ನಾಡಿನೆಲ್ಲಡೆ ಕಳೆಗಟ್ಟಿದ ಗೌರಿ ಗಣೇಶ ಹಬ್ಬ – ಕೊರೊನಾ ನಿಯಮಗಳನ್ನು ಗಾಳಿಗೆ ತೂರಿದ ಜನ!

ನಾಡಿನೆಲ್ಲೆಡೆ ಗೌರಿ ಗಣೇಶ ಹಬ್ಬ ಕಳೆಕಟ್ಟಿದ್ದು ಮಾರುಕಟ್ಟೆಗಳಲ್ಲಿ ಜನ ಸಾಗರವೇ ನೆರಿದಿದೆ. ಕೊರೊನಾ ನಿಯಮಗಳನ್ನು ಗಾಳಿಗೆ ತೂರಿ ಜನ ಮಾರುಕಟ್ಟೆಯಲ್ಲಿ ಹೂವು, ಹಣ್ಣು, ತರಕಾರಿಗೆ ಖರೀದಿಗೆ ಮುಗಿಬಿದ್ದಿದ್ದಾರೆ.

ಇಂದು ನಾಳೆ ಗೌರಿ ಗಣೇಶ ಹಬ್ಬದ ಆಚರಣೆಗಾಗಿ ಅಗತ್ಯ ವಸ್ತುಗಳ ಖರೀದಿಗೆ ಜನ ಮಾರುಕಟ್ಟೆಗಳಲ್ಲಿ ಅಧಿಕ ಸಂಖ್ಯೆಯಲ್ಲಿ ಸೇರಿದ್ದಾರೆ. ಕೆಆರ್ ಮಾರುಕಟ್ಟೆಯಲಂತೂ ಎತ್ತ ನೋಡಿದ್ರೂ ಜನ ಗುಂಪು ಗುಂಪಾಗಿರುವುದು ಕಂಡು ಬರುತ್ತದೆ. ಸಾಮಾಜಿಕ ಅಂತರವಿಲ್ಲ. ಮಾಸ್ಕ್ ಇಲ್ಲದೇ ಓಡಾಡುವಂತವರಿಗೆ ಬಿಬಿಎಂಪಿ ಸ್ಥಳದಲ್ಲೇ ದಂಡ ಹಾಕಿ ಪಾಠ ಕಲಿಸುತ್ತಿದೆ.

ಮಾಸ್ಕ್ ಹಾಕಿಕೊಳ್ಳದವರಿಗೆ ದಂಡ ವಸೂಲಿ ಮಾಡಲಾಗುತ್ತಿದೆ. ಮಾರುಕಟ್ಟೆಯಲ್ಲಿ ಕಿಕ್ಕಿರಿದು ಜನ ತುಂಬಿದ್ದು ಸಾಮಾಜಿಕ ಅಂತರ ಮಾಯವಾಗಿದೆ.

ಬೆಂಗಳೂರಿನ ವಿವಿಧ ಮಾರುಕಟ್ಟೆಗಳಲ್ಲಿ ವ್ಯಾಪಾರ ವಹಿವಾಟು ಜೋರಾಗಿದ್ದು ಕೆ.ಆರ್‌.ಮಾರುಕಟ್ಟೆ, ಮಡಿವಾಳ, ಮಲ್ಲೇಶ್ವರಂ, ಗಾಂಧಿ ಬಜಾರ್‌, ಜಯನಗರ ಸೇರಿದಂತೆ ನಗರದ ನಾನಾ ಮಾರುಕಟ್ಟೆಗಳಲ್ಲಿ ಹೂವು, ಹಣ್ಣು, ಬೂದಕುಂಬಳ, ನಿಂಬೆ ಹಣ್ಣುಗಳ ಖರೀದಿ ಜೋರಾಗಿ ನಡೆದಿದೆ.

ಕೊರೊನಾ ಹರಡುವುದನ್ನ ತಡೆಗಟ್ಟಲು ಸರ್ಕಾರ ಕೆಲ ಕೊರೊನಾ ನಿಯಮಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಪಾಲಿಸುವಂತೆ ಆದೇಶಿಸಿದೆ. ಆದರೆ ಮನೆಯಲ್ಲಿ ಗೌರಿ ಗಣೇಶ ಪ್ರತಿಷ್ಠಾಪನೆಗೆ ರಾಜ್ಯ ಸರ್ಕಾರ ಅನುಮತಿ ನೀಡಿದ್ದು ಜನ ಇಂದು ಮಾರುಕಟ್ಟೆಗಳತ್ತ ನೂರಾರು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ಹಬ್ಬಕ್ಕೆ ಬೇಕಾದ ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದಿದ್ದು ಕೊರೊನಾ ಮತ್ತಷ್ಟು ಹರಡುವ ಭೀತಿ ಹೆಚ್ಚಾಗಿದೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights