BJP ಮತ್ತು TMC ಕಾರ್ಯಕರ್ತರ ನಡುವೆ ಮಾರಾಮಾರಿ; ಹಲವರಿಗೆ ಗಾಯ

ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಮತ್ತು ಬಿಜೆಪಿಯ ಕಾರ್ಯಕರ್ತರ ನಡುವೆ ಪೂರ್ವ ಮತ್ತು ಪಶ್ಚಿಮ ಮಿಡ್ನಾಪೋರ್ ಜಿಲ್ಲೆಗಳಲ್ಲಿ ಘರ್ಷಣೆ ನಡೆದಿದ್ದು, ಹಲವರಿಗೆ ಗಾಯವಾಗಿದೆ ಎಂದು ಉಭಯ ಪಕ್ಷಗಳ ಮೂಲಗಳು ತಿಳಿಸಿವೆ.

ಟಿಎಂಸಿ ಪಕ್ಷದ ಸದಸ್ಯರು ತಮ್ಮ ಮೇಲೆ ದಾಳಿಯನ್ನು ಪ್ರಾರಂಭಿಸಿದರು. ಅವರ ಆಕ್ರಮಣಕಾರಿ ಪ್ರದರ್ಶನವು ನಮಗೆ ಅನನುಕೂಲವನ್ನು ಮಾಡುತ್ತದೆ ಎಂದು ಬಿಜೆಪಿ ಮುಖಂಡ ಮತ್ತು ಮಾಜಿ ಟಿಎಂಸಿ ಶಾಸಕ ಸುವೆಂದು ಅಧಿಕಾರಿ ಹೇಳಿದ್ದಾರೆ.

“ನಮ್ಮ ಪಕ್ಷದ ಕಾರ್ಯಕರ್ತರ ಮೇಲೆ ದಾಳಿಗಳು ನಡೆದಂತೆ, ರಾಜ್ಯದ ಹೆಚ್ಚಿನ ಜನರು ನಮ್ಮ ಬೆಂಬಲಕ್ಕೆ ಬರುತ್ತಾರೆ” ಎಂದು ಸುವಂದು ಅಧಿಕಾರಿ ಹೇಳಿದ್ದಾರೆ.

ಪೂರ್ವ ಮಿಡ್ನಾಪೋರ್ ಜಿಲ್ಲೆಯ ಕಾಂತಿ ಪ್ರದೇಶದ ಭಜಚೌಲಿಯಲ್ಲಿ ಉಭಯ ಪಕ್ಷಗಳ ಕಾರ್ಯಕರ್ತರು ಹಲವು ಸಲಕರಣೆಗಳನ್ನು ಬಳಿಸಿ ಮಾರಾಮಾರಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪೂರ್ವ ಮಿಡ್ನಾಪೋರ್ ಜಿಲ್ಲೆಯ ಮರಿಷ್ಡಾದಿಂದಲೂ ಹಿಂಸಾಚಾರ ವರದಿಯಾಗಿದೆ.

ಪಶ್ಚಿಮ ಮಿಡ್ನಾಪುರದ ಕೇಶ್ಪುರದಲ್ಲಿ, ಎರಡು ಪಕ್ಷಗಳ ಕಾರ್ಯಕರ್ತರು ಇಟ್ಟಿಗೆ ಮತ್ತು ಕೋಲುಗಳಿಂದ ಪರಸ್ಪರ ಘರ್ಷಣೆ ನಡೆಸಿದ್ದಾರೆ.

ಘರ್ಷಣೆಗೆ ಬಿಜೆಪಿಯೇ ಕಾರಣ ಎಂದು ಟಿಎಂಸಿ ಆರೋಪಿಸಿದೆ. ಬಿಜೆಪಿಯವರು ಪ್ರಚೋದಿತ ದಾಳಿಯಿಂದ ತಮ್ಮ ಪಕ್ಷದ ಕಾರ್ಯಕರ್ತರು ತಾಳ್ಮೆಯನ್ನು ಕಳೆದುಕೊಂಡಿದ್ದಾರೆ ಎಂದು ಪೂರ್ವ ಮಿಡ್ನಾಪೋರ್‌ನ ಟಿಎಂಸಿ ಜಿಲ್ಲಾಧ್ಯಕ್ಷ ಅಜಿತ್ ಮೈಟಿ ಹೇಳಿದ್ದಾರೆ.


ಇದನ್ನೂ ಓದಿ: ‘ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವವರೆಗೂ ನಿದ್ದೆ ಮಾಡುವುದಿಲ್ಲ’ – ಸುವೆಂದು ಅಧಿಕಾರಿ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights