ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ; ಕನಿಷ್ಟ ಐವರಿಗೆ ಗಂಭೀರ ಗಾಯ!

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ದಹಾನು ಪ್ರದೇಶದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ ಐದು ಜನರು ಗಾಯಗೊಂಡಿದ್ದಾರೆ. ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಳಿಗ್ಗೆ 11 ಗಂಟೆ ಸುಮಾರಿಗೆ ಡೆಹ್ನೆ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಜಿಲ್ಲಾ ವಿಪತ್ತು ವಿಭಾಗದ ಮುಖ್ಯಸ್ಥ ವಿವೇಕಾನಂದ್ ಕದಮ್ ತಿಳಿಸಿದ್ದಾರೆ.

ಸ್ಫೋಟದ ನಂತರ ಬೆಂಕಿ ಕಾಣಿಸಿಕೊಂಡಿದೆ. ದಹನು ಮತ್ತು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಂದ ಹಲವು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ ಎಂದು ಕದಮ್ ತಿಳಿಸಿದ್ದಾರೆ.

ಗಾಯಗೊಂಡ ನಾಲ್ವರನ್ನು ದಹಾನು ಆಸ್ಪತ್ರೆಯಲ್ಲಿ ಮತ್ತು ಇನ್ನೊಬ್ಬರನ್ನು ವಾಪಿಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಘಟನೆಯ ಸಮಯದಲ್ಲಿ ಸುಮಾರು 100 ಕಾರ್ಮಿಕರು ಕಾರ್ಖಾನೆಯೊಳಗೆ ಇದ್ದುದರಿಂದ ಹೆಚ್ಚಿನ ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಶಾಸಕ ವಿನೋದ್ ನಿಕೋಲ್ ಹೇಳಿದ್ದಾರೆ.

ವೆಲ್ಡಿಂಗ್ ಕೆಲಸದಿಂದ ಉಂಟಾದ ಕಿಡಿಗಳಿಂದಾಗಿ ಸ್ಫೋಟವಾಗಿರಬಹುದು ಎಂದು ಅವರು ಹೇಳಿದ್ದಾರೆ.

ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆಗಾಗಿ ಘಟನೆಯ ಬಗ್ಗೆ ತಿಳಿದ ನಂತರ ತೆಹಶೀಲ್ದಾರ್ ರಾಹುಲ್ ಸಾರಂಗ್ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಇದನ್ನೂ ಓದಿ: BJPಯಲ್ಲಿದ್ರೆ Z ಸೆಕ್ಯೂರಿಟಿ, ಇಲ್ದಿದ್ರೆ ಇಲ್ಲ; TMC ಸೇರಿದ ಮುಕುಲ್‌ ರಾಯ್‌ Z ರಕ್ಷಣೆ ಕಸಿದುಕೊಂಡ ಕೇಂದ್ರ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights