ಯುವತಿ ಮೇಲೆ ಪೊಲೀಸ್‌ ಕಾನ್ಸ್‌ಟೇಬಲ್‌ನಿಂದ ನಿರಂತರ ಅತ್ಯಾಚಾರ; ಆತ್ಮಹತ್ಯೆಗೆ ಯತ್ನಿಸಿದ ಸಂತ್ರಸ್ತೆಯ ರಕ್ಷಣೆ

ಯುವತಿಯ ಮೇಲೆ ಆಕೆಯ ಚಿಕ್ಕಪ್ಪನೇ ಆಗಿರುವ ಟ್ರಾಫಿಕ್ ಪೊಲೀಸ್‌ ಕಾನ್ಸ್‌ಟೇಬಲ್‌ ಒಬ್ಬ ಎರಡು ವರ್ಷಗಳಿಂದ ನಿರಂತವಾಗಿ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಅಲ್ಲದೆ, ಆರೋಪಿಯು ಅತ್ಯಾಚಾರ ಘಟನೆಯ ವಿಡಿಯೋ ಮಾಡಿ ಬ್ಲಾಕ್‌ಮೇಲ್‌ ಮಾಡಿದ್ಧಾನೆ. ಇದರಿಂದ ಮನನೊಂದ ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದು, ಪ್ರಕರಣ ಬೆಳಕಿಗೆ ಬಂದಿದೆ.

ಮಿರ್ಜಾಪುರ್​​ ಜಿಲ್ಲೆಯ 25 ವರ್ಷದ ಸಂತ್ರಸ್ತ ಯುವತಿ ಗಂಗಾನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಆಕೆಯನ್ನುಜ ಪೊಲೀಸರು ರಕ್ಷಿಸಿದ್ದಾರೆ ಎಂದು ಉಪ ಪೊಲೀಸ್​ ಆಯುಕ್ತ ಪ್ರಮೋದ್ ಕುಮಾರ್ ತಿಳಿಸಿದ್ದಾರೆ.

2019ರಲ್ಲಿ ಅಲಹಾಬಾದ್​​ನಲ್ಲಿ ನಡೆದ ಕುಂಭಮೇಳಕ್ಕೆ ಸಂತ್ರಸ್ತ ಯುವತಿ ಆರೋಪಿ ಚಿಕ್ಕಪ್ಪನೊಂದಿಗೆ ತೆರಳಿದ್ದಳು. ಈ ವೇಳೆ ಆಕೆಯನ್ನು ಹೋಟೆಲ್​​ವೊಂದಕ್ಕೆ ಕರೆದೊಯ್ದು ಮತ್ತು ಬರುವ ಔಷಧಿಯನ್ನು ಪಾನಿಯಾದಲ್ಲಿ ಬೆರೆಸಿ ಕುಡಿಸಿದ್ದಾನೆ. ನಂತರ, ಆಕೆಯ ಮೇಲೆ ಅತ್ಯಾಚಾರ ಎಸಗಿದ್ದು, ಘಟನೆಯನ್ನು ವಿಡಿಯೋ ಮಾಡಿಕೊಂಡು, ಬ್ಲಾಕ್‌ಮೇಲ್‌ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆ ದೂರು ನೀಡಿದ್ದಾರೆ.

ಕಳೆದ ಭಾನುವಾರ ಹೊಟೇಲ್​ವೊಂದರಲ್ಲಿ ಆಕೆಯ ಮೇಲೆ ಆರೋಪಿ ಮತ್ತೆ ಅತ್ಯಾಚಾರ ಎಸಗಲು ಯತ್ನಿಸಿದ್ದು, ವಿರೋಧಿಸಿ ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ. ಆತನಿಂದ ತಪ್ಪಿಸಿಕೊಂಡ ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ. ನಂತರ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಆಕೆಯನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆದರೆ, ಇದೂವರೆಗೂ ಆರೋಪಿಯನ್ನು ಬಂಧಿಸಲಾಗಿಲ್ಲ. ಕೋರ್ಟ್‌ನಲ್ಲಿ ಆಕೆಯ ಹೇಳಿಕೆಯನ್ನು ದಾಖಲಿಸಿದ ನಂತರ ಕ್ರಮ ಕೈಗೊಳ್ಳಲಾಗುವುದು. ಆರೋಪಿಯನ್ನು ಬಂಧಿಸಲಾಗುವುದು ಎಂದು ಪ್ರಮೋದ್‌ ಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: 2020ರಲ್ಲಿ ಅತಿ ಹೆಚ್ಚು ಕೊಲೆ, ಅಪಹರಣಗಳು ನಡೆದ ರಾಜ್ಯ ಉತ್ತರ ಪ್ರದೇಶ: NCRB ವರದಿ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights