ಮುಖ್ಯ ಕಾರ್ಯದರ್ಶಿಯನ್ನು ವಾಪಸ್‌ ಕಳಿಸಲು ಸಾಧ್ಯವಿಲ್ಲ; ಮೋದಿಗೆ ಮಮತಾ ಪತ್ರ

ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಅಲಪನ್ ಬಂಡ್ಯೋಪಾಧ್ಯಾಯ ಅವರನ್ನು ಕೇಂದ್ರ ಸೇವೆಗೆ ವಾಪಸ್ ಕಳಿಸಲು ಸಾಧ್ಯವಿಲ್ಲ. ಕೇಂದ್ರವು ಅವರನ್ನು ವಾಪಸ್‌ ಕರೆಸಿಕೊಳ್ಳುವ ಆದೇಶವನ್ನು ಹಿಂತೆಗೆದುಕೊಳ್ಳಬೇಕು ಎಂದು ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ.

ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಮತಾ ಬ್ಯಾನರ್ಜಿ ಸೋಮವಾರ ಪತ್ರ ಬರೆದಿದ್ದು, ಮುಖ್ಯ ಕಾರ್ಯದರ್ಶಿಯನ್ನು ವಾಪಸ್ ಕರೆಸಿಕೊಳ್ಳುವ ಕೇಂದ್ರದ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಪ್ರಧಾನಿಯನ್ನು ಒತ್ತಾಯಿಸಿದ್ದಾರೆ.

ಕೇಂದ್ರದ ಆದೇಶವನ್ನು ಏಕಪಕ್ಷೀಯವಾಗಿದೆ. ರಾಜ್ಯ ಸರ್ಕಾರದೊಂದಿಗೆ ಯಾವುದೇ ಪೂರ್ವ ಸಮಾಲೋಚನೆಯಿಲ್ಲದೆ ಆದೇಶ ನೀಡಲಾಗಿದೆ. ಕೇಂದ್ರದ ಈ ನಿರ್ಧಾರದಿಂದ ತಾವು ಆಘಾತಕ್ಕೊಳಗಾಗಿದ್ದೇನೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಹಿಳಾ ಪೇದೆ ಮೇಲೆ ಅತ್ಯಾಚಾರ; ಪೊಲೀಸ್‌ ಅಧಿಕಾರಿ ಬಂಧನ!

ಪಶ್ಚಿಮ ಬಂಗಾಳದ ಜನರಿಗಾಗಿ ನಾನು ಮನವಿ ಮಾಡುತ್ತಿದ್ದೇನೆ, ಸಾರ್ವಜನಿಕರ ಹಿತಾಸಕ್ತಿಗಾಗಿ ನಿಮ್ಮ ಆದೇಶವನ್ನು ಕೈಬಿಡಬೇಕು, ಹಿಂದೆಗೆದುಕೊಳ್ಳಬೇಕು ಮರುಪರಿಶೀಲಿಸಬೇಕು ಎಂದು ಅವರು ತಿಳಿಸಿದ್ದು, “ಈ ನಿರ್ಣಾಯಕ ಸಂದರ್ಭದಲ್ಲಿ ಪಶ್ಚಿಮ ಬಂಗಾಳ ಸರ್ಕಾರವು ಅವರನ್ನು ಕೇಂದ್ರಕ್ಕೆ ಕಳುಹಿಸಿಕೊಡಲು ಆಗುವುದಿಲ್ಲ” ಎಂದು ಪತ್ರದಲ್ಲಿ ಹೇಳಿದ್ದಾರೆ.

ಅಚ್ಚರಿಯ ಬೆಳವಣಿಗೆಯಲ್ಲಿ ಕೇಂದ್ರವು ಮೇ 28 ರ ಶುಕ್ರವಾರದಂದು ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಅಲಪನ್‌ ಬಂಡೋಪಾಧ್ಯಾಯ ಅವರನ್ನು ಕೇಂದ್ರಕ್ಕೆ ಕಳುಹಿಸಿಕೊಡಬೇಕು ಎಂದು ರಾಜ್ಯ ಸರ್ಕಾರವನ್ನು ಕೇಳಿಕೊಂಡಿತ್ತು.

ಅದಕ್ಕೂ ಮೊದಲು ಅಲಪನ್‌ ಅವರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜೊತೆಗೆ ಮೋದಿಯನ್ನು ಭೇಟಿ ಮಾಡಿ ಯಾಸ್‌ ಚಂಡಮಾರುತದಿಂದ ಉಂಟಾದ ಹಾನಿ ಕುರಿತಾಗಿ ವರದಿ ಸಲ್ಲಿಸಿದ್ದರು. ಅಷ್ಟೇ ಅಲ್ಲದೆ ಕೇಂದ್ರವು ಕರೆದಿದ್ದ ಪುನರ್‌ ಪರಿಶೀಲಿನೆ ಸಭೆಗೆ ಅವರು ಗೈರಾಗಿದ್ದರು. ಇದರ ಬೆನ್ನಲ್ಲೆ ಅವರನ್ನು ಕೇಂದ್ರಕ್ಕೆ ವಾಪಾಸ್ ಕಳುಹಿಸಬೇಕು ಎಂದು ಕೇಂದ್ರವು ರಾಜ್ಯವನ್ನು ಕೇಳಿಕೊಂಡಿತ್ತು.

ಈ ಆದೇಶಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದ ಮಮತಾ ಬ್ಯಾನರ್ಜಿ ಕೇಂದ್ರವು ದ್ವೇಷ ರಾಜಕೀಯ ಮಾಡುತ್ತಿದೆ ಎಂದು ಹೇಳಿದ್ದರು.

ಇದನ್ನೂ ಓದಿ: ಒಂದೊಂದು ಹೆಣ ಬಿದ್ದರೂ ಬಿಜೆಪಿಗರ ಜೇಬಿಗೆ ಹಣ ಬಿದ್ದಂತೆ; ಅದಕ್ಕಾಗಿ BJPಯಲ್ಲಿ ಕಿತ್ತಾಟವಿದೆ: ಕಾಂಗ್ರೆಸ್‌ ಆರೋಪ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights