ಮಾಜಿ ಪ್ರಧಾನ ಮಂತ್ರಿ ಹೆಚ್ ಡಿ ದೇವೇಗೌಡ ಹಾಗೂ ಪತ್ನಿಗೆ ಕೊರೊನಾ : ಮಣಿಪಾಲ್ ನಲ್ಲಿ ಚಿಕಿತ್ಸೆ!

ಮಹಾಮಾರಿ ಕೊರೊನಾ ಮಾಜಿ ಪ್ರಧಾನ ಮಂತ್ರಿ ಹೆಚ್ ಡಿ ದೇವೇಗೌಡ ಅವರಿಗೂ ತಗುಲಿದ್ದು ಅವರ ಸಂಪರ್ಕದಲ್ಲಿದ್ದ ಎಲ್ಲರಿಗೂ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳುವಂತೆ ಸೂಚಿಸಲಾಗಿದೆ.

ಹೌದು… ತಮಗೆ ಹಾಗೂ ತಮ್ಮ ಪತ್ನಿ ಚೆನ್ನಮ್ಮ ಅವರಿಗೆ ಕೊರೊನಾ ಸೋಂಕು ತಗುಲಿರುವ ಬಗ್ಗೆ ಸ್ವತ: ಮಾಜಿ ಪ್ರಧಾನ ಮಂತ್ರಿ ಹೆಚ್ ಡಿ ದೇವೇಗೌಡ ಅವರು ಟ್ವೀಟ್ ಮೂಲಕ ಖಾತ್ರಿಪಡಿಸಿದ್ದಾರೆ. ಮಾತ್ರವಲ್ಲದೇ ತಮ್ಮನ್ನು ಸಂಪರ್ಕಿಸಿದ ಎಲ್ಲರೂ ಕೊರೊನಾ ಟೆಸ್ಟ್ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಈ ವಿಚಾರ ಸದ್ಯ ಕುಟುಂಬದವರನ್ನು ಆತಂಕಕ್ಕೆ ದೂಡಿದೆ. ದೇವೇಗೌಡರ ಅಳಿಯ ಅಳಿಯ ಹಾಗೂ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ. ಮಂಜುನಾಥ್ ಅವರೂ ಕೂಡ ಮಣಿಪಾಲ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ.

ಹೆಚ್.ಡಿ ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮ ಅವರಿಗೂ ಕೊರೊನಾ ಸೋಂಕು ಹರಡಿರುವುದು ದೃಢಪಟ್ಟಿದ್ದು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದವರೆಲ್ಲರನ್ನೂ ಕ್ವಾರಂಟೈನ್​ಗೆ ಒಳಗಾಗುವಂತೆ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಮಗಳು ಶೈಲಜಾ, ಮನೆಗೆಲಸದವರು, ಗನ್ ಮ್ಯಾನ್​ಗಳು, ಆಪ್ತ ಸಹಾಯಕರಿಗೆ ಕೋವಿಡ್ ಪರೀಕ್ಷೆಗೆ ಒಳಪಡಿಸಲು ವೈದ್ಯರ ತಂಡವೊಂದು ಸದ್ಯದಲ್ಲೇ ಪದ್ಮನಾಭನಗರದಲ್ಲಿರುವ ಪಿಎಂ ನಿವಾಸಕ್ಕೆ ತೆರಳಲಿದೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights