ಸಿಎಂ ಜಗನ್‌ ರೆಡ್ಡಿ ವಿರುದ್ಧ ಪ್ರಕರಣ: ವಿಚಾರಣೆ ನಡೆಸಲು ಹಿಂದೆ ಸರಿದ ನ್ಯಾ. ಉದಯ್ ಲಲಿತ್

ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ವಿರುದ್ಧ ದಾಖಲಿಸಲಾಗಿರುವ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆ ನಡೆಸಲು ನ್ಯಾಯಮೂರ್ತಿ ಯು ಉದಯ್ ಲಲಿತ್ ಹಿಂದೆ ಸರಿಸಿದ್ದಾರೆ.

ಸಿಎಂ ಜಗನ್‌ ಮೋಹನರೆಡ್ಡಿಯವರು ನ್ಯಾಯಮೂರ್ತಿ ಎನ್‌ವಿ ರಮಣ ವಿರುದ್ಧ ಮುಖ್ಯ ನ್ಯಾಯಮೂರ್ತಿ ಎಸ್‌ಎ ಬೊಬ್ಡೆ ಅವರಿಗೆ ಪತ್ರ ಬರೆದಿದ್ದರು. ಯಾವುದೇ ಆಧಾರವಿಲ್ಲದೆ ನ್ಯಾ. ಎನ್‌ವಿ ರಮಣ ವಿರುದ್ಧ ಆರೋಪ ಮಾಡಲಾಗಿದೆ ಎಂದು ಜಗನ್ ಮೋಹನ್ ರೆಡ್ಡಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಕ್ಕೆ ಇಳಿಸಲು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ನ್ಯಾಯಪೀಠವು ಸೋಮವಾರ ವಿಚಾರಣೆಗೆ ತೆಗೆದುಕೊಂಡಿದೆ. ಈ ಸಂದರ್ಭದಲ್ಲಿ ಪ್ರಕರಣದ ವಿಚಾರಣೆಯಲ್ಲಿ ನಾನು ಭಾಗಿಯಾಗುವುದಿಲ್ಲ ಎಂದು ನ್ಯಾ. ಉದಯ್ ಲಲಿತ್ ನಿರಾಕರಿಸಿದ್ದಾರೆ.

ಜಗನ್‌ ಮೋಹನ್‌ ರೆಡ್ಡಿ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣವನ್ನು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ಯು ಉದಯ್ ಲಲಿತ್, ವಿನೀಶ್ ಸರನ್ ಮತ್ತು ರವೀಂದ್ರ ಭಟ್ ಅವರನ್ನು ಒಳಗೊಂಡ ನ್ಯಾಯಪೀಠ ವಿಚಾರಣೆ ನಡೆಸಲಿದೆ.

ವಿಚಾರಣೆ ಬಗ್ಗೆ ಮಾತನಾಡಿರುವ ನ್ಯಾ. ಉದಯ್ ಲಲಿತ್‌, ‘ನನಗೆ ಈ ಅರ್ಜಿಯ ವಿಚಾರಣೆ ನಡೆಸುವುದು ಕಷ್ಟವಿದೆ. ನಾನು ವಕೀಲನಾಗಿದ್ದಾಗ ಈ ಕಕ್ಷಿದಾರರನ್ನು ವ್ಯಾಜ್ಯದಲ್ಲಿ ಪ್ರತಿನಿಧಿಸಿದ್ದೇನೆ. ಹೀಗಾಗಿ ಈ ಪ್ರಕರಣವನ್ನು ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ. ಮುಖ್ಯ ನ್ಯಾಯಮೂರ್ತಿಗಳು ನಿರ್ಧರಿಸುವ ಬೇರೆ ಯಾವುದೇ ನ್ಯಾಯಮೂರ್ತಿಗಳು ಈ ಪ್ರಕರಣವನ್ನು ವಿಚಾರಣೆ ಮಾಡಲಿ’ ಎಂದು ಹೇಳಿದ್ದಾರೆ.

ವಕೀಲರಾದ ಜಿಎಸ್ ಮಣಿ, ಪ್ರದೀಪ್ ಕುಮಾರ್ ಯಾದವ್ ಮತ್ತು ಎಸ್‌ಕೆ ಸಿಂಗ್ ಜಂಟಿಯಾಗಿ ಈ ನ್ಯಾಯಾಂಗ ನಿಂದನೆ ಮೊಕದ್ದಮೆ ದಾಖಲಿಸಿದೆ. ಅಕ್ರಮ ಹಣವರ್ಗಾವಣೆ ಮತ್ತು ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಅತ್ಯಂತ ಗಂಭೀರ ಸ್ವರೂಪದ 20ಕ್ಕೂ ಹೆಚ್ಚು ಅಪರಾಧ ಪ್ರಕರಣಗಳನ್ನು ಜಗನ್ ಮೋಹನ್ ಎದುರಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಸುಪ್ರೀಂಕೋರ್ಟ್‌ನಲ್ಲಿ ಎರಡನೇ ಅತ್ಯಂತ ಹಿರಿಯ ನ್ಯಾಯಮೂರ್ತಿಗಳಾಗಿರುವ ಎನ್‌ವಿ ರಮಣ ವಿರುದ್ಧ ಯಾವುದೇ ಆಧಾರಗಳಿಲ್ಲದೆ ಸಾರ್ವಜನಿಕವಾಗಿ ಮತ್ತು ಮಾಧ್ಯಮಗಳಲ್ಲಿ ಆ ಮಟ್ಟದ ಆರೋಪಗಳನ್ನು ಮಾಡಿರುವ ಜಗನ್ ಮೋಹನ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕಿತ್ತುಹಾಕಬೇಕು ಎಂದು ಅರ್ಜಿಯಲ್ಲಿ ಒತ್ತಾಯಿಸಲಾಗಿದೆ. ರೆಡ್ಡಿ ಅವರನ್ನು ಸಿಎಂ ಸ್ಥಾನದಿಂದ ತೆಗೆಯಲು ಸೂಕ್ತ ಕ್ರಮ ತೆಗೆದುಕೊಳ್ಳಲು ಸುಪ್ರೀಂಕೋರ್ಟ್ ಕೂಡಲೇ ನಿರ್ಧಾರ ಮಾಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಇಂದು ಅರ್ಜಿಯ ವಿಚಾರಣೆ ನಡೆಯಲಿದೆ.


ಇದನ್ನೂ ಓದಿ: ಬಿಎಸ್‌ವೈ ವಿರುದ್ಧ ಯತ್ನಾಳ್ ಬಂಡಾಯ: ಸಿಎಂಗೆ ಬಿಸಿತುಪ್ಪವಾಗಿರುವ ಯತ್ನಾಳ್ ಉದ್ದೇಶವೇನು?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights