ಬೆಳ್ಳಂಬೆಳಗ್ಗೆ ಅಪಘಾತ: ಮಲಗಿದ್ದವರ ಮೇಲೆ ಹರಿದ ಟ್ರಕ್‌; 15 ಕಾರ್ಮಿಕರು ಸಾವು!

ಫುಟ್​ಪಾತ್​ ಮೇಲೆ ಮಲಗಿದ್ದ ವಲಸೆ ಕಾರ್ಮಿಕರ ಮೇಲೆ ನಿಯಂತ್ರಣ ತಪ್ಪಿದ ಟ್ರಕ್‌ವೊಂದು​​ ಹರಿದು 15 ಮಂದಿ ಮೃತಪಟ್ಟಿರುವ ಘಟನೆ ಗುಜರಾತ್​ನ ಸೂರತ್​ನಲ್ಲಿ ನಡೆದಿದೆ.

ಮಂಗಳವಾರ ಬೆಳ್ಳಂಬೆಳಗ್ಗೆ ಟ್ರಕ್​ ಮತ್ತು ಕಬ್ಬು ತುಂಬಿದ ಟ್ರ್ಯಾಕ್ಟರ್​ ನಡುವೆ ಡಿಕ್ಕಿಯಾಗಿ ನಿಯಂತ್ರಣ ಕಳೆದುಕೊಂಡ ಟ್ರಕ್​ ಡ್ರೈವರ್​, ಫುಟ್​ಪಾತ್​ ಕಡೆ ವಾಹನವನ್ನು ನುಗ್ಗಿಸಿದ್ದಾನೆ. ಈ ವೇಳೆ ನಿದ್ದೆಯಲ್ಲಿದ್ದ 15 ವಲಸೆ ಕಾರ್ಮಿಕರ ಮೇಲೆ ಟ್ರಕ್​ ಹರಿದು ಮೃತಪಟ್ಟಿದ್ದಾರೆ. ಮತ್ತು ಕೆಲವರ ಸ್ಥಿತಿ ಗಂಭೀರವಾಗಿದೆ.

ಕಾರ್ಮಿಕರು ಮಾಂಡವಿ ಹೆದ್ದಾರಿಯ ಫುಟ್​ಪಾತ್​ ಮೇಲೆ ಮಲಗಿದ್ದಾಗ ದುರ್ಘಟನೆ ಸಂಭವಿಸಿದೆ. ಸಾವನ್ನಪ್ಪಿದವರು ರಾಜಸ್ಥಾನದ ಬನ್​ಸ್ವಾರ ಮೂಲದವರೆಂದು ತಿಳಿದುಬಂದಿದೆ. ಮೃತರ ಸಾವಿಗೆ ಬಿಜೆಪಿ ಮುಖಂಡ ಹಾಗೂ ಲೋಕಸಭಾ ಸ್ಪೀಕರ್​ ಓಂ ಬಿರ್ಲಾ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ಸಾವಿನ ದುಃಖ ತಡೆದುಕೊಳ್ಳುವ ಶಕ್ತಿ ನೀಡಲೆಂದು ದೇವರಲ್ಲಿ ಪಾರ್ಥಿಸಿಕೊಳ್ಳುತ್ತೇನೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದಿದ್ದಾರೆ.

Read Also: ಕೂಲ್‌ ಕ್ಯಾಪ್ಟನ್‌ ಧೋನಿಯನ್ನೂ ಕಾಡುತ್ತಿದೆ ಹಕ್ಕಿಜ್ವರ; ಧೋನಿಯ ಕನಸು ಭಂಗ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights