ತಮ್ಮ ದೇಹವನ್ನು ವೈದ್ಯಕೀಯ ಕಾಲೇಜಿಗೆ ದಾನ ಮಾಡಿದ್ದ ಹಿರಿಯಜ್ಜ; ಕೊರೊನಾ ಹಿನ್ನೆಲೆಯಲ್ಲಿ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆಗೆ ಸರ್ಕಾರ ನಿರ್ಧಾರ!

ಸ್ವಾತಂತ್ರ್ಯ ಸೇನಾನಿ, ಶತಾಯುಷಿ, ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಎಚ್.ಎಸ್ ದೊರೆಸ್ವಾಮಿಯವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ದಿಟ್ಟ ಜನಪರ ಹೋರಾಟ ನಡೆಸಿದ ಧೀಮಂತ ಹಿರಿಯಜ್ಜರಿಗೆ ಸಕಲ ಸರ್ಕಾರಿ ಗೌರವಳೊಂದಿಗೆ ಬೀಳ್ಕೊಡಲು ಸರ್ಕಾರ ನಿರ್ಧರಿಸಿದ್ದು, ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ.

ದೊರೆಸ್ವಾಮಿಯವರು ಈ ಮೊದಲೇ ತಾವು ನಿಧನರಾದ ನಂತರ ತಮ್ಮ ಮೃತದೇಹವನ್ನು ಮೆಡಿಕಲ್ ಕಾಲೇಜಿಗೆ ನೀಡಬೇಕೆಂದು ಬಯಸಿ ಒಪ್ಪಿಗೆ ಪತ್ರವನ್ನು ನೀಡಿದ್ದಾರೆ. ಆದರೆ, ಕೆಲವು ದಿನಗಳ ಹಿಂದೆ ಅವರಿಗೆ ಕೊರೊನಾ ಪಾಸಿಟಿವ್‌ ಬಂದಿದ್ದ ಕಾರಣದಿಂದಾಗಿ ಅವರ ಮೃತದೇಹವನ್ನು ಪಡೆದುಕೊಳ್ಳಲು ವೈದ್ಯಕೀಯ ಕಾಲೇಜುಗಳು ಹಿಂದೇಟು ಹಾಕುತ್ತಿವೆ. ಹೀಗಾಗಿ ಅವರ ಮೃತ ದೇಹವನ್ನು ಗೌರವಾರ್ಥವಾಗಿ ಅಂತ್ಯಕ್ರಿಯೆಯನ್ನು ನಡೆಸಲಾಗುವುದು ಎಂದು ಸರ್ಕಾರ ಹೇಳಿದೆ.

ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಕನಿಷ್ಠ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಿ, ಕೋವಿಡ್ -19ರ ಸರ್ಕಾರಿ ಮಾರ್ಗಸೂಚಿಗಳನ್ನು ಪಾಲಿಸಿ ನೆರವೇರಿಸಲು ಆದೇಶಿಸಿದೆ ಎಂದು ಸರ್ಕಾರದ ಉಪ ಕಾರ್ಯದರ್ಶಿ ವೀರಭದ್ರ ಹಂಚಿನಾಳರವರು ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಹೆಚ್‌ಎಸ್‌ ದೊರೆಸ್ವಾಮಿ: 104 ವರ್ಷದ ಹಿರಿಯಜ್ಜರ ಸಾರ್ಥಕ ಬದುಕಿನ ಹೆಮ್ಮೆಯ ಹಾದಿ!

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights