ಮುಂಬೈನ ಮೂರು ರೈಲ್ವೇ ನಿಲ್ದಾಣ, ಅಮಿತಾಬ್‌ ಬಚ್ಚನ್‌ ಬಂಗಲೆ ಬಳಿ ಬಾಂಬ್‌ ಇಟ್ಟಿರುವುದಾಗಿ ಬೆದರಿಕೆ ಕರೆ!

ಮುಂಬೈನ ಮೂರು ಪ್ರಮುಖ ರೈಲ್ವೆ ನಿಲ್ದಾಣಗಳು ಮತ್ತು ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರ ಬಂಗಲೆಯ ಬಳಿ ಬಾಂಬ್‌ಗಳನ್ನು ಇಡಲಾಗಿದೆ ಎಂದು ಅನಾಮಧೇಯ ಕರೆ ಬಂದಿದ್ದು, ಈ ಹಿನ್ನೆಲೆಯಲ್ಲಿ, ಈ ಎಲ್ಲಾ ಸ್ಥಳಗಳಲ್ಲಿಯೂ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆದಾಗ್ಯೂ, ಶೋಧದ ಸಮಯದಲ್ಲಿ ಇದುವರೆಗೆ ಸಂಶಯಾಸ್ಪದವಾಗಿ ಏನೂ ಕಂಡುಬಂದಿಲ್ಲ ಎಂದು ಅವರು ಹೇಳಿದ್ದಾರೆ.

ಮುಂಬೈ ಪೊಲೀಸರ ಮುಖ್ಯ ಕಂಟ್ರೋಲ್ ರೂಂಗೆ ಆಗಸ್ಟ್ 6 ರ ರಾತ್ರಿ ಕರೆ ಬಂದಿತ್ತು. ಆ ಕರೆಯಲ್ಲಿ, ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (CSMT), ಬೈಕುಲ್ಲಾ ರೈಲ್ವೇ ನಿಲ್ದಾಣ, ದಾದರ್ ರೈಲ್ವೇ ನಿಲ್ದಾಣ ಮತ್ತು ಜುಹುದಲ್ಲಿರುವ ಬಚ್ಚನ್ ಅವರ ಬಂಗಲೆಯಲ್ಲಿ ಬಾಂಬ್‌ಗಳನ್ನು ಇರಿಸಲಾಗಿದೆ ಎಂದು ಹೇಳಿದರು ಎಂಧು ಪೊಲೀಸರು ತಿಳಿದ್ದಾರೆ.

ಕರೆ ಬಂದ ನಂತರ ಸರ್ಕಾರಿ ರೈಲ್ವೆ ಪೊಲೀಸರು, ರೈಲ್ವೆ ರಕ್ಷಣಾ ಪಡೆ ಮತ್ತು ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ, ಶ್ವಾನದಳ ಮತ್ತು ಸ್ಥಳೀಯ ಪೊಲೀಸ್ ಸಿಬ್ಬಂದಿ ಈ ಸ್ಥಳಗಳಿಗೆ ಧಾವಿಸಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಆದರೆ, ಯಾವ ಸ್ಥಳದಲ್ಲಿಯೂ ಬಾಂಬ್‌ಗಳು ದೊರೆತಿಲ್ಲ. ಇದು ಹುಸಿ ಕರೆ ಎಂದು ಕಂಡುಬಂದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೊಲೀಸರು ಕರೆ ಮಾಡಿದ ವ್ಯಕ್ತಿ ಮತ್ತು ಅವನ ಸ್ಥಳವನ್ನು ಪತ್ತೆ ಹಚ್ಚುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಈ ಸ್ಥಳದಲ್ಲಿ ಇಲ್ಲಿಯವರೆಗೆ ಯಾವುದೇ ಅನುಮಾನಾಸ್ಪದ ಸಂಗತಿ ಕಂಡುಬಂದಿಲ್ಲ, ಆದರೆ ಅಲ್ಲಿ ಭಾರಿ ಪೊಲೀಸ್ ನಿಯೋಜನೆ ಮಾಡಲಾಗಿದೆ ಎಂದು ಅವರು ಹೇಳಿದರು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ಧ್ಯಾನ್‌ ಚಂದ್‌ ಹೆಸರಿಗೆ ಮರುನಾಮಕರಣ: ಮೋದಿ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights