ಮಂಡ್ಯದಲ್ಲಿ ಕಾಂಗ್ರೆಸ್‌ ಜಯಭೇರಿ; ಬಿಜೆಪಿಗೆ ಕೇವಲ 50 ಮತಗಳು!

ಇತ್ತೀಚೆಗಿನ ಚುನಾವಣೆಗಳಲ್ಲಿ ತೀವ್ರ ಕುತೂಹಲ ಕೆರಳಿಸುತ್ತಿರುವ ಕ್ಷೇತ್ರ ಮಂಡ್ಯ. ಇಂದು ವಿಧಾನ ಪರಿಷತ್ ಚುನಾವಣಾ ಫಲಿತಾಂಶ ಪ್ರಕಟವಗಿದ್ದು, ಮಂಡ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಭರ್ಜರಿ ಜಯಗಳಿಸಿದೆ.

ಮೊದಲ ಸುತ್ತಿನಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಕಾಂಗ್ರೆಸ್‌ ಅಭ್ಯರ್ಥಿ ದಿನೇಶ್ ಗೂಳಿಗೌಡ ಗೆಲುವು ಸಾಧಿಸಿದ್ದಾರೆ.

ಚಲಾವಣೆಗೊಂಡಿದ್ದ ಒಟ್ಟು 4019 ಮತಗಳ ಪೈಕಿ, ಕಾಂಗ್ರೆಸ್ ಅಭ್ಯರ್ಥಿ 2044 ಮತ ಪಡೆದರೆ, ಜೆಡಿಎಸ್ ಅಭ್ಯರ್ಥಿ 1877 ಹಾಗೂ ಬಿಜೆಪಿ 50, ಪಕ್ಷೇತರ 2 ಮತಗಳನ್ನು ಪಡೆದಿದ್ದಾರೆ. 46 ಮತಗಳು ಅಸಿಂಧುವಾಗಿವೆ.

ಇದನ್ನೂ ಓದಿ: ಪರಿಷತ್ ಫಲಿತಾಂಶ: ಸಮಬಲದಲ್ಲಿ ಬಿಜೆಪಿ-ಕಾಂಗ್ರೆಸ್; 2 ಕ್ಷೇತ್ರದಲ್ಲಿ ಜೆಡಿಎಸ್ ಮುನ್ನಡೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights