ಜೆಡಿಎಸ್‌ನಲ್ಲಿದೆ ಬಕೆಟ್‌ ರಾಜಕಾರಣ; ಉಪಾಧ್ಯಕ್ಷ ಸ್ಥಾನಕ್ಕೆ ಪ್ರದೀಪ್ ಗೌಡ ರಾಜೀನಾಮೆ!

ಕೆಆರ್‌ಎಸ್‌ ಅಣೆಕಟ್ಟಿನಲ್ಲಿ ಬಿರುಕು ಮೂಡುತ್ತಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಮಂಡ್ಯ ಸಂಸದೆ ಸುಮಲತಾ ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ನಡುವೆ ವಾಕ್ಸಮ ತಾರಕ್ಕೇರಿದೆ. ಈ ಮಧ್ಯೆಯೇ, ಜೆಡಿಎಸ್‌ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ಪ್ರದೀಪ್ ಗೌಡ ಮಾಲಿ ಪಾಟೀಲ್ ರಾಜೀನಾಮೆ ನೀಡಿದ್ದು, ನಿಷ್ಟಾವಂತ ಕಾರ್ಯಕರ್ತರಿಗೆ ಬೆಲೆ ಇಲ್ಲ. ಬಕೆಟ್ ಹಿಡಿಯೋರಿಗೆ, ಕಿವಿ ಕಡಿಯುವವರಿಗೆ ಮಾತ್ರವೇ ಸ್ಥಾನಮಾನ ಸಿಗುತ್ತದೆ ಎಂದು ಆರೋಪಿಸಿದ್ದಾರೆ.

ಉತ್ತರ ಕರ್ನಾಟಕ ಭಾಗವನ್ನು ಕುಮಾರಸ್ವಾಮಿ, ದೇವೇಗೌಡರು, ರಾಜ್ಯಾಧ್ಯಕ್ಷ ಎಚ್ ಕೆ ಕುಮಾರಸ್ವಾಮಿ ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ. ಇದರಿಂದಾಗಿಯೇ ಈ ಭಾಗದಲ್ಲಿ ಪಕ್ಷ ಬೆಳೆಯುತ್ತಿಲ್ಲ. ಕುಮಾರಸ್ವಾಮಿ ಅವರು ಬಕೆಟ್ ಹಿಡಿಯುವವರ ಮಾತು ಕೇಳುತ್ತಾರೆ. ಪಕ್ಷದ ನಿಜವಾದ ಕಾರ್ಯಕರ್ತರಿಗೆ ಬೆಂಬಲ ಇಲ್ಲ. ಹೀಗಾಗಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ನಾನು ರಾಜೀನಾಮೆ ನೀಡುತ್ತಿದ್ದೇನೆ ಎಂದು ಪಾಟೀಲ್‌ ಹೇಳಿದ್ದಾರೆ.

ಕಳೆದ ಕೆಲವು ದಶಕಗಳಿಂದ ಜೆಡಿಎಸ್ ಪಕ್ಷಕ್ಕಾಗಿ ನಿಷ್ಠಾವಂತ ಕಾರ್ಯಕರ್ತನಾಗಿ ದುಡಿದಿದ್ದೇನೆ. ಆದರೂ ಸೂಕ್ತ ಸ್ಥಾನಮಾನವೇ ಸಿಕ್ಕಿಲ್ಲ. ಎರಡು ಬಾರಿ ವಿಧಾನಸಭೆ ಚುನಾವಣೆಗೆ ಸ್ಪರ್ಥಿಸಿದ್ದಾಗಲೂ ಪಕ್ಷದ ವರಿಷ್ಠರು ನನಗೆ ಬೆಂಬಲ ನೀಡಲಿಲ್ಲ ಎಂದು ಕೊಪ್ಪಳದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಪ್ರದೀಪ್‌ ಪಾಟೀಲ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: 2023ರ ಕರ್ನಾಟಕ ಚುನಾವಣೆ; BSYಗೆ ಸೆಡ್ಡುಹೊಡೆದು ಅಧಿಕಾರ ಹಿಡಿಯಲು ಬಿಜೆಪಿ ಕಸರತ್ತು!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights