ಮುಂಬೈ ಮಾಲ್‌ನಲ್ಲಿ ಬೆಂಕಿ ಅವಘಡ: 3,500 ಜನರ ಸ್ಥಳಾಂತರ!

ಮುಂಬೈನ ಮಾಲ್‌ ಒಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಈ ವೇಳೆ ಇಬ್ಬರು ಅಗ್ನಿಶಾಮಕ ಸಿಬ್ಬಂದಿ ಗಾಯಕೊಂಡಿದ್ದು, ಪಕ್ಕದ ಕಟ್ಟದಲ್ಲಿದ್ದ 3,500 ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಎಎನ್‌ಐ ವರದಿ ಮಾಡಿದೆ.

ಮಾಲ್​ನಲ್ಲಿ ಬೆಂಕಿ ಕಾಣಿಸಿಕೊಂಡ ಬಳಿಕ ಮಾಲ್​ನಲ್ಲಿದ್ದ ಸುಮಾರು 300 ಜನರನ್ನು ರಕ್ಷಿಸಲಾಗಿದೆ.  ಬೆಂಕಿ ಅವಘಡಕ್ಕೆ ಕಾರಣ ಏನು ಎಂದು ಇನ್ನೂ ತಿಳಿದು ಬಂದಿಲ್ಲ. ಪೊಲೀಸರು ಮತ್ತು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಾಲ್​ನಲ್ಲಿ ಕಾಣಿಸಿಕೊಂಡಿದ್ದ ಬೆಂಕಿಯ ಜ್ವಾಲೆಯನ್ನು ನಂದಿಸಲು 10 ಅಗ್ನಿಶಾಮಕ ವಾಹನಗಳು ಮತ್ತು ಏಳು ಜೆಟ್ಟಿಗಳು ಸ್ಥಳಕ್ಕೆ ಧಾವಿಸಿದ್ದವು. ನಿರಂತರವಾಗಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದವು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದುವರೆಗೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ‘ಭಾರತವನ್ನು ನೋಡಿ, ಅದು ಹೊಲಸು, ಅಲ್ಲಿನ ಗಾಳಿಯು ಹೊಲಸು’: ಡೊನಾಲ್ಡ್‌ ಟ್ರಂಪ್

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights