ಸೌದಿ ಅರೇಬಿಯಾ ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ : 8 ಜನರಿಗೆ ಗಾಯ – ವಿಮಾನಕ್ಕೆ ಹಾನಿ!

ಸೌದಿ ಅರೇಬಿಯಾ ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ ಮಾಡಲಾಗಿದ್ದು 8 ಜನರಿಗೆ ಗಾಯವಾಗಿದೆ. ಜೊತೆಗೆ ವಿಮಾನಕ್ಕೆ ಹಾನಿಯಾಗಿದೆ.

ನೈಋತ್ಯ ಸೌದಿ ಅರೇಬಿಯಾದ ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿಯಿಂದಾಗಿ ಎಂಟು ಜನರು ಗಾಯಗೊಂಡಿದ್ದಾರೆ. ಜೊತೆಗೆ ದಾಳಿಯಿಮದ ನಾಗರಿಕ ವಿಮಾನ ಹಾನಿಗೊಳಿಸಿದ್ದಾರೆ ಎಂದು ರಾಜ್ಯ ದೂರದರ್ಶನ ವರದಿ ಮಾಡಿದೆ.

ಕಳೆದ 24 ಗಂಟೆಗಳಲ್ಲಿ ಅಭಾ ವಿಮಾನ ನಿಲ್ದಾಣದಲ್ಲಿ ಇದು ಎರಡನೇ ಡ್ರೋನ್ ದಾಳಿಯಾಗಿದೆ. ದಾಳಿಯ ಹೊಣೆಯನ್ನು ಇದುವರೆಗೆ ಯಾವುದೇ ಸಂಘಟನೆ ಹೊತ್ತುಕೊಂಡಿಲ್ಲ.

ಯೆಮೆನ್‌ನಲ್ಲಿ ಇರಾನ್ ಬೆಂಬಲಿತ ಶಿಯಾ ಬಂಡುಕೋರರ ವಿರುದ್ಧ ಹೋರಾಡುತ್ತಿರುವ ಸೌದಿ ನೇತೃತ್ವದ ಸೇನಾ ಒಕ್ಕೂಟ ದಾಳಿಯಲ್ಲಿ ಯಾವುದೇ ಸಾವುನೋವುಗಳ ಬಗ್ಗೆ ವಿವರಗಳನ್ನು ನೀಡಲಿಲ್ಲ. ಒಕ್ಕೂಟ ತನ್ನ ಪಡೆಗಳು ಸ್ಫೋಟಕ ಡ್ರೋನ್ ಅನ್ನು ತಡೆದಿದೆ ಎಂದು ಹೇಳಿದೆ.

2015 ರಿಂದ, ಸೌದಿ ನೇತೃತ್ವದ ಮಿಲಿಟರಿ ಒಕ್ಕೂಟದ ವಿರುದ್ಧ ಹೋರಾಡುತ್ತಿರುವ ಯೆಮೆನ್‌ನ ಹೌತಿ ಬಂಡುಕೋರರು ಸೌದಿ ಅರೇಬಿಯಾದಲ್ಲಿ ಮಿಲಿಟರಿ ಸ್ಥಾಪನೆಗಳು ಮತ್ತು ನಿರ್ಣಾಯಕ ತೈಲ ಮೂಲಸೌಕರ್ಯಗಳೊಂದಿಗೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ಗುರಿಯಾಗಿಸಿಕೊಂಡಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights