ಕೊರೊನಾ ನಿಯಂತ್ರಿಸುವಲ್ಲಿ ವಿಫಲ : ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರ ಧರಣಿ!
ಕೊರೊನಾ ನಿಯಂತ್ರಿಸುವಲ್ಲಿ ವಿಫಲವಾದ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕರು ಇಂದು ಧರಣಿ ನಡೆಸಿದ್ದಾರೆ.
ಕೊರೊನಾ ತಡೆಗೆ ರಾಜ್ಯದಲ್ಲಿ 14 ದಿನಗಳ ಕಾಲ ಲಾಕ್ ಡೌನ್ ಘೋಷಣೆ ಮಾಡಿದರೂ ಕೊರೊನಾ ನಿಯಂತ್ರಣಕ್ಕೆ ಬರುವ ಲಕ್ಷಣಗಳೇ ಕಾಣಿಸುತ್ತಿಲ್ಲ ಬದಲಾಗಿ ನಿನ್ನೆಯಿಂದಲ್ಲೂ ದೇಶದಲ್ಲಿ ಏಕದಿನ ಕೊರೊನಾ ಪ್ರಕರಣಗಳಲ್ಲಿ ಕರ್ನಾಟಕ ಮಹಾರಾಷ್ಟ್ರವನ್ನು ಮೀರಿಸಿದೆ.
ಮಾತ್ರವಲ್ಲದೇ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು ಜನ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಪ್ರತಿನಿತ್ಯ 40 ಸಾವಿರಕ್ಕೂ ಹೆಚ್ಚು ಕೇಸ್ ಗಳು ರಾಜ್ಯದಲ್ಲಿ ದಾಖಲಾಗುತ್ತಿವೆ. ಕೊರೋನಾ ಪರಿಸ್ಥಿತಿ ನಿರ್ವಹಣೆ, ಸೋಂಕಿತರ ಪ್ರಾಣ ರಕ್ಷಣೆ, ಬೆಡ್, ಆಕ್ಸಿಜನ್, ವೆಂಟಿಲೇರ್ ಒದಗಿಸುವಲ್ಲಿ ವಿಫಲವಾಗಿರುವ ಹಾಗೂ ಬಡವರಿಗಾಗಿ ಪ್ಯಾಕೇಜ್ ಘೋಷಿಸದ ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ವಿಕಾಸಸೌಧ ಆವರಣದ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಸುತ್ತಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ನೇತೃತ್ವ ವಹಿಸಿದ್ದಾರೆ.
ಧರಣಿಯಲ್ಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ, ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಂ ಅಹಮದ್, ಮಾಜಿ ಸಚಿವರಾದ ಕೆ.ಜೆ. ಜಾರ್ಜ್, ರಮೇಶ್ ಕುಮಾರ್, ಕೃಷ್ಣಬೈರೇಗೌಡ, ಮಾಜಿ ಸಂಸದ ವಿ.ಎಸ್. ಉಗ್ರಪ್ಪ, ಎಂಎಲ್ಸಿ ಬಿ.ಕೆ. ಹರಿಪ್ರಸಾದ್ ಮತ್ತಿತರರು ಭಾಗವಹಿದ್ದರು.