2021-2022 ಬಜೆಟ್ ನಲ್ಲಿ ಮಹಿಳೆಯರಿಗೆ ಬಂಪರ್ ಗಿಫ್ಟ್…!

ರಾಜ್ಯ ಸರ್ಕಾರ 2021-2022 ಬಜೆಟ್ ನಲ್ಲಿ ಮಹಿಳೆಯರಿಗೆ ಬಂಪರ್ ಗಿಫ್ಟ್ ಕೊಟ್ಟಿದೆ. ಈ ಬಾರಿ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡಿ ಭರ್ಜರಿ ಗಿಫ್ಟ್ ಕೊಟ್ಟಿದ್ದಾರೆ.

ಮಹಾಮಾರಿ ಕೊರೋನಾ ಸಾಂಕ್ರಾಮಿಕ ರೋಗದ ಬಳಿಕ ಎದುರಾದ ಆರ್ಥಿಕ ಸಂಕಷ್ಟ ಸೇರಿದಂತೆ ಸಾಲು ಸಾಲು ಸವಾಲುಗಳ ನಡುವಲ್ಲೂ ಸೋಮವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ 8ನೇ ಬಜೆಟ್ ಮಂಡನೆ ಮಾಡುತ್ತಿದ್ದಾರೆ.

ವಿಧಾನಸಭೆಯಲ್ಲಿ ಪ್ರಸಕ್ತ ಸಾಲಿನ ಆಯವ್ಯಯ ಮಂಡನೆ ಮಾಡುತ್ತಿರುವ ಯಡಿಯೂರಪ್ಪ ಅವರು ಮಹಿಳೆಯರಿಗೆ ವಿಶೇಷವಾದ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.

ಬಜೆಟ್ ಮಂಡನೆಗೆ ಕಾಂಗ್ರೆಸ್ ವಿರೋಧದ ನಡುವೆಯೂ ಬಿಎಸ್ ಯಡಿಯೂರಪ್ಪ ಬಜೆಟ್ ಮಂಡನೆ ಮಾಡುತ್ತಿದ್ದಾರೆ. 2021-22 ಬಜೆಟ್ ನಲ್ಲಿ ಮಹಿಳೆಯರಿಗೆ ನೀಡಿದ ಆಧ್ಯತೆಗಳೇನು ಅದರ ಪ್ರಮುಖ ಮುಖ್ಯಾಂಶಗಳು ಹೀಗಿದೆ.

ಸಂಕಷ್ಟದ ನಡುವೆ ಸರ್ಕಾರ ಕೆಲಸ ಮಾಡಿದೆ. ಬಿಎಂಟಿಸಿ ಬಸ್ ನಲ್ಲಿ ಮಹಿಳೆಯರಿಗೆ ರಿಯಾತಿ ನೀಡಲಾಗಿದೆ. 60 ಸಾವಿರ ಮಹಿಳೆಯರಿಗೆ ಉದ್ಯೋಗ, ಸರ್ಕಾರಿ ಮಹಿಳಾ ಉದ್ಯೋಗಿಗಳಿಗೆ ಪ್ರಸೂತಿ ರಜೆ, ನಿರ್ಭಯ ಯೋಜನೆ ಅಡಿ ಬೆಂಗಳೂರಿನಲ್ಲಿ 7500 ಕ್ಯಾಮಾರಗಳು ಅಳವಡಿಕೆ, ಜಿಲ್ಲೆ ಕೇಂದ್ರಗಳಲ್ಲಿ 2 ಶಿಶಿಪಾಲನಾ ಕೇಂದ್ರಗಳು, ಮಹಿಳಾ ಉದ್ಯಮಿಗಳಿಗೆ ಶೇ.4 ಬಡ್ಡಿದರದಲ್ಲಿ ಸಾಲ, ವನಿತಾ ಸಂಗಾತಿ ಹೆಸರಿನಲ್ಲಿ ಮಹಿಳೆಯರಿಗೆ ಉಚಿತ ಬಸ್ ಪಾಸ್. ಹಪ್ಪಳ, ಉಪ್ಪಿನ ಕಾಯಿ ತಯಾರಿಕರಿಗೆ ಆನ್ ಲೈನ್ ಮಾರಾಟ, ಮಹಿಳಾ ಉದ್ಯೋಗಿಗಳಿಗೆ ಶೇ.2 ರಷ್ಟು ಬಡ್ಡಿ ಸಾಲ ಬಜೆಟ್ ನಲ್ಲಿ ಘೋಷಿಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights