1 ರಿಂದ 9ನೇ ತರಗತಿ ಪರೀಕ್ಷೆ ರದ್ದು; ಪರೀಕ್ಷೆ ಬರೆಯದೇ ವಿದ್ಯಾರ್ಥಿಗಳು ಪಾಸ್‌!

ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಆಕ್ರಮಣ ಹೆಚ್ಚಾಗಿದೆ. ಪ್ರತಿ ದಿನವೂ ಹೊಸ ಪ್ರಕರಣಗಳ ಸಂಖ್ಯೆ ದಾಖಲೆ ಬರೆಯುತ್ತಿವೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ರಾಜ್ಯದಲ್ಲಿ 1 ರಿಂದ 9ನೇ ತರಗತಿ ಪರೀಕ್ಷೆಗಳನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ರದ್ದುಗೊಳಿಸಿ ಆದೇಶಿಸಿದೆ.

ಕೊರೊನಾ ಉಲ್ಬಣಗೊಳ್ಳುತ್ತಿರುವ ಸಂದರ್ಭದಲ್ಲಿ ಪರೀಕ್ಷೆಗಳನ್ನು ನಡೆಸುವುದು ಸಮಂಜಸವಲ್ಲ ಎಂದು ಹಲವಾರು ತಜ್ಞರು ಸಲಹೆ ನೀಡಿದ್ದರು. ಈ ಬಗ್ಗೆ ನಿರ್ಧಾರ ಪ್ರಕಟಿಸಿರುವ ಶಿಕ್ಷಣ ಇಲಾಖೆ, 1ರಿಂದ 9ನೇ ತರಗತಿಯವರೆಗಿನ ಪರೀಕ್ಷೆಗಳನ್ನು ರದ್ದು ಮಾಡಿದ್ದು, ಪರೀಕ್ಷೆ ಬರೆಯದೇ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆಗೊಳಿಸಲಾಗುವುದು ಎಂದು ಹೇಳಿದೆ.

ರಾಜ್ಯದಲ್ಲಿ ಕೊರೋನಾ 2ನೇ ಅಲೆಯ ಅಬ್ಬರ ಹೆಚ್ಚಾಗುತ್ತಿದೆ. ಇದರ ನಡುವೆ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಸೋಂಕು ತಗುಲುವು ಭೀತಿ ಹೆಚ್ಚಿದೆ. ತಜ್ಞರು ಕೂಡ ಇದನ್ನೇ ಅಭಿಪ್ರಾಯ ಪಟ್ಟಿದ್ದಾರೆ. ಹೀಗಾಗಿ ರಾಜ್ಯದಲ್ಲಿನ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೇ ಈ ವರ್ಷ ಪಾಸ್ ಮಾಡಲಾಗುತ್ತಿದೆ ಎಂಬು ತಮ್ಮ ಪ್ರಕಟಣೆಯಲ್ಲಿ ಶಿಕ್ಷಣ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಲಾಕ್‌ಡೌನ್‌ಗೆ ಸಚಿವ-ಶಾಸಕರ ವಿರೋಧ; ಸರ್ವಪಕ್ಷಗಳ ಸಭೆ ಕರೆದ ರಾಜ್ಯಪಾಲರು!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights