ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ಖಾತೆ; ಹಣಕ್ಕಾಗಿ ಬೇಡಿಕೆ ಇಟ್ಟ ಖದೀಮರು: ಪ್ರಕರಣ ದಾಖಲು

ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಯವರ ಹೆಸರಿನಲ್ಲಿ ಫೇಸ್‌ಬುಕ್‌ನಲ್ಲಿ ನಕಲಿ ಖಾತೆಯನ್ನು ತೆರೆದು ಖದೀಮರು ಹಣಕ್ಕಾಗಿ ಬೇಡಿಕೆ ಇಟ್ಟು, ಹಣ ವಸೂಲಿ ಮಾಡಲು ಮುಂದಾಗಿದ್ದಾರೆ. ಈ ಬಗ್ಗೆ ಸ್ಕ್ರೀನ್‌ಶಾಟ್‌ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಅಗಿದ್ದು, ಪ್ರಕರಣ ಬೆಳಕಿಗೆ ಬಂದಿದೆ.

Deputy commissioner chikkaballapur ಎಂಬ ಹೆಸರಿನಲ್ಲಿ ಫೇಸ್‌ಬುಕ್‌ ಖಾತೆಯೊಂದನ್ನು ತೆರೆಯಲಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳ ನೈಜ ಖಾತೆಯ ಪೋಟೋಗಳನ್ನು, ಪ್ರೊಫೈಲ್‌ ಫೋಟೊ ಆಗಿ ಬಳಸಿಕೊಳ್ಳಲಾಗಿದೆ. ಅಲ್ಲದೆ, ಫೇಸ್‌ಬುಕ್‌ನಲ್ಲಿ ಜಿಲ್ಲಾಧಿಕಾರಿಯವರ ಫ್ರೆಂಡ್‌ ಲಿಸ್ಟ್‌ನಲ್ಲಿರುವ ಸ್ನೇಹಿತರಿಗೆ ಫ್ರೆಂಡ್‌ ರಿಕ್ವೆಸ್ಟ್‌ ಕಳುಹಿಸಿದ್ದಾರೆ. ನಂತರ ಅನುಮಾನ ಬಾರದಂತೆ ಎಫ್‌ಬಿ ಮೆಸೆಂಜರ್‌ ಮೂಲಕ ಹಣಕ್ಕೆ ಡಿಮ್ಯಾಂಡ್‌ ಮಾಡಿರುವುದು ಕಂಡುಬಂದಿದೆ.

ಈ ಕುರಿತು ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿ ಆರ್. ಲತಾ ಅವರು, ಡಿಸಿ ಚಿಕ್ಕಬಳ್ಳಾಪುರ (Deputy commissioner chikkaballapur) ಎಂಬ ಹೆಸರಿನಿಂದ ನಕಲಿ ಫೇಸ್‌ಬುಕ್‌ ಖಾತೆಯನ್ನು ತೆರೆಯಲಾಗಿದೆ. ಅದರ ಮೂಲಕ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿ, ನಂತರ ಹಣ ವಸೂಲಿ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಈಗಾಗಲೇ ಈ ಬಗ್ಗೆ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕರು ಯಾವುದೇ ಕಾರಣಕ್ಕೂ ಸದರಿ ಹೆಸರಿನಿಂದ ಬರುವ ಫ್ರೆಂಡ್ ರಿಕ್ವೆಸ್ಟ್ ಸ್ವೀಕಾರ ಮಾಡಬಾರದು ಹಾಗೂ ಹಣ ವರ್ಗಾವಣೆ ಮಾಡದಂತೆ ಅವರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಮೋದಿಯವರು ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ವಹಿಸಿದರೆ BJPಗರು ಒಪ್ಪುವರೇ?: ಹೆಚ್‌ಡಿಕೆ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights