡಿದ್ದಾರೆ.

“ಅಧಿಕಾರವು ಅಪರಾಧಿಗಳನ್ನು ರಕ್ಷಿಸುತ್ತಿದೆ… ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮೇವಾಲಾಲ್ ಚೌಧರಿಯನ್ನು ನೇಮಿಸುವ ಮೂಲಕ ಲೂಟಿ ಮತ್ತು ದರೋಡೆ ಮಾಡಿದವರಿಗೆ ಅವಕಾಶ ನೀಡಿದ್ದಾರೆ… ಮುಖ್ಯಮಂತ್ರಿ ತಮ್ಮ ಕುರ್ಚಿಯನ್ನು ಉಳಿಸಲು ಅಪರಾಧ, ಭ್ರಷ್ಟಾಚಾರ ಮತ್ತು ಕೋಮುವಾದದ ಬಗ್ಗೆ ತಮ್ಮ ಪ್ರವಚನವನ್ನು ಮುಂದುವರಿಸುತ್ತಾರೆ…” ಎಂದು ಅವರು ಪೋಸ್ಟ್ ಮಾಡಿದ್ದಾರೆ.


ಇದನ್ನೂ ಓದಿ: ಬಿಹಾರದಲ್ಲಿ ಸೋತರೂ ರಾಹುಲ್‌ ಪರನಿಂತ ಜನ: ಟ್ವಿಟರ್‌ನಲ್ಲಿ ನನ್ನ ನಾಯಕ ರಾಹುಲ್‌ಗಾಂಧಿ; ಟ್ರೆಂಡಿಂಗ್‌

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights