ರಾಜ್ಯದಲ್ಲಿ ಆನ್‌ಲೈನ್‌ ಗೇಮ್‌ ನಿಷೇಧಿಸಿ: ಸರ್ಕಾರಕ್ಕೆ ದಿನೇಶ್‌ ಗುಂಡೂರಾವ್ ಒತ್ತಾಯ

ರಾಜ್ಯದಲ್ಲಿ ರಮ್ಮಿ ಸೇರಿದಂಥೆ ಆನ್‌ಲೈನ್‌ ಗೇಮ್‌ಗಳಿಗೆ ಕಡಿವಾಣ ಹಾಕಿ, ಅವುಗಳನ್ನು ನಿಷೇಧಿಸಬೇಕು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸರ್ಕಾರವನ್ನು ಆಗ್ರಹಿಸಿದ್ದಾರೆ.

ರಮ್ಮಿ,ಪೋಕರ್ ಸೇರಿ ಆನ್‌ಲೈನ್ ಗೇಮಿಂಗ್ ಎಂಬ ಜೂಜಿನ ವ್ಯಸನಕ್ಕೆ ಹಲವು ಯುವಕರು ಬಲಿಯಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ನಾನೂ ಕೂಡ ಹಲವು ಯುವಕರು ಈ ಆನ್‌ಲೈನ್ ಜೂಜಿನಲ್ಲಿ ವ್ಯಸ್ತರಾಗಿರುವುದನ್ನು‌ ಗಮನಿಸಿದ್ದೇನೆ. ಎಷ್ಟೋ ಕುಟುಂಬಗಳು ಇದರಿಂದ ನಾಶವಾಗಿ ಹೋಗಿದೆ. ಹಾಗಾಗಿ ಇಂತಹ ಗೇಮ್‌ಗಳ ಮೇಲೆ ಕಡಿವಾಣ ಬೀಳಬೇಕು ಎಂದು ಅವರು ಟ್ವೀಟ್‌ ಮಾಡಿವ ಮೂಲಕ ಒತ್ತಾಯಿಸಿದ್ದಾರೆ.

ಆನ್ಲೈನ್ ಆಟ ‘game of skill-not a game of luck’ ಎಂಬ ಆಧಾರದ ಮೇಲೆ ಕಾನೂನಿನ ಮಾನ್ಯತೆ ಪಡೆದುಕೊಂಡಿದೆ. ನಾನು ಈ ವಾದ ಒಪ್ಪುವುದಿಲ್ಲ. ನನ್ನ ಪ್ರಕಾರ ಹಣವನ್ನು ಬಾಜಿ ಕಟ್ಟಿ ಆಡುವುದು ಜೂಜು ಎಂಬುದು ನಿರ್ವಿವಾದ. ಇಂತಹ ಜೂಜಿಗೆ ವಿಶೇಷವಾಗಿ ಯುವಕರು ಆಕರ್ಷಿತರಾಗಿರುವುದು ದುರಂತ. ಸರ್ಕಾರ ಈ ಮನೆಹಾಳು ಗೇಮಿಂಗ್‌ಗಳ ಮೇಲೆ ನಿಷೇಧ ಹೇರಲಿ ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಕೊರೊನಾ ವಾರಿಯರ್ಸ್‌ಗೆ ಚಪ್ಪಾಳೆ ಹೊಡೆದ ಸರ್ಕಾರ ಸಂಬಳ ಕೊಟ್ಟಿಲ್ಲ: ಬಿಟ್ಟಿ ದುಡಿಸುತ್ತಿದೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights