ಕುಲಪತಿ ಹುದ್ದೆ ಕೊಡಿಸುವ ಆಮಿಷ; 17 ಲಕ್ಷ ರೂ ಸುಲಿಗೆ ಮಾಡಿದ್ದ ಶ್ರೀರಾಮ ಸೇನೆಯ ಮುಖಂಡ ಅರೆಸ್ಟ್‌!

ರಾಯಚೂರು ವಿಶ್ವವಿದ್ಯಾಲಯದಲ್ಲಿ ಕುಲಪತಿ ಹುದ್ದೆ ಕೊಡಿಸುವುದಾಗಿ ಪ್ರಾಧ್ಯಾಪಕರೊಬ್ಬರಿಂದ 17.5 ಲಕ್ಷ ರೂಪಾಯಿ ಪಡೆದು ವಂಚಿಸಿದ್ದ ಆರೋಪದ ಮೇಲೆ ಮಂಗಳೂರಿನ ರಾಮಸೇನೆ ಮುಖಂಡ ಪ್ರಸಾದ್ ಅತ್ತಾವರ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಹಾಗೂ ವಿವಿಯ ಕಾಲೇಜು ಅಭಿವೃದ್ಧಿ ಸಮಿತಿ ನಿರ್ದೇಶಕರಾಗಿದ್ದ ಡಾ. ಜೈಶಂಕರ್ ಅವರಿಗೆ ರಾಯಚೂರು ವಿವಿಯಲ್ಲಿ ಕುಲಪತಿ ಹುದ್ದೆ ಕೊಡಿಸುವುದಾಗಿ ಹೇಳಿ, ಹಣ ಪಡೆದುದೊಂಡು ವಂಚನೆ ಮಾಡಿದ್ದಾರೆ ಎಂದು ಸಾದ್ ಅತ್ತಾವರನನ್ನು ಪೊಲೀಸರು ಬಂಧಿಸಿದ್ದಾರೆ.

ವಿವೇಕ್ ಆಚಾರ್ಯ ಎಂಬುವವರ ಮೂಲಕ ಜೈಶಂಕರ್‌ ಅವರಿಗೆ ಪರಿಚಯವಾಗಿದ್ದ ಪ್ರಸಾದ್ ಅತ್ತಾವರ, ತನಗೆ ಸಿಎಂ ಜೊತೆಗೆ ಬಾಂಧವ್ಯ ಚೆನ್ನಾಗಿದೆ. ಅವರೊಂದಿಗೆ ಚರ್ಚಿಸಿ ಕುಲಪತಿ ಹುದ್ದೆ ಕೊಡಿಸುವುದಾಗಿ ಆಮಿಷವೊಡ್ಡಿ 30 ಲಕ್ಷ ರೂಪಾಯಿ ಕೇಳಿದ್ದ ಎಂದು ಹೇಳಲಾಗಿದೆ.

ಅಲ್ಲದೆ, ಗಣ್ಯರೊಂದಿಗೆ ಗುರುತಿಸಿಕೊಂಡ ಫೋಟೋಗಳನ್ನು ತೋರಿಸಿ ನಂಬಿಕೆ ಬರುವಂತೆ ಮಾಡಿ, 17.5 ಲಕ್ಷ ರೂಪಾಯಿ ಪಡೆದುಕೊಂಡಿದ್ದಾರೆ. ಉಳಿದ ಹಣಕ್ಕೆ 3 ಖಾಲಿ ಚೆಕ್ ಗಳನ್ನು ಕೂಡ ಪಡೆದುಕೊಂಡಿದ್ದಾರೆ. ಆದರೆ ಯಾವುದೇ ಹುದ್ದೆ ಕೊಡಿಸಿದೆ ಮೋಸ ಮಾಡಿರುವುದು ಗೊತ್ತಾಗುತ್ತಿದ್ದಂತೆ ಹಣ ವಾಪಸ್ ಕೇಳಿದಾಗ ಜೀವ ಬೆದರಿಕೆ ಹಾಕಲಾಗಿದೆ ಎಂದು ಕಂಕನಾಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಇದನ್ನೂ ಓದಿ: TMC ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದ BJP ಕಾರ್ಯಕರ್ತನ ತಾಯಿ ಸಾವು!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights