ಅರ್ನಬ್‌ ಗೋಸ್ವಾಮಿಗೆ ಜೈಲಿನಲ್ಲೇ ದೀಪಾವಳಿ: ಜಾಮೀನು ನೀಡಲು ಬಾಂಬೆ ಹೈಕೋರ್ಟ್‌ ನಕಾರ!

ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ರಿಪಬ್ಲಿಕ್‌ ಟಿವಿಯ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ಅವರಿಗೆ ಮಧ್ಯಂತರ ಜಾಮೀನು ನೀಡಲು ಬಾಂಬೆ ಹೈಕೋರ್ಟ್‌ ನಿರಾಕರಿಸಿದೆ.

ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣದಲ್ಲಿ ಮುಂಬೈ ಪೊಲೀಸರು ಗೋಸ್ವಾಮಿ ಅವರನ್ನು ನವೆಂಬರ್ 04 ರಂದು ಬಂಧಿಸಿದ್ದಾರೆ. ಅರ್ನಬ್ ಜಾಮೀನು ಅರ್ಜಿಯ ವಿಚಾರಣೆಯನ್ನು ಕಳೆದ ಶನಿವಾರ ವಿಚಾರಣೆ ನಡೆಸಿದ್ದ ಬಾಂಬೆ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿತ್ತು. ಇಂದು ತೀರ್ಪು ನೀಡದ ಕೋರ್ಟ್‌, ಜಾಮೀನು ನೀಡಲು ನಿರಾಕರಿಸಿದೆ.

2018 ರಲ್ಲಿ ನಡೆದ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಮತ್ತು ಅವರ ತಾಯಿ ಕುಮುದ್ ನಾಯಕ್ ಸಾವಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಿಐಡಿ ಪೊಲೀಸರು ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿಯನ್ನು ನವೆಂಬರ್ 4 ರಂದು ಬೆಳಿಗ್ಗೆ ವಶಕ್ಕೆ ಪಡೆದುಕೊಂಡಿತ್ತು.

ಮಧ್ಯಂತರ ಜಾಮೀನಿನ ಕುರಿತು ತೀರ್ಪು ನೀಡಿದ ಬಾಂಬೆ ಹೈಕೋರ್ಟ್ “ಆರೋಪಿಯು ಸೆಷನ್ಸ್ ನ್ಯಾಯಾಲಯವನ್ನು ಸಂಪರ್ಕಿಸಬಹುದು. ಸಂಬಂಧಿತ ನ್ಯಾಯಾಲಯವು ಅರ್ಜಿಯನ್ನು ನಿರ್ದಿಷ್ಟಪಡಿಸಿದ ಸಮಯ ಮಿತಿಯಲ್ಲಿ (4 ದಿನಗಳು) ನಿರ್ಧರಿಸುತ್ತದೆ ಎಂದಿದೆ.


ಇದನ್ನೂ ಓದಿ: ಗೋಸ್ವಾಮಿಯನ್ನು ಸಮರ್ಥಿಸಿಕೊಳ್ಳಲು ಸುಳ್ಳು ಸುದ್ದಿ ಪ್ರಕಟಿಸಿದ OpIndia ಸುದ್ದಿಸೈಟ್!‌

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights