ದೆಹಲಿಯಲ್ಲಿ ಕಟ್ಟಡ ಕುಸಿತ : ಮಕ್ಕಳು ಸೇರಿದಂತೆ ಹಲವಾರು ಜನ ಸಿಲುಕಿರುವ ಶಂಕೆ!
ಉತ್ತರ ದೆಹಲಿಯಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದಿದ್ದು ಮಕ್ಕಳು ಸೇರಿದಂತೆ ಹಲವಾರು ನಿವಾಸಿಗಳು ಸಿಲುಕಿರುವ ಶಂಕೆ ಇದೆ.
ಬೆಳಿಗ್ಗೆ 11.50 ರ ಸುಮಾರಿಗೆ ಉತ್ತರ ದೆಹಲಿಯ ಸಬ್ಜಿ ಮಂಡಿ ಪ್ರದೇಶದಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದಿದೆ. ದೆಹಲಿಯ ಮಲ್ಕಾ ಗಂಜ್ ಬಳಿ ರಾಬಿನ್ ಚಿತ್ರಮಂದಿರದ ಎದುರು ಇರುವ ಈ ಕಟ್ಟಡ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದೆ.
ಮಕ್ಕಳು ಸೇರಿದಂತೆ ಹಲವಾರು ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆಂದು ಸ್ಥಳೀಯ ನಿವಾಸಿಗಳು ಹೇಳುತ್ತಿದ್ದಾರೆ. ಈ ಬಗ್ಗೆ ದೆಹಲಿ ಸಿಎಂ ಟ್ವಿಟ್ ಮಾಡಿದ್ದಾರೆ.
“ಸಬ್ಜಿ ಮಂಡಿ ಪ್ರದೇಶದಲ್ಲಿ ಕಟ್ಟಡ ಕುಸಿದ ಘಟನೆ ಅತ್ಯಂತ ದುಃಖಕರವಾಗಿದೆ. ಆಡಳಿತಾಧಿಕಾರಿಗಳು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ನಾನೇ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದೇನೆ” ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಟ್ವೀಟ್ ಮೂಲಕ ತಿಳಿಸಿದ್ದಾರೆ.