ಸಿಧು ಪದಗ್ರಹಣಕ್ಕೆ ತೆರಳುತ್ತಿದ್ದ ಬಸ್ ಅಪಘಾತ : ಐವರು ದುರ್ಮರಣ!

ಸಿಧು ಪದಗ್ರಹಣಕ್ಕೆ ತೆರಳುತ್ತಿದ್ದ ಬಸ್ ಅಪಘಾತವಾಗಿ ಐವರು ದುರ್ಮರಣ ಹೊಂದಿದ್ದು ಹಲವರ ಸ್ಥಿತಿ ಗಂಭೀರವಾಗಿದೆ.

ನವಜೋತ್ ಸಿಂಗ್ ಸಿಧು ಪಂಜಾಬ್ ಪ್ರದೇಶ ಕಾಂಗ್ರೆಸ್ ಕಮಿಟಿ ಅಧ್ಯಕ್ಷರಾಗಿ ಪದಗ್ರಹಣ ಸ್ವೀಕಾರ ಸಮಾರಂಭಕ್ಕೆ ತೆರಳುತ್ತಿದ್ದ ವೇಳೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಎರಡು ಬಸ್ ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಮೊಗಾ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಹರ್ಮನ್‌ಬೀರ್ ಸಿಂಗ್ ಗಿಲ್ ತಿಳಿಸಿದ್ದಾರೆ.

ಮೋಗಾದ ಲೋಕರಾ ಗ್ರಾಮದ ಬಳಿ ದುರಂತ ಸಂಭವಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ಬಗ್ಗೆ ಸ್ಥಳೀಯರಿಂದ ಮಾಹಿತಿ ಪಡೆಯುತ್ತಿದ್ದಾರೆ.

“ಮೊಗಾ ಜಿಲ್ಲೆಯಲ್ಲಿ 3 ಕಾಂಗ್ರೆಸ್ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಮತ್ತು ಅನೇಕ ಜನರು ಗಾಯಗೊಂಡಿದ್ದಾರೆ. ಗಾಯಗೊಂಡ ಎಲ್ಲರಿಗೂ ತಕ್ಷಣವೇ ಸಂಪೂರ್ಣ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಮತ್ತು ಸರ್ಕಾರಕ್ಕೆ ವರದಿ ಕಳುಹಿಸುವಂತೆ ಡಿಸಿ ಮೊಗಾ ಅವರಿಗೆ ನಿರ್ದೇಶನ ನೀಡಲಾಗಿದೆ ”ಎಂದುಪಂಜಾಬ್ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಹೇಳಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights