ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ರಾಜನ್‌ ವಿಧಿವಶ

ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ರಾಜನ್ ಅವರು ಭಾನುವಾರ ವಿಧಿವಶರಾಗಿದ್ದಾರೆ. ಅನಾರೋಗ್ಯಕ್ಕೆ ಒಳಗಾಗಿದ್ದ 87 ವರ್ಷದ ರಾಜನ್ ಅವರಿಗೆ ಶನಿವಾರ ತೀವ್ರ ಗ್ಯಾಸ್ಟ್ರಿಕ್ ಸಮಸ್ಯೆ ಕಾಣಿಸಿಕೊಂಡಿತ್ತು. ಇದರಿಂದಾಗಿ ಆರೋಗ್ಯ ಸಮಸ್ಯೆ ಮತ್ತಷ್ಟು ಬಿಗಡಾಯಿಸಿದ್ದು, ನಿನ್ನೆ ರಾತ್ರಿ ಸಾವನ್ನಪ್ಪಿದ್ದಾರೆ.

ರಾಜನ್ ಅವರ ಹಿರಿಯ ಸಹೋದರ ನಾಗೇಂದ್ರ 2000ನೇ ಇಸವಿಯಲ್ಲಿ ನಿಧನರಾಗಿದ್ದರು.  ರಾಜನ್ ಮತ್ತು ನಾಗೇಂದ್ರ ಅವರು 1950 ರಿಂದ 1990ರ ದಶಕದ ಮೆಲೋಡಿಕಿಂಗ್ ಎನಿಸಿಕೊಂಡಿದ್ದ ಸಂಗೀತ ಸಂಯೋಜಕರಾಗಿದ್ದರು. ಇವರಿಬ್ಬರು ಸುಮಾರು 400 ಅಧಿಕ ಚಿತ್ರಗಳಿಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ಕನ್ನಡದ 200ಕ್ಕೂ ಹೆಚ್ಚು ಚಿತ್ರಗಳಿಗೆ ಸಂಗೀತ ನೀಡಿದ್ದಾರೆ.

ಮೈಸೂರಿನ ಶಿವರಾಂಪೇಟೆಯ ಮಧ್ಯಮ ವರ್ಗದ ಸಂಗೀತ ಕುಟುಂಬದಲ್ಲಿ ರಾಜನ್ ಮತ್ತು ನಾಗೇಂದ್ರ ಜನಿಸಿದರು. ಅವರ ತಂದೆ ರಾಜಪ್ಪ ಹಾರ್ಮೋನಿಯಂ ಮತ್ತು ಕೊಳಲು ವಾದಕರಾಗಿದ್ದರು. ಮೂಕ ಚಲನಚಿತ್ರಗಳಿಗೆ ಅವರು ಹಿನ್ನೆಲೆ ಸಂಗೀತ ನೀಡುತ್ತಿದ್ದರು.

1952 ರಲ್ಲಿ ಸೌಭಾಗ್ ಲಕ್ಷ್ಮಿ ಸಿನಿಮಾ ಮೂಲಕ ರಾಜನ್ -ನಾಗೇಂದ್ರ ಸ್ವತಂತ್ರ್ಯ ಸಂಗೀತ ನಿರ್ದೇಶಕರಾಗಿ ಗುರುತಿಸಿಕೊಂಡರು.

ನ್ಯಾಯವೇ ದೇವರು, ಗಂಧದ ಗುಡಿ, ದೇವರ ಗುಡಿ, ಭಾಗ್ಯವಂತರು, ಎರಡು ಕನಸು, ನಾ ನಿನ್ನಾ ಮರೆಯಲಾರೆ, ನಾ ನಿನ್ನಾ ಬಿಡಲಾರೆ, ಹೊಂಬಿಸಿಲು, ಬಯಲು ದಾರಿ, ಪಾವನಾ ಗಂಗಾ, ಗಿರಿ ಕನ್ಯೆ ಅಂತಹ ಚಿತ್ರಗಳಿಗೆ ರಾಜನ್-ನಾಗೇಂದ್ರ ಸಂಗೀತ ನೀಡಿದ್ದರು.

ಪ್ರಸಿದ್ದ ಸಾಹಿತಿಗಳಾದ ಉದಯ್ ಶಂಕರ್, ಹುಣಸೂರು ಕೃಷ್ಣಮೂರ್ತಿ, ವಿಜಯ ನಾರಸಿಂಹ, ಗೀತಪ್ರಿಯ, ಗಾಯಕರಾದ ಘಂಟಶಾಲಾ, ವಾಣಿ ಜಯರಾಮ್, ಪಿ.ಬಿ ಶ್ರೀನಿವಾಸ್, ಚಿತ್ರ, ಕಿಶೋರ್ ಕುಮಾರ್, ಎಸ್ ಬಿ ಬಾಲಸುಬ್ರಮಣ್ಯಂ, ಜಾನಕಿ,ಎಲ್ ಆರ್ ಈಶ್ವರಿ ಮುಂತಾದವರರೊಂದಿಗೆ ಕೆಲಸ ಮಾಡಿದ್ದರು.


ಇದನ್ನೂ ಓದಿ: ಚೀನಾದ ಬಗ್ಗೆ ಕೆಟ್ಟ ಅಭಿಪ್ರಾಯ ಹೊಂದಿದ 14 ದೇಶಗಳು : ಪ್ಯೂ ಸಂಶೋಧನಾ ಸಮೀಕ್ಷೆ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights