ರಾಜ್ಯದ 1,400 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ಆರಂಭ: ಎಷ್ಟು ವಿದ್ಯಾರ್ಥಿಗಳಿಗೆ ಅನುಕೂಲ?

ಪೋಷಕರು ತಮ್ಮ ಮಕ್ಕಳನ್ನು ಇಂಗ್ಲಿಷ್‌ ಮೀಡಿಯಂ ಶಾಲೆಗಳಿಗೆ ಸೇರಿಸುವ ಒಲವು ಹೆಚ್ಚಾಗುತ್ತಿದ್ದಂತೆ ಶಿಕ್ಷಣ ಇಲಾಖೆ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮವನ್ನು ಆರಂಭಿಸಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ 1,400ಕ್ಕೂ ಹೆಚ್ಚು ಶಾಲೆಗಳಲ್ಲಿ ಆಂಗ್ಲ ಮಾಧ್ಯಮದಲ್ಲಿ ಬೋಧನೆಯನ್ನು ರಾಜ್ಯ ಸರ್ಕಾರ ಆರಂಭಿಸುತ್ತಿದೆ. ಈ ಶಾಲೆಗಳಲ್ಲಿ  ಒಂದನೇ ತರಗತಿಯಿಂದಲೇ ಆಂಗ್ಲಭಾಷೆಯಲ್ಲಿ ಬೋಧನೆ ಪ್ರಾರಂಭವಾಗಲಿದೆ.

ರಾಜ್ಯ ಸರ್ಕಾರ ಗುರುತಿಸಿರುವ 1,400 ಶಾಲೆಗಳಲ್ಲಿ 1,000 ಕನ್ನಡ ಮಾಧ್ಯಮ ಮತ್ತು 400 ಉರ್ದು ಮಾಧ್ಯಮ ಶಾಲೆಗಳಾಗಿವೆ. ಈ ಶಾಲೆಗಳಲ್ಲಿ ಪ್ರಸಕ್ತ ಸಾಲಿನಿಂದ ಆಂಗ್ಲ ಮಾಧ್ಯಮ ಬೋಧನೆಯೂ ಆರಂಭವಾಗಲಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಈ ಶಾಲೆಗಳಲ್ಲಿ ಪಠ್ಯಪುಸ್ತಕ ಎರಡು ಭಾಷೆಗಳಲ್ಲಿ ಇರಲಿದ್ದು,  ಇಂಗ್ಲಿಷ್ ಮತ್ತು ಉರ್ದು ಅಥವಾ ಇಂಗ್ಲಿಷ್ ಮತ್ತು ಕನ್ನಡ ಭಾಷೆಗಳಲ್ಲಿ ಪಠ್ಯ ಮತ್ತು ಬೋಧನೆ ಇರಲಿದೆ. ಈಗಾಗಲೇ ದಾಖಲಾತಿ ಪ್ರಕ್ರಿಯೆ ಆರಂಭವಾಗಿದ್ದು, ತರಗತಿಗಳು ಪ್ರಾರಂಭವಾಗುವ ವೇಳೆಗೆ ಪಠ್ಯ ಪುಸ್ತಕಗಳನ್ನು ಮುದ್ರಿಸುವ ಉದ್ದೇಶದಿಂದ ಮುದ್ರಣ ಪ್ರಕ್ರಿಯೆಯೂ ಚಾಲ್ತಿಯಲ್ಲಿದೆ.

ಹಿಂದಿನ ವರ್ಷ ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗೆ 30 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ದಾಖಲಾಗಿದ್ದರು. ಪ್ರತಿ ತರಗತಿಗೆ 30 ಮಕ್ಕಳಿಗಿಂತ ಹೆಚ್ಚು ದಾಖಲಾಗಬಾರದೆಂದು ಸರ್ಕಾರದ ನಿಯಮವಿದ್ದಿದ್ದರಿಂದ ಹಲವು ಮಕ್ಕಳಿಗೆ ಅವಕಾಶ ಸಿಕ್ಕಿರಲಿಲ್ಲ. ಈ ಬಾರಿ ಮತ್ತಷ್ಟು ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಅರಂಭವಾಗುತ್ತಿದ್ದು, ಹೆಚ್ಚು ಅನುಕೂಲ ಸಿಗಲಿದೆ ಎಂದು ಹೇಳಲಾಗಿದೆ.

ರಾಜ್ಯದ 1,400 ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಯನ್ನು ಪ್ರತಿ ತರಗತಿಗೆ 30ಕ್ಕೆ ಮಿತಿಗೊಳಿಸಲಾಗಿದೆ. ಇದರಿಂದ ಶಿಕ್ಷಣ ಇಲಾಖೆಗೆ ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಈ ವರ್ಷ 42 ಸಾವಿರ ಹೆಚ್ಚುವರಿ ವಿದ್ಯಾರ್ಥಿಗಳು ದಾಖಲಾಗಲಿದ್ದಾರೆ. 224 ಕ್ಷೇತ್ರಗಳಲ್ಲಿ ಶಾಲೆಗಳಿವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಿ ಉಮಾಶಂಕರ್ ತಿಳಿಸಿದ್ದಾರೆ.

ಕೊರೊನಾ ಸಂಕಷ್ಟದಿಂದಾಗಿ ಆರ್ಥಿಕ ಬಿಕ್ಕಟ್ಟಿಗೆ ತುತ್ತಾಗಿರುವ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಂದ ಸರ್ಕಾರಿ ಶಾಲೆಗಳಗೆ ಸೇರಿಸುತ್ತಿದ್ದು, ಈ ಸಂದರ್ಭದಲ್ಲಿ ಆಂಗ್ಲ ಮಾಧ್ಯಮ ಆರಂಭವಾಗಿರುವುದು ಹೆಚ್ಚು ಉಪಕಾರಿಯಾಗಿದೆ ಎಂದು ಹೇಳಾಗುತ್ತಿದೆ.


ಇದನ್ನೂ ಓದಿ: ಕಾಶ್ಮೀರ ಆಡಳಿತದಲ್ಲಿ ಮುಸ್ಲಿಮರನ್ನು ತೆಗೆದು, ಹಿಂದೂಗಳನ್ನು ನೇಮಿಸಲಾಗಿದೆ: ಫಾರೂಕ್ ಅಬ್ದುಲ್ಲಾ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights