ಹೆಣ್ಣುಮಕ್ಕಳ ವಿದ್ಯಾಭ್ಯಾಸ: ವಿದ್ಯಾರ್ಥಿನಿಯರಿಗೆ ಪ್ರತಿದಿನ 100 ರೂ. ಪ್ರೋತ್ಸಾಹಧನ ನೀಡುವುದಾಗಿ ಅಸ್ಸಾಂ ಸರ್ಕಾರ ಘೋಷಣೆ!

ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವುದನ್ನು ಉತ್ತೇಜಿಸುವ ಉದ್ದೇಶದಿಂದ ಅಸ್ಸಾಂ ರಾಜ್ಯ ಸರ್ಕಾರ ಹೊಸ ಯೋಜನೆಯನ್ನು ಘೋಷಿಸಿದೆ. ಶಾಲೆಗೆ ಹಾಜರಾಗುವ ಪ್ರತಿ ವಿದ್ಯಾರ್ಥಿನಿಯರಿಗೂ ಪ್ರತಿ ದಿನ 100 ರೂ ಪ್ರೋತ್ಸಾಹಧನ ನೀಡುವುದಾಗಿ ಶಿಕ್ಷಣ ಸಚಿವ ಹಿಮಂತ ಬಿಸ್ವಾ ಶರ್ಮ ಘೋಷಿಸಿದ್ದಾರೆ.

ಪದವಿ ಹಾಗೂ ಸ್ನಾತ್ತಕೋತ್ತರ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ ಪ್ರತಿ ವರ್ಷದ ಜನವರಿ ಅಂತ್ಯದೊಳಗೆ 1,500 ಹಾಗೂ 2,000 ರೂಗಳನ್ನು ಜಮೆ ಮಾಡಲಾಗುವುದು. ಈ ಹಣವನ್ನು ಬಳಸಿಕೊಂಡು ವಿದ್ಯಾರ್ಥಿಗಳು ಪುಸ್ತಕಗಳನ್ನು ಖರೀದಿಸಬಹುದು ಎಂದು ಅವರು ಹೇಳಿದ್ದಾರೆ.

12ನೇ ತರಗತಿ ಬೋರ್ಡ್ ಪರೀಕ್ಷೆಗಳಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿನಿಯರಿಗೆ ದ್ವಿಚಕ್ರ ವಾಹನ ನೀಡಲಾಗುತ್ತಿದೆ. ಇದರ ಜೊತೆಗೆ ಧನ ಸಹಾಯವನ್ನೂ ನೀಡುವುದು ಹೆಣ್ಣುಮಕ್ಕಳ ವಿದ್ಯಾಭ್ಯಾಸಕ್ಕೆ ಮತ್ತಷ್ಟು ನೆರವಾಗಲಿದೆ ಎಂದು ಸಚಿವರು ಹೇಳಿದರು.

ಕಳೆದ ವರ್ಷದ ಬೋರ್ಡ್ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಗೊಂಡ 22,245 ವಿದ್ಯಾರ್ಥಿನಿಯರಿಗೆ ದ್ವಿಚಕ್ರ ವಾಹನ ವಿತರಿಸಲು ಸರಕಾರ ರೂ 144.30 ಕೋಟಿ ವೆಚ್ಚ ಮಾಡಲಿದೆ ಎಂದು ಅವರು ಹೇಳಿದ್ದಾರೆ.

2018ರಲ್ಲಿ 12ನೇ ತರಗತಿಯಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಗೊಂಡ 5,000 ವಿದ್ಯಾರ್ಥಿನಿಯರು ಹಾಗೂ 2019ರಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಗೊಂಡ 10,000 ವಿದ್ಯಾರ್ಥಿನಿಯರಿಗೆ ಮುಂದಿನ ತಿಂಗಳು ದ್ವಿಚಕ್ರ ವಾಹನಗಳನ್ನು ಒದಗಿಸಲಾಗುವುದು ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: 2020ರಲ್ಲಿ ದಾಖಲೆಯ ನಿರುದ್ಯೋಗ ಹಂತಕ್ಕೆ ಭಾರತ; ಮೋದಿ ಸರ್ಕಾರವೆಷ್ಟು ಕಾರಣ?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights