ಬೆಲೆ ಏರಿಕೆಯಿಂದ ದೇಶ ಬಳಲುತ್ತಿದೆ; ಜನರು ತತ್ತರಿಸಿ ಹೋಗಿದ್ದಾರೆ: ರಾಜ್ಯಸಭೆಯಲ್ಲಿ ವಿಪಕ್ಷಗಳ ಕೋಲಾಹಲ

ಕೇಂದ್ರ ಸರ್ಕಾರದ ಬಜೆಟ್‌ ಅಧಿವೇಶನ ಭಾಗವಾಗಿ ನಡೆಯುತ್ತಿರುವ ರಾಜ್ಯಸಭಾ ಕಲಪವು ಸೋಮವಾರ ಆರಂಭವಾಗುತ್ತಿದ್ದಂತೆ ಭಾರೀ ಗದ್ದಲ, ಕೋಲಾಹಲಕ್ಕೆ ಸಾಕ್ಷಿಯಾಗಿದೆ. ದೇಶದ ಹಲವಾರು ವಿದ್ಯಾಮಾನಗಳನ್ನು ಮುಂದಿಟ್ಟುಕೊಂಡು ವಿರೋಧ ಪಕ್ಷಗಳು ಭಾರೀ ಆರೋಪ-ಆಕ್ರೋಶ ವ್ಯಕ್ತಪಡಿಸಿವೆ.

ಲಾಕ್‌ಡೌನ್‌ ನಂತರದಲ್ಲಿ ಇಂಧನ ಬಲೆಯಲ್ಲಿ ಸತತ ಬೆಲೆ ಏರಿಕೆ ಬಗ್ಗೆ ಚರ್ಚೆ ನಡೆಸಬೇಕು ಎಂದು ವಿರೋಧ ಪಕ್ಷಗಳು ಒತ್ತಾಯಿಸಿವೆ. ಪೆಟ್ರೋಲ್‌, ಡೀಸೆಲ್‌ ಮತ್ತು ಎಲ್‌ಪಿಜಿ ಬೆಲೆ ಏರಿಕೆಯ ಬಗ್ಗೆ ರಾಜ್ಯಸಭೆಯಲ್ಲಿ ಚರ್ಚೆಗೆ ಅವಕಾಶ ನೀಡಬೇಕು ಎಂದು ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿ, ನೋಟಿಸ್‌ ನೀಡಿದ್ದಾರೆ.

ಆದರೆ, ಚರ್ಚೆಗೆ ಅವಕಾಶ ನೀಡದ ಸಭಾಧ್ಯಕ್ಷ ವೆಂಕಯ್ಯ ನಾಯ್ಡು ಅವರು ಪ್ರಶ್ನೋತ್ತರ ಅವಧಿಯನ್ನು ಮುಂದುವರೆಸಿದ್ದರು. ಇದರಿಂದಾಗಿ ಸಿಟ್ಟಾದ ವಿಪಕ್ಷಗಳು ಸರ್ಕಾರದ ವಿರುದ್ದ ಘೋಷಣೆ ಕೂಗಿದ್ದಾರೆ.

ಹೀಗಾಗಿ ರಾಜ್ಯಸಭೆಯಲ್ಲಿ ಗದ್ದಲ ಉಂಟಾಗಿದ್ದು, ಕಲಾಪವನ್ನು ಮಧ್ಯಾಹ್ನಕ್ಕೆ ಮುಂದೂಡಲಾಗಿದೆ.

ಇದನ್ನೂ ಓದಿ: ಅಸ್ಸಾಂ BJPಯಲ್ಲಿ ಬಂಡಾಯ; ಸ್ವತಂತ್ರ ಸ್ಪರ್ಧೆಗೆ ಮುಂದಾದ BJP ಶಾಸಕರು!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights