ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಎಸ್‌ವೈ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಸುರ್ಜೇವಾಲ್‌

ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಕುಟುಂಬ ಭ್ರಷ್ಟಾಚಾರದಲ್ಲಿ ಮುಳುಗಿದೆ. ಅವರ ಕುಟುಂಬದ ಭ್ರಷ್ಟಾಚಾರದ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆಯಾಗಬೇಕು. ಬಿಎಸ್‌ವೈ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ತಕ್ಷಣ ರಾಜೀನಾಮೆ ನೀಡಬೇಕು ಎಂದು ಕರ್ನಾಟಕ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಆಗ್ರಹಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಜೊತೆಗೆ ಪತ್ರಿಕಾಗೋಷ್ಠಿ ನಡೆಸಿರುವ ಕರ್ನಾಟಕ ಕಾಂಗ್ರೆಸ್‌ ಪಕ್ಷದ ನೂತನ ಉಸ್ತುವಾರಿ ಸುರ್ಜೇವಾಲ್‌, ‘ಮುಖ್ಯಮಂತ್ರಿ ಯಡಿಯೂರಪ್ಪ ಕುಟುಂಬದ ಭ್ರಷ್ಟಾಚಾರದ ತನಿಖೆಯನ್ನು ವಿಶೇಷ ತನಿಖಾ ತಂಡಕ್ಕೆ ವಹಿಸಬೇಕು’ ಎಂದು ಆಗ್ರಹಿಸಿದ್ದಾರೆ.

ಬಿಡಿಎ ಟೆಂಡರ್‌ನಲ್ಲಿ ಭ್ರಷ್ಟಾಚಾರ ನಡೆದಿದೆ. ಮುಖ್ಯಮಂತ್ರಿ, ಅವರ ಪುತ್ರ ವಿಜಯೇಂದ್ರ, ಅಳಿಯ ವಿರೂಪಾಕ್ಷಪ್ಪ ಮರಡಿ, ಮೊಮ್ಮಗ ಶಶಿಧರ ಮರಡಿ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ. ಗುತ್ತಿಗೆದಾರ ನಡುವೆ ಲಂಚದ ವ್ಯವಹಾರ ನಡೆದಿದೆ. ಕೊಲ್ಕತ್ತಾ, ಬೆಂಗಳೂರಿಗೆ ಆರ್‌ಟಿಜಿಎಸ್ ಮೂಲಕ ಹಣ ವರ್ಗಾವಣೆ ಮಾಡಲಾಗಿದೆ. ಇದು ಕೇವಲ ಆರೋಪವಲ್ಲ, ಸತ್ಯ. ಎಲ್ಲವೂ ಸ್ಟಿಂಗ್ ಆಪರೇಷನ್‌ಲ್ಲಿ ಬಯಲಾಗಿದೆ. ಇದಕ್ಕೆ ಸಂಬಂಧಪಟ್ಟ ಎಲ್ಲ ದಾಖಲೆಗಳು ನಮ್ಮಲ್ಲಿವೆ. ಇಷ್ಟೆಲ್ಲ ಇದ್ದರೂ ಮುಖ್ಯಮಂತ್ರಿ ಸ್ಥಾನದಲ್ಲಿ ಹೇಗೆ ಮುಂದುವರಿಯುತ್ತಾರೆ. ಅವರು ರಾಜೀನಾಮೆ ನೀಡಲೇಬೇಕು’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್‌ ಉಸ್ತುವಾರಿಯಲ್ಲಿ ಬದಲಾವಣೆ; ರಾಜ್ಯಕ್ಕೆ ಸುರ್ಜೇವಾಲ್, AICCಗೆ ರಾಜ್ಯದಿಂದ ಮೂವರು!

ನಮ್ಮ ಸರ್ಕಾರವನ್ನು 10% ಸರ್ಕಾರ ಎಂದಿದ್ದ ಪ್ರಧಾನಿ ಮೋದಿ, ನಾನೂ ತಿಲ್ಲನ್ನ, ತಿನ್ನೋಕು ಬಿಡಲ್ಲ ಎಂದಿದ್ದರು. ಈಗ ಯಡಿಯೂರಪ್ಪನವರ ಭ್ರಷ್ಟಾಚಾರದ ಬಗ್ಗೆ ಮೋದಿ ಮೌನವಾಗಿದ್ದಾರೆ. ಈ ಬಗ್ಗೆ ಅವರು ಏನು ಹೇಳುತ್ತಾರೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ, ಒಂದು ತಿಂಗಳು ಆಗಿದೆ. ಈ ಅವಧಿಯಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ಕೊರೊನಾ ಸಂದರ್ಭದಲ್ಲೂ ಸರ್ಕಾರ ಭ್ರಷ್ಟಾಚಾರ ನಡೆಸಿದೆ. ನಾನು, ಡಿ.ಕೆ. ಶಿವಕುಮಾರ್‌ ಕೂಡ ಅನೇಕ ಬಾರಿ ಭ್ರಷ್ಟಚಾರದ ವಿಷಯವನ್ನು ಪ್ರಸ್ತಾಪಿಸಿದ್ದೇವೆ. ಮುಖ್ಯಮಂತ್ರಿ ಕುಟುಂಬದವರ ಶಾಮೀಲು ಬಗ್ಗೆಯೂ ಹೇಳಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.


ಇದನ್ನೂ ಓದಿ: ಭ್ರಷ್ಟಾಚಾರಿ ಯಡಿಯೂರಪ್ಪರನ್ನು ಮುಖ್ಯಮಂತ್ರಿ ಸ್ಥಾನದಿಂದ ಕಿತ್ತೊಗೆಯಿರಿ: ಶಂಕರ್ ಬಿದರಿ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights