ಕಾಂಗ್ರೆಸ್‌ ಪಕ್ಷಕ್ಕೆ ಗಾಂಧಿ ಕುಟುಂಬ ಆಧಾರ್ ಕಾರ್ಡ್‌ ಇದ್ದಂತೆ: ಸಂಜಯ್‌ ರಾವತ್

ಗಾಂಧಿ ಕುಟುಂಬವು ಕಾಂಗ್ರೆಸ್‌ ಪಕ್ಷಕ್ಕೆ ಆಧಾರ್ ಕಾರ್ಡ್‌ ಇದ್ದಂತೆ, ಆ ಕುಟುಂಬದವರನ್ನು ಹೊರತು ಪಡಿಸಿ ಬೇರೆ ಯಾರೂ ಕಾಂಗ್ರೆಸ್‌ ಪಕ್ಷವನ್ನು ಮುನ್ನಡೆಸಲು ಸಾಧ್ಯವಿಲ್ಲ ಎಂದು ಶಿವಸೇನಾ ಮುಖಂಡ ಸಂಜಯ್ ರಾವತ್ ಹೇಳಿದ್ದಾರೆ.

ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಆಗಿರಬಹುದು, ಇವರೇ ಕಾಂಗ್ರೆಸ್‌ ಪಕ್ಷದ ಆಧಾರ್ ಕಾರ್ಡ್‌ ಇದ್ದಂತೆ. ರಾಹುಲ್ ಗಾಂಧಿಯವರು ಪಕ್ಷವನ್ನು ಚೆನ್ನಾಗಿ ಮುನ್ನಡೆಸಿಕೊಂಡು ಹೋಗಿದ್ದಾರೆ. ರಾಜಸ್ತಾನ, ಮಧ್ಯ ಪ್ರದೇಶ, ಛತ್ತೀಸ್ ಗಢ ವಿಧಾನಸಭೆ ಚುನಾವಣೆಗಳಲ್ಲಿ ಪಕ್ಷ ಅಧಿಕಾರಕ್ಕೆ ಬರಲು ಕಾರಣರಾಗಿದ್ದಾರೆ. ಆದರೆ ಕಳೆದ ಲೋಕಸಭೆ ಚುನಾವಣೆ ನಂತರ ಅವರು ಅಧ್ಯಕ್ಷ ಸ್ಥಾನವನ್ನು ತ್ಯಜಿಸಿದರು, ಇಂದಿಗೂ ಕೂಡ ಕಾಂಗ್ರೆಸ್ ನ್ನು ಮುನ್ನಡೆಸಲು ರಾಹುಲ್ ಗಾಂಧಿಯವರೇ ಸಮರ್ಥರು ಎಂದು ನಾನು ನಂಬುತ್ತೇನೆ ಎಂದು ಸಂಜಯ್ ರಾವತ್ ಹೇಳಿದ್ದಾರೆ.

ದೇಶದ ಪ್ರತಿ ಹಳ್ಳಿಗಳಲ್ಲಿ ಸಕ್ರಿಯವಾಗಿರುವ ಪಕ್ಷ ಕಾಂಗ್ರೆಸ್. ಕಾಂಗ್ರೆಸ್‌ ಹೊರತು ಪಡಿಸಿದಂತೆ ಮತ್ತಾವ ಪಕ್ಷವೂ ಅಷ್ಟು ಸಕ್ರಿಯವಾಗಿಲ್ಲ. ಇಂದಿನ ರಾಜಕೀಯ ಸ್ಥಿತಿಗತಿಯಲ್ಲಿ ಅದು ದುರ್ಬಲವಾಗಿದ್ದರೂ ಕೂಡ ಅದು ಆಂತರಿಕ ಭಿನ್ನಾಭಿಪ್ರಾಯವನ್ನು ಬಗೆಹರಿಸಿಕೊಳ್ಳಬೇಕು. ಕಾಂಗ್ರೆಸ್ ಪಕ್ಷವೊಂದೇ ಪ್ರಮುಖ ವಿರೋಧ ಪಕ್ಷವಾಗಿರುವುದು. ಆಡಳಿತ ಪಕ್ಷಕ್ಕೆ ಒಂದು ಬಲಿಷ್ಟವಾದ ಪ್ರತಿಪಕ್ಷ ಬೇಕು. ಕಾಂಗ್ರೆಸ್ ವಿರೋಧ ಪಕ್ಷದ ಸ್ಥಾನವನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು ಎಂದರು.


Read AlsoFact Check: ಹಜ್ ಯಾತ್ರೆಯ ಸಂದರ್ಭದಲ್ಲಿ ನಟ ಅಮೀರ್ ಖಾನ್ಅವರು ಲಷ್ಕರ್‌-ಎ-ತೈಬಾ ಭಯೋತ್ಪಾದಕರನ್ನು ಭೇಟಿಯಾಗಿದ್ದರೇ?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights