ಸಚಿವ ಝಾಕಿರ್‌ ಹುಸೇನ್‌ ಮೇಲೆ ಕಚ್ಚಾ ಬಾಂಬ್‌ ದಾಳಿ; ಸಚಿವರನ್ನು ಕೊಲ್ಲಲು ಪಿತೂರಿ ನಡೆದಿದೆ ಎಂದ ಮಮತಾ ಬ್ಯಾನರ್ಜಿ!

ಪಶ್ಚಿಮ ಬಂಗಾಳದ ರಾಜ್ಯ ಕಾರ್ಮಿಕ ಸಚಿವ ಝಾಕಿರ್‌ ಹುಸೇನ್‌ ಮೇಲೆ ಕಚ್ಚಾ ಬಾಂಬ್‌ ದಾಳಿ ನಡೆದಿದ್ದು, ಅವರು ತೀವ್ರವಾಗಿ ಗಾಯಗೊಂಡಿದ್ದಾರೆ. ಅವರ ಮೇಲಿನ ದಾಳಿಯ ಹಿಂದೆ ಪಿತೂರಿ ನಡೆಸಲಾಗಿದೆ ಎಂದು ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಹುಸೇನ್‌ ಅವರು ಕೊಲ್ಕತ್ತಾಗೆ ಹೋಗಲು ಮುರ್ಷಿದಾಬಾದ್ ಜಿಲ್ಲೆಯ ನಿಮ್ತಿಟಾ ರೈಲ್ವೆ ನಿಲ್ದಾಣಕ್ಕೆ ಬುಧವಾರ ರಾತ್ರಿ ತೆರಳಿದ್ದರು. ರೈಲಿಗಾಗಿ ಕಾಯುತ್ತಿದ್ದ ವೇಳೆ ಅವರ ಮೇಲೆ ಕಚ್ಚಾ ಬಾಂಬ್‌ಗಳನ್ನು ಎಸೆಯಲಾಗಿದ್ದು, ತೀವ್ರಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ವರ್ಷದ ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನವೇ ಈ ದಾಳಿ ನಡೆದಿದ್ದು, ದಾಳಿಯ ಹಿಂದೆ ಪಿತೂರಿ ನಡೆಸಲಾಗಿದೆ ಎಂದು ಟಿಎಂಸಿ ನಾಯಕಿ, ಸಿಎಂ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ನಮ್ಮ ಸಚಿವರನ್ನು ಕೊಲ್ಲಲು ಸಂಚು ರೂಪಿಸಲಾಗಿದೆ. ಸಚಿವರು ರೈಲ್ವೇ ನಿಲ್ದಾಣ ಪ್ರವೇಶಿಸಿದಾಗ ಮತ್ತು ದಾಳಿ ನಡೆದಾಗ ಅಲ್ಲಿ ರೈಲ್ವೆ ಪೊಲೀಸರು ಇರಲಿಲ್ಲ. ಇದರ ಹಿಂದೆ ದೊಡ್ಡ ಪಿತೂರಿ ನಡೆದಿದೆ ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಮಾಜಿ ಸಿಜೆಐ ರಂಜನ್ ಗೊಗೊಯ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ; ಪ್ರಕರಣ ಮುಕ್ತಾಯಗೊಳಿಸಿದ ಸುಪ್ರೀಂ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights